Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021 ರದ್ದುಗೊಳಿಸಿಲ್ಲ ಮುಂದೂಡಲಾಗಿದೆ: ರಾಜೀವ್ ಶುಕ್ಲಾ ಸ್ಪಷ್ಟನೆ

IPL 2021 has been postponed not cancelled, Rajeev Shukla clarification

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಐಪಿಎಲ್ 2021ರ ವಿಚಾರವಾಗಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ಐಪಿಎಲ್ 2021ಅನ್ನು ಸದ್ಯಕ್ಕೆ ಮುಂದೂಡಲಾಗಿದೆ, ಸಂಪೂರ್ಣವಾಗಿ ರದ್ದುಗೊಳಿಸಿಲ್ಲ. ಸೂಕ್ತ ಸಮಯವನ್ನು ನೋಡಿಕೊಂಡು ಮುಂದಿನ ಪಂದ್ಯಗಳನ್ನು ಆಯೋಜಿಸಲಾಗುತ್ತದೆ ಎಂದು ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ.

ಐಪಿಎಲ್ 14ನೇ ಆವೃತ್ತಿಯಲ್ಲಿ ಭಾನುವಾರದವರೆಗೆ ಒಟ್ಟು 29 ಪಂದ್ಯಗಳು ಯಶಸ್ವಿಯಾಗಿ ಆಯೋಜನೆಯಾಗಿದೆ. ಸೋಮವಾರದ ಪಂದ್ಯಕ್ಕೂ ಮುನ್ನ ಕೆಕೆಆರ್ ತಂಡದ ಇಬ್ಬರು ಆಟಗಾರರು ಕೊರೊನಾ ವೈರಸ್‌ಗೆ ತುತ್ತಾಗಿರುವುದು ಬೆಳಕಿಗೆ ಬಂದಿತ್ತು. ಹಾಗಾಗಿ ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಬಳಿಕ ಮಂಗಳವಾರ ಮತ್ತೆ ಎರಡು ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾದ ಕಾರಣ ಟೂರ್ನಿಯನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

"ನಾವು ಮತ್ತು ಎಲ್ಲಾ ಫ್ರಾಂಚೈಸಿಗಳು ಆಟಗಾರರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇವೆ. ನಾವು ಎಲ್ಲಾ ಫ್ರಾಂಚೈಸಿ ಜೊತೆಗೂ ಮಾತುಕತೆ ನಡೆಸಿದ್ದೇವೆ. ಹೆಚ್ಚಿನ ಪ್ರಕರಣಗಳು ಇಲ್ಲ. ಒಮದು ಅಥವಾ ಎರಡು ಫ್ರಾಂಚೈಸಿಗಳಿಗೆ ಮಾತ್ರವೇ ಒರಿಣಾಮ ಬೀರಿದೆ. ಎಲ್ಲಾ ತಂಡಗಳಲ್ಲೂ ನಿರಂತರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಉಳಿದ ಎಲ್ಲಾ ಆಟಗಾರರು ಕೂಡ ಸುರಕ್ಷಿತವಾಗಿದ್ದಾರೆ. ಪರಿಸ್ಥಿತಿ ತುಂಬಾ ಕೆಟ್ಟದಾಗಿಲ್ಲ. ಆದರೆ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ" ಎಂದು ಶುಕ್ಲ ಹೇಳಿದ್ದಾರೆ.

"ನಾನು ಒಂದು ವಿಚಾರವನ್ನು ಸ್ಪಷ್ಟವಾಗಿ ತಿಳಿಸುತ್ತೇನೆ. ಐಪಿಎಲ್ 2021 ರದ್ದಾಗಿಲ್ಲ, ಅದನ್ನು ಅಮಾನತಿಗೊಳಿಸಲಾಗಿದೆ, ಮುಂದೂಡಲಾಗಿದೆ. ಹಾಗಾಗಿ ಅದು ಮುಂದೆ ನಡೆಯಲಿದೆ. ಉಳಿದ ಪಂದ್ಯಗಳು ಇದೇ ವರ್ಷ ನಡೆಯಲಿದೆ. ಪರಿಸ್ಥಿತಿ ಸುಧಾರಿಸಿದಾಗಿ ಆ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ" ಎಂದಿದ್ದಾರೆ ರಾಜೀವ್ ಶುಕ್ಲ

Story first published: Tuesday, May 4, 2021, 21:18 [IST]
Other articles published on May 4, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+