ಐಪಿಎಲ್: ಎಬಿಡಿಗಿಂತ ಪಂತ್ ಡೇಂಜರಸ್ ಎನ್ನುತ್ತಿವೆ ಈ ಅಂಕಿಅಂಶ!

ರಿಷಭ್ ಪಂತ್ ಸದ್ಯ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಸುದ್ದಿಯಲ್ಲಿರುವ ಆಟಗಾರ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವದ ಜವಾಬ್ದಾರಿಯನ್ನು ಹೊತ್ತಿರುವ ರಿಷಭ್ ಪಂತ್ ಅದ್ಭುತ ಪ್ರದರ್ಶನವನ್ನು ಸಹ ನೀಡುತ್ತಿದ್ದಾರೆ.

ಗುರುವಾರ ( ಏಪ್ರಿಲ್ 15 ) ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ರಿಷಭ್ ಪಂತ್ ಆಕರ್ಷಕ ಅರ್ಧಶತಕ ಸಿಡಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಪೃಥ್ವಿ ಶಾ ಮತ್ತು ಶಿಖರ್ ಧವನ್ ಒಂದಂಕಿಗೆ ಪೆವಿಲಿಯನ್ ಸೇರಿಕೊಂಡರು. ಮೂರನೇ ಕ್ರಮಾಂಕದಲ್ಲಿ ಬಂದ ಅಜಿಂಕ್ಯ ರಹಾನೆ ಕೂಡ ಎರಡಂಕಿ ಮುಟ್ಟುವ ಪ್ರಯತ್ನ ಮಾಡಲಿಲ್ಲ. ಆರಂಭದಲ್ಲಿಯೇ ಆಘಾತಕ್ಕೊಳಗಾದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾಗಿದ್ದು ನಾಲ್ಕನೇ ಕ್ರಮಾಂಕದಲ್ಲಿ ಬಂದ ನಾಯಕ ರಿಷಭ್ ಪಂತ್.

32 ಎಸೆತಗಳಿಗೆ 51 ರನ್ ಬಾರಿಸಿದ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು. ಹೀಗೆ ನಾಲ್ಕನೇ ಕ್ರಮಾಂಕದಲ್ಲಿ ಬಂದು ಅರ್ಧ ಶತಕ ಸಿಡಿಸುವುದರ ಮೂಲಕ ರಿಷಭ್ ಪಂತ್ ತಮ್ಮ ಹೆಸರಿನಲ್ಲಿರುವ ವಿಶಿಷ್ಟ ದಾಖಲೆಯನ್ನು ಮುಂದುವರೆಸಿದ್ದಾರೆ. ಹೌದು 2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ನಾಲ್ಕನೇ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನದಲ್ಲಿಯೇ ಮುಂದುವರೆದಿದ್ದಾರೆ.

2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ನಾಲ್ಕನೇ ಕ್ರಮಾಂಕದಲ್ಲಿ ಅತಿ ಹೆಚ್ಚು ಬಾರಿ 50ಕ್ಕಿಂತ ಹೆಚ್ಚು ರನ್ ಬಾರಿಸಿರುವ ಟಾಪ್ 4 ಆಟಗಾರರ ಪಟ್ಟಿ ಈ ಕೆಳಕಂಡಂತಿದ್ದು, ಈ ಅಂಕಿ ಅಂಶಗಳ ಪ್ರಕಾರ 2017ರ ಐಪಿಎಲ್ ಟೂರ್ನಿಯಿಂದೀಚೆಗೆ ನಾಲ್ಕನೇ ಕ್ರಮಾಂಕದಲ್ಲಿ ಎಬಿ ಡಿವಿಲಿಯರ್ಸ್ ಗಿಂತ ರಿಷಭ್ ಪಂತ್ ಡೇಂಜರಸ್ ಎನ್ನಬಹುದು.

ರಿಷಭ್ ಪಂತ್

ರಿಷಭ್ ಪಂತ್

2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ 12 ಪಂದ್ಯಗಳಲ್ಲಿ ನಾಲ್ಕನೇ ಕ್ರಮಾಂಕದಲ್ಲಿ 50ಕ್ಕಿಂತ ಹೆಚ್ಚು ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ.

ಎಬಿ ಡಿವಿಲಿಯರ್ಸ್

ಎಬಿ ಡಿವಿಲಿಯರ್ಸ್

2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಬಿ ಡಿವಿಲಿಯರ್ಸ್ 9 ಬಾರಿ ನಾಲ್ಕನೇ ಕ್ರಮಾಂಕದಲ್ಲಿ 50ಕ್ಕಿಂತ ಹೆಚ್ಚು ರನ್ ಬಾರಿಸುವುದರ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ದಿನೇಶ್ ಕಾರ್ತಿಕ್ 2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ 7 ಬಾರಿ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ 50ಕ್ಕಿಂತ ಹೆಚ್ಚು ರನ್ ಬಾರಿಸುವುದರ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಎಂಎಸ್ ಧೋನಿ

ಎಂಎಸ್ ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ 2017ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೆ ಒಟ್ಟು 7 ಬಾರಿ ನಾಲ್ಕನೇ ಕ್ರಮಾಂಕದಲ್ಲಿ 50ಕ್ಕಿಂತ ಹೆಚ್ಚು ರನ್ ಬಾರಿಸುವುದರ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Friday, April 16, 2021, 15:38 [IST]
Other articles published on Apr 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X