ಐಪಿಎಲ್ 2021: ಟೂರ್ನಿಯಲ್ಲಿ ಅತಿ ಕೆಟ್ಟ ಪ್ರದರ್ಶನ ನೀಡಿದ 11 ಆಟಗಾರರು ಇವರೇ ನೋಡಿ!

ಸಾಕಷ್ಟು ದೊಡ್ಡ ಮಟ್ಟದ ಚರ್ಚೆ ಮತ್ತು ಸುದ್ದಿಗೆ ಕಾರಣವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಅಕ್ಟೋಬರ್ 15ರ ಶುಕ್ರವಾರದಂದು ನಡೆದ ಫೈನಲ್ ಪಂದ್ಯದ ಮೂಲಕ ತೆರೆಬಿದ್ದಿದೆ. ದುಬೈ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ ಮತ್ತು ಮೊಯಿನ್ ಅಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.

ಭಾರತ ಅಂಡರ್-19 ಕ್ರಿಕೆಟ್ ತಂಡದ ಮಾಜಿ ನಾಯಕ ಅವಿ ಬರೋಟ್ ಇನ್ನಿಲ್ಲಭಾರತ ಅಂಡರ್-19 ಕ್ರಿಕೆಟ್ ತಂಡದ ಮಾಜಿ ನಾಯಕ ಅವಿ ಬರೋಟ್ ಇನ್ನಿಲ್ಲ

ಹೀಗೆ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಯುವ ಆಟಗಾರ ವೆಂಕಟೇಶ್ ಐಯ್ಯರ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಕ್ರಿಕೆಟ್ ಅಭಿಮಾನಿಗಳ ಮತ್ತು ಹಲವಾರು ಮಾಜಿ ಕ್ರಿಕೆಟಿಗರ ಮನಸ್ಸನ್ನು ಗೆದ್ದಿದ್ದಾರೆ. ಇವರ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ ಕೂಡ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಹೀಗೆ ಋತುರಾಜ್ ಗಾಯಕ್ವಾಡ್, ಹರ್ಷಲ್ ಪಟೇಲ್ ಮತ್ತು ವೆಂಕಟೇಶ್ ಐಯ್ಯರ್ ಸೇರಿದಂತೆ ಇನ್ನೂ ಮುಂತಾದ ಹಲವಾರು ಯುವ ಕ್ರಿಕೆಟಿಗರು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮುಂಬರುವ ದಿನಗಳಲ್ಲಿ ಅಂತರರಾಷ್ಟ್ರೀಯ ತಂಡಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಭರವಸೆಯನ್ನು ಮೂಡಿಸಿದ್ದಾರೆ.

ಐಪಿಎಲ್ 2021: ಅತಿಹೆಚ್ಚು ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಟಾಪ್ 5 ಡೇಂಜರಸ್ ಬ್ಯಾಟ್ಸ್‌ಮನ್‌ಗಳ ಪಟ್ಟಿಐಪಿಎಲ್ 2021: ಅತಿಹೆಚ್ಚು ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಟಾಪ್ 5 ಡೇಂಜರಸ್ ಬ್ಯಾಟ್ಸ್‌ಮನ್‌ಗಳ ಪಟ್ಟಿ

ಹೀಗೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಒಂದೆಡೆ ಕೆಲ ಯುವ ಆಟಗಾರರು ಉತ್ತಮ ಪ್ರದರ್ಶನವನ್ನು ನೀಡಿ ಮಿಂಚಿದರೆ, ಮತ್ತೊಂದೆಡೆ ಕೆಲ ಅನುಭವಿ ಆಟಗಾರರು ಮತ್ತು ಯುವ ಕ್ರಿಕೆಟಿಗರು ಕೂಡ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದಾರೆ. ಅಂತಹ ಕೆಟ್ಟ ಪ್ರದರ್ಶನ ನೀಡಿದ 11 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

ಮನನ್ ವೊಹ್ರಾ, ಡೇವಿಡ್ ವಾರ್ನರ್ ಮತ್ತು ಸುರೇಶ್ ರೈನಾ

ಮನನ್ ವೊಹ್ರಾ, ಡೇವಿಡ್ ವಾರ್ನರ್ ಮತ್ತು ಸುರೇಶ್ ರೈನಾ

ರಾಜಸ್ಥಾನ್ ರಾಯಲ್ಸ್ ತಂಡದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ ಮನನ್ ವೊಹ್ರಾ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದ್ದಾರೆ. 4 ಪಂದ್ಯಗಳಲ್ಲಿ ಕಣಕ್ಕಿಳಿದ ಮನನ್ ವೊಹ್ರಾ 42 ರನ್ ಮಾತ್ರ ಗಳಿಸಿದ್ದಾರೆ. ಇನ್ನು ಟೂರ್ನಿಯಲ್ಲಿ ಮನನ್ ವೊಹ್ರಾ ಗಳಿಸಿರುವ ಅಧಿಕ ರನ್ 14.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಆರಂಭದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕನಾಗಿದ್ದ ಡೇವಿಡ್ ವಾರ್ನರ್ ಕಳಪೆ ಪ್ರದರ್ಶನದಿಂದ ನಾಯಕತ್ವ ಕಳೆದುಕೊಂಡರು ಮತ್ತು ಕೆಲ ಪಂದ್ಯಗಳ ನಂತರ ತಂಡದಿಂದಲೂ ಹೊರಬಿದ್ದರು. ಹೀಗೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 195 ರನ್ ಗಳಿಸಿ ನಿರಾಸೆ ಮೂಡಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸುರೇಶ್ ರೈನಾ ಕೂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮಂಕಾಗಿದ್ದಾರೆ. ಸುರೇಶ್ ರೈನಾ ಕಳಪೆ ಪ್ರದರ್ಶನ ನೀಡಿದ ಕಾರಣದಿಂದಲೇ ಟೂರ್ನಿಯ ಪ್ಲೇ ಆಫ್ ಮತ್ತು ಫೈನಲ್‌ನ ಮಹತ್ವದ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದೇ ತಂಡದಿಂದ ಹೊರಬಿದ್ದಿದ್ದರು. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿರುವ ಸುರೇಶ್ ರೈನಾ ಕೇವಲ 160 ರನ್ ಗಳಿಸಿ ಮಂಕಾಗಿದ್ದಾರೆ.

ನಿಕೋಲಸ್ ಪೂರನ್, ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ

ನಿಕೋಲಸ್ ಪೂರನ್, ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ

ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ನಿಕೋಲಸ್ ಪೂರನ್ ಅವರಿಗೆ ಪಂಜಾಬ್ ಕಿಂಗ್ಸ್ ತಂಡ ದ್ವಿತೀಯ ಭಾಗದಲ್ಲಿಯೂ ನಂಬಿ ಅವಕಾಶಗಳನ್ನು ನೀಡಿತು. ಆದರೆ ಈ ನಂಬಿಕೆಯನ್ನು ಉಳಿಸಿಕೊಳ್ಳದ ನಿಕೊಲಸ್ ಪೂರನ್ ಟೂರ್ನಿಯಲ್ಲಿ ಅಕ್ಷರಶಃ ಕಳಪೆ ಪ್ರದರ್ಶನ ನೀಡಿದ್ದಾರೆ. ಟೂರ್ನಿಯಲ್ಲಿ ಒಟ್ಟು 12 ಪಂದ್ಯಗಳನ್ನಾಡಿರುವ ಪೂರನ್ ಕೇವಲ 85 ರನ್ ಗಳಿಸಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ಹಾರ್ದಿಕ್ ಪಾಂಡ್ಯ ಕೂಡ ಮಂಕಾಗಿದ್ದಾರೆ. 12 ಪಂದ್ಯಗಳನ್ನಾಡಿದ ಹಾರ್ದಿಕ್ ಪಾಂಡ್ಯ ಕೇವಲ 127 ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲದೆ ಆಲ್ ರೌಂಡರ್ ಆಟಗಾರ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯಾ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಒಂದೇ ಒಂದು ಬಾಲ್ ಕೂಡ ಬೌಲಿಂಗ್ ಮಾಡಲಿಲ್ಲ.

ಇನ್ನು ಮುಂಬೈ ಇಂಡಿಯನ್ಸ್ ತಂಡದ ಮತ್ತೋರ್ವ ಆಟಗಾರ ಕೃನಾಲ್ ಪಾಂಡ್ಯ ಕೂಡ ಈ ಬಾರಿಯ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದಾರೆ. ತಂಡದ ಪ್ರಮುಖ ಆಲ್ ರೌಂಡರ್ ಎನಿಸಿಕೊಂಡಿರುವ ಕೃನಾಲ್ ಪಾಂಡ್ಯ 13 ಪಂದ್ಯಗಳಲ್ಲಿ 143 ರನ್ ಗಳಿಸಿದ್ದಾರೆ ಮತ್ತು ಕೇವಲ 5 ವಿಕೆಟ್ ಪಡೆಯುವಲ್ಲಿ ಮಾತ್ರ ಶಕ್ತರಾಗಿದ್ದಾರೆ.

ಇಯಾನ್ ಮಾರ್ಗನ್, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ

ಇಯಾನ್ ಮಾರ್ಗನ್, ಹರ್ಭಜನ್ ಸಿಂಗ್ ಮತ್ತು ಇಶಾಂತ್ ಶರ್ಮಾ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ಅವರ ಪ್ರದರ್ಶನವನ್ನು ನೋಡಿದರೆ, ಇಯಾನ್ ಮಾರ್ಗನ್ ನೇತೃತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಿತಾ ಅಥವಾ ಕೋಲ್ಕತಾ ನೈಟ್ ರೈಡರ್ಸ್ ತಂಡದ ಉಳಿದ ಆಟಗಾರರ ನೆರವಿನಿಂದ ನಾಯಕ ಇಯಾನ್ ಮಾರ್ಗನ್ ಫೈನಲ್ ಪ್ರವೇಶಿಸಿದರಾ ಎಂಬ ಗೊಂದಲ ತಲೆಯೊಳಗೆ ಹುಟ್ಟದೇ ಇರದು. ಏಕೆಂದರೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ನೀಡಿರುವ ಪ್ರದರ್ಶನ ಆ ರೀತಿಯದ್ದು. ಟೂರ್ನಿಯಲ್ಲಿ ಒಟ್ಟು 17 ಪಂದ್ಯಗಳನ್ನಾಡಿರುವ ಇಯಾನ್ ಮಾರ್ಗನ್ ಕೇವಲ 133 ರನ್ ಗಳಿಸಿದ್ದಾರೆ.

ಈ ಹಿಂದಿನ ಹಲವಾರು ಐಪಿಎಲ್ ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದ ಟರ್ಬೋನೇಟರ್ ಹರ್ಭಜನ್ ಸಿಂಗ್ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ 3 ಪಂದ್ಯಗಳನ್ನಾಡಿದ್ದು ಯಾವುದೇ ವಿಕೆಟ್ ಪಡೆಯದೇ ಮಂಕಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಶಾಂತ್ ಶರ್ಮ ಕೂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ 3 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಈ 3 ಪಂದ್ಯಗಳ ಪೈಕಿ ಇಶಾಂತ್ ಶರ್ಮಾ ಕೇವಲ 1 ವಿಕೆಟ್ ಪಡೆಯುವಲ್ಲಿ ಶಕ್ತರಾಗಿದ್ದು ಕಳಪೆ ಪ್ರದರ್ಶನ ನೀಡಿದ್ದಾರೆ.

ಚೀನಾ ಗಡಿಯಲ್ಲಿ ಕಟ್ಟೆಚ್ಚರ:ಭಾರತ ಸೇನೆಗೆ ಆಪದ್ಭಾಂದವನಾದ ಹೆರಾನ್ ಡ್ರೋನ್ | Oneindia Kannada
ಜೇ ರಿಚರ್ಡ್ಸನ್ ಮತ್ತು ಮುರುಗನ್ ಅಶ್ವಿನ್

ಜೇ ರಿಚರ್ಡ್ಸನ್ ಮತ್ತು ಮುರುಗನ್ ಅಶ್ವಿನ್

ಕಳೆದ ಬಿಗ್ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕಾರಣಕ್ಕೆ ಪಂಜಾಬ್ ಕಿಂಗ್ಸ್ ತಂಡ ಜೇ ರಿಚರ್ಡ್ಸನ್ ಅವರನ್ನು ಬರೋಬ್ಬರಿ 14 ಕೋಟಿಗೆ ಖರೀದಿಸಿತು. ಆದರೆ ರಿಚರ್ಡ್ಸನ್ ಪಡೆದ ಹಣಕ್ಕೂ ನೀಡಿದ ಪ್ರದರ್ಶನಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ 3 ಪಂದ್ಯಗಳನ್ನಾಡಿದ ಜೇ ರಿಚರ್ಡ್ಸನ್ ಕೇವಲ 3 ವಿಕೆಟ್ ಪಡೆದಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ಮತ್ತೋರ್ವ ಬೌಲರ್ ಮುರುಗನ್ ಅಶ್ವಿನ್ ಕೂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರ ಪಟ್ಟಿ ಸೇರಿಕೊಂಡಿದ್ದಾರೆ. ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಿದ ಮುರುಗನ್ ಅಶ್ವಿನ್ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Saturday, October 16, 2021, 20:11 [IST]
Other articles published on Oct 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X