ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಕಳೆದ ಭಾನುವಾರ ( ಏಪ್ರಿಲ್ 18 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿ 38 ರನ್‌ಗಳ ಸೋಲುಂಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಮ್ಯಾಕ್ಸ್‌ವೆಲ್ 49 ಎಸೆತಗಳಿಗೆ 78 ರನ್ ರನ್ ಗಳಿಸಿ ಮಿಂಚಿದರೆ, ಎಬಿ ಡಿವಿಲಿಯರ್ಸ್ 34 ಎಸೆತಗಳಿಗೆ ಅಜೇಯ 76 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಎಬಿಡಿ ಅವರ ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಕೂಡ ಸೇರಿದ್ದವು. ತಮ್ಮ ಉತ್ತಮ ಇನ್ನಿಂಗ್ಸ್‌ಗಾಗಿ ಎಬಿ ಡಿವಿಲಿಯರ್ಸ್ ಸ್ವೀಕರಿಸಿದ ಪಂದ್ಯಶ್ರೇಷ್ಠ ಪ್ರಶಸ್ತಿ ಐಪಿಎಲ್ ಇತಿಹಾಸದಲ್ಲಿ ಅವರು ಸ್ವೀಕರಿಸಿದ 24ನೇ ಪಂದ್ಯಶ್ರೇಷ್ಠ ಪ್ರಶಸ್ತಿಯಾಗಿದೆ. ಈ ಮೂಲಕ ಎಬಿ ಡಿವಿಲಿಯರ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆಯನ್ನು ಮುಂದುವರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿರುವ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

1. ಎಬಿ ಡಿವಿಲಿಯರ್ಸ್ - 24
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್ ಐಪಿಎಲ್ ಇತಿಹಾಸದಲ್ಲಿ ಒಟ್ಟು 24 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

2. ಕ್ರಿಸ್ ಗೇಲ್ - 22
ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 22 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

3. ರೋಹಿತ್ ಶರ್ಮಾ - 18
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 18 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

4. ಡೇವಿಡ್ ವಾರ್ನರ್ - 17
ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 17 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

5. ಎಂಎಸ್ ಧೋನಿ - 17
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 17 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications