ಐಪಿಎಲ್: ಧೋನಿಯ ಈ ವಿಶೇಷ ದಾಖಲೆ ಬ್ರೇಕ್ ಮಾಡ್ತಾರಾ ಮಿಲ್ಲರ್?
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೆಣಸಾಡಿದವು. ಈ ಪಂದ್ಯದ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಡೇವಿಡ್ ಮಿಲ್ಲರ್ ಐಪಿಎಲ್ ಟೂರ್ನಿಗೆ ಮರಳಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತು. 148 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆರಂಭದಲ್ಲಿಯೇ ಆಘಾತ ಉಂಟಾಯಿತು.
ಜೋಸ್ ಬಟ್ಲರ್, ಮನನ್ ವೊಹ್ರಾ, ಸಂಜು ಸ್ಯಾಮ್ಸನ್ ಹಾಗೂ ಶಿವಂ ದುಬೆ ಒಂದಂಕಿಗೆ ಪೆವಿಲಿಯನ್ ಸೇರಿಕೊಂಡರು. ಬಹುಬೇಗನೆ 3 ವಿಕೆಟ್‍ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಸರೆಯಾಗಿದ್ದು ಐದನೇ ಕ್ರಮಾಂಕದಲ್ಲಿ ಬಂದ ಡೇವಿಡ್ ಮಿಲ್ಲರ್. 43 ಎಸೆತಗಳನ್ನು ಎದುರಿಸಿದ ಡೇವಿಡ್ ಮಿಲ್ಲರ್ 62 ರನ್ ಬಾರಿಸಿ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.
ಹೀಗೆ ಅರ್ಧ ಶತಕ ಬಾರಿಸಿ ಮಿಂಚಿದ ಡೇವಿಡ್ ಮಿಲ್ಲರ್ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯೊಂದನ್ನು ಸರಿಗಟ್ಟುವ ಹಂತದ ಸನಿಹಕ್ಕೆ ಬಂದು ನಿಂತಿದ್ದಾರೆ. ಹೌದು ಐದನೇ ಕ್ರಮಾಂಕದಲ್ಲಿ 50ಕ್ಕಿಂತ ಹೆಚ್ಚು ರನ್ ಬಾರಿಸಿದ ಐಪಿಎಲ್ ಆಟಗಾರರ ಪಟ್ಟಿಯಲ್ಲಿ ಡೇವಿಡ್ ಮಿಲ್ಲರ್ ಎಂಎಸ್ ಧೋನಿ ಅವರ ಸನಿಹಕ್ಕೆ ಬಂದಿದ್ದಾರೆ. ಇದುವರೆಗೂ ನಡೆದಿರುವ ಐಪಿಎಲ್ ಪಂದ್ಯಗಳಲ್ಲಿ ಡೇವಿಡ್ ಮಿಲ್ಲರ್ ಒಟ್ಟು 10 ಬಾರಿ ಐದನೇ ಕ್ರಮಾಂಕದಲ್ಲಿ ಆಡಿ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.
ಐಪಿಎಲ್ ಪಂದ್ಯಗಳಲ್ಲಿ ಐದನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ 50ಕ್ಕಿಂತ ಹೆಚ್ಚು ರನ್ ಬಾರಿಸಿರುವ ಟಾಪ್ 3 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

ಎಂಎಸ್ ಧೋನಿ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಐದನೇ ಕ್ರಮಾಂಕದ ಆಟಗಾರನಾಗಿ ಅತೀ ಹೆಚ್ಚು ಬಾರಿ 50ಕ್ಕಿಂತ ಅಧಿಕ ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಧೋನಿ ಒಟ್ಟು 11 ಪಂದ್ಯಗಳಲ್ಲಿ ಐದನೇ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ 50ಕ್ಕಿಂತ ಅಧಿಕ ರನ್ ಬಾರಿಸಿದ್ದಾರೆ.

ಡೇವಿಡ್ ಮಿಲ್ಲರ್
ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಪಟ್ಟಿಯಲ್ಲಿ ಧೋನಿಗಿಂತ ಕೊಂಚ ಕೆಳಗಿರುವ ಡೇವಿಡ್ ಮಿಲ್ಲರ್ ಇದುವರೆಗೂ 10 ಪಂದ್ಯಗಳಲ್ಲಿ ಐದನೇ ಕ್ರಮಾಂಕದ ಆಟಗಾರನಾಗಿ 50ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ.

ದಿನೇಶ್ ಕಾರ್ತಿಕ್
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಐದನೇ ಕ್ರಮಾಂಕದ ಆಟಗಾರನಾಗಿ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 6 ಬಾರಿ 50ಕ್ಕಿಂತ ಅಧಿಕ ರನ್ ಗಳಿಸುವುದರ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications