ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ಆರ್ ಸಿ ಬಿ ಆಟಗಾರರು

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೆಣಸಾಡಿದವು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 205 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಅದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ 38 ರನ್‌ಗಳಿಂದ ಸೋಲುಂಡಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೃಹತ್ 204 ರನ್‌ಗಳ ಹಿಂದೆ ಇಬ್ಬರು ಪವರ್ ಹಿಟ್ಟರ್ಸ್ ಕೈವಾಡವಿತ್ತು. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್ ಅವರ ಅತ್ಯದ್ಭುತ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದೊಡ್ಡ ಮೊತ್ತವನ್ನು ಕಲೆಹಾಕುವಲ್ಲಿ ಯಶಸ್ವಿಯಾಯಿತು. ಮ್ಯಾಕ್ಸ್‌ವೆಲ್ 49 ಎಸೆತಗಳಿಗೆ 78 ರನ್ ಗಳಿಸಿ ಮಿಂಚಿದರೆ, ಎಬಿ ಡಿವಿಲಿಯರ್ಸ್ 34 ಎಸೆತಗಳಲ್ಲಿ 76 ರನ್ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಮೂಲಕ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಪದ್ಭಾಂದವ ಎಂಬುದು ಮತ್ತೊಮ್ಮೆ ಸಾಬೀತಾಯಿತು.
ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೋರಾಡಿ ಗೆಲ್ಲಿಸಿದಷ್ಟು ಬೇರೆ ಯಾವ ಆಟಗಾರರೂ ಸಹ ಗೆಲ್ಲಿಸಿಲ್ಲ ಎಂದರೆ ನಿಜಕ್ಕೂ ತಪ್ಪಾಗಲಾರದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಎಬಿಡಿ ಗೆದ್ದಿರುವ ಪಂದ್ಯಶ್ರೇಷ್ಠ ಪ್ರಶಸ್ತಿಗಳೇ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಪದ್ಬಾಂಧವ ಎಂದು ಸಾರಿ ಹೇಳುತ್ತವೆ. ಹೌದು ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 2018ರಿಂದೀಚೆಗೆ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. 2018ರಿಂದ ಇಲ್ಲಿಯವರೆಗೂ ಎಬಿ ಡಿವಿಲಿಯರ್ಸ್ ಒಟ್ಟು 9 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದರೆ, ವಿರಾಟ್ ಕೊಹ್ಲಿ 2 ಬಾರಿ ಮತ್ತು ಯುಜ್ವೇಂದ್ರ ಚಹಾಲ್ 2 ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications