ಐಪಿಎಲ್: ವಿರಾಟ್ , ಧವನ್ & ರೋಹಿತ್ ಹೆಸರಿನಲ್ಲಿ ಮಾತ್ರ ಇದೆ ಈ ವಿಶಿಷ್ಟ ದಾಖಲೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಪ್ರಸ್ತುತ ಭಾರತ ತಂಡದ ಪ್ರಮುಖ ಆಟಗಾರರು. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಸಹ ಈ ಆಟಗಾರರು ಅದ್ಭುತ ಆಟ ಆಡುವ ಮುಖಾಂತರ ಹಲವಾರು ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ನಿರ್ಮಿಸಿಕೊಂಡಿದ್ದಾರೆ.
ಇದಲ್ಲದೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಂದು ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರುಗಳಲ್ಲಿ ಬರೆದುಕೊಂಡಿದ್ದಾರೆ. ಈ ದಾಖಲೆಯನ್ನು ಈ ಮೂವರು ಆಟಗಾರರನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರರು ಸಹ ಇದುವರೆಗೂ ಮಾಡಿಲ್ಲ.
ಐಪಿಎಲ್ ಇತಿಹಾಸದಲ್ಲಿ 4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರರು ಎಂಬ ವಿಶಿಷ್ಟ ದಾಖಲೆಯನ್ನು ವಿರಾಟ್ ಕೊಹ್ಲಿ , ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇವರನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರರೂ ಸಹ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 4000 ಎಸೆತಗಳನ್ನು ಎದುರಿಸಿಲ್ಲ.
4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿರುವ ಐಪಿಎಲ್ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

1. ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 184 ಇನ್ನಿಂಗ್ಸ್ ಆಡಿದ್ದು 4496 ಎಸೆತಗಳನ್ನು ಎದುರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 4000ಕ್ಕೂ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

2. ಶಿಖರ್ ಧವನ್
ಗಬ್ಬರ್ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 175 ಇನಿಂಗ್ಸ್ ಆಡಿದ್ದು 4096 ಎಸೆತಗಳನ್ನು ಎದುರಿಸುವುದರ ಮೂಲಕ 4000+ ಎಸೆತಗಳನ್ನು ಎದುರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. ರೋಹಿತ್ ಶರ್ಮಾ
ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 4000+ ಎಸೆತಗಳನ್ನು ಎದುರಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ. 194 ಇನ್ನಿಂಗ್ಸ್ ಆಡಿರುವ ರೋಹಿತ್ ಶರ್ಮಾ 4004 ಎಸೆತಗಳನ್ನು ಎದುರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications