ಐಪಿಎಲ್ 2021 : ಎಂ ಎಸ್ ಧೋನಿ ವಿಶೇಷ ದಾಖಲೆ ಮುರಿದ ರೋಹಿತ್ ಶರ್ಮಾ
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂಬೈ ಇಂಡಿಯನ್ಸ್ ತಂಡದ ಯೋಜನೆಯಂತೆ ನಡೆಯುತ್ತಿಲ್ಲ. ಟೂರ್ನಿಯಲ್ಲಿ ಈಗಾಗಲೇ ಒಟ್ಟು 5 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ತಂಡ ಗೆದ್ದಿರುವುದು ಮಾತ್ರ ಕೇವಲ 2 ಪಂದ್ಯಗಳಲ್ಲಿ. 5 ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ಸ್ ಆಗಿರುವ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕೊಂಚ ಮಂಕಾದಂತಿದೆ. ಮುಂಬೈ ಇಂಡಿಯನ್ಸ್ ತಂಡದ ಪರ ಆಟಗಾರರು ಕಳೆದ ಆವೃತ್ತಿಗಳಲ್ಲಿ ತೋರಿದಂಥ ಪ್ರದರ್ಶನವನ್ನು ಈ ಆವೃತ್ತಿಯಲ್ಲಿ ತೋರುತ್ತಿಲ್ಲ. ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಪ್ರತಿ ಪಂದ್ಯದಲ್ಲಿಯೂ ಸಹ ಕೈಕೊಡುತ್ತಿದೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮುಂಬೈ ತಂಡದ ಮೊತ್ತ ಯಾವ ಪಂದ್ಯದಲ್ಲಿಯೂ ಸಹ 160 ರನ್ ದಾಟಿಲ್ಲ. ಹೀಗೆ ಹಲವಾರು ಸಮಸ್ಯೆಗಳನ್ನೊಳಗೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಮತ್ತೆ ಯಶಸ್ಸಿನ ಹಾದಿ ಹಿಡಿಯಲು ಹಾತೊರೆಯುತ್ತಿದೆ.
ಶುಕ್ರವಾರ ( ಏಪ್ರಿಲ್ 23 ) ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ಸಹ ಮುಂಬೈ ಸೋಲುಂಡಿತು. ಆದರೆ ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. 52 ಎಸೆತಗಳಿಗೆ 63 ರನ್ ಬಾರಿಸಿದ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಅತಿಹೆಚ್ಚು ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿದ ನಾಯಕರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಧೋನಿಯನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
ಅತಿಹೆಚ್ಚು ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿರುವ ಐಪಿಎಲ್ ತಂಡಗಳ ನಾಯಕರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

1. ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ 38 ಬಾರಿ ನಾಯಕನಾಗಿ 50ಕ್ಕಿಂತ ಅಧಿಕ ರನ್ ಬಾರಿಸಿದ್ದಾರೆ.

2. ಗೌತಮ್ ಗಂಭೀರ್
ಕೊಲ್ಕತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ನಾಯಕನಾಗಿ 31 ಬಾರಿ 50ಕ್ಕಿಂತ ಅಧಿಕ ರನ್ ಬಾರಿಸಿದ್ದಾರೆ.

3. ಡೇವಿಡ್ ವಾರ್ನರ್
ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ 26 ಬಾರಿ 50ಕ್ಕಿಂತ ಅತ್ಯಧಿಕ ರನ್ ಬಾರಿಸಿದ್ದಾರೆ.

4. ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ನಾಯಕನಾಗಿ 23 ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ.

5. ಎಂಎಸ್ ಧೋನಿ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕನಾಗಿ 22 ಬಾರಿ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications