ಪವರ್ ಪ್ಲೇನಲ್ಲಿ ತನ್ನ ಪಾರುಪತ್ಯ ಮುಂದುವರೆಸಿದ ದೀಪಕ್ ಚಹರ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್ ದೀಪಕ್ ಚಹರ್ ಪವರ್ ಪ್ಲೇನಲ್ಲಿ ತಮ್ಮ ಪಾರುಪತ್ಯವನ್ನು ಮುಂದುವರಿಸಿದ್ದಾರೆ. 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 10ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿ ಹೀನಾಯ ಸೋಲನ್ನು ಕಂಡಿತ್ತು.
ಆ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ರನ್ ಗಳಿಸಿತ್ತಾದರೂ ಸಿ ಎಸ್ ಕೆ ಬೌಲರ್‌ಗಳ ನೀರಸ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲುಂಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಆ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾದ ದೀಪಕ್ ಚಹರ್ 4 ಓವರ್‌ಗಳನ್ನು ಮಾಡಿ ಯಾವುದೇ ವಿಕೆಟ್ ಪಡೆಯದೇ 36 ನೀಡಿ ಮಂಕಾಗಿದ್ದರು.
ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಪಂದ್ಯದಲ್ಲಿ ಮಂಕಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ದೀಪಕ್ ಚಹರ್ ಶುಕ್ರವಾರ ( ಏಪ್ರಿಲ್ 16 ) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮರಳಿ ಯಶಸ್ಸಿನ ಹಾದಿಗೆ ಬಂದಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ ಮಾಡಿದ ದೀಪಕ್ ಚಹರ್ ಒಂದು ಮೇಡನ್ ಓವರ್ ಮಾಡುವುದರ ಜೊತೆಗೆ ಕೇವಲ 13 ರನ್ ನೀಡಿ 4 ವಿಕೆಟ್ ಪಡೆದರು. ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಆಟಗಾರರಾದ ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ ಹಾಗೂ ನಿಕೊಲಸ್ ಪೂರನ್ ಅವರ ವಿಕೆಟ್‍ಗಳನ್ನು ಪಡೆದು ದೀಪಕ್ ಚಹರ್ ಮಿಂಚಿದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪವರ್ ಪ್ಲೇನಲ್ಲಿಯೇ 3 ವಿಕೆಟ್‍ಗಳನ್ನು ಪಡೆಯುವುದರ ಮೂಲಕ ದೀಪಕ್ ಚಹರ್ 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಪವರ್ ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ತಮ್ಮ ಅಗ್ರಸ್ಥಾನವನ್ನು ಮುಂದುವರಿಸಿದ್ದಾರೆ. 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಪವರ್ ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 4 ಬೌಲರ್‌ಗಳ ಪಟ್ಟಿ ಈ ಕೆಳಕಂಡಂತಿದೆ.

1. ದೀಪಕ್ ಚಹರ್
ಚೆನ್ನೈ ಸೂಪರ್ ಕಿಂಗ್ಸ್ ತಂಡದ ದೀಪಕ್ ಚಹರ್ 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಪವರ್ ಪ್ಲೇನಲ್ಲಿ 35 ವಿಕೆಟ್ ಪಡೆದಿದ್ದು ಅಗ್ರಸ್ಥಾನದಲ್ಲಿದ್ದಾರೆ.

2. ಟ್ರೆಂಟ್ ಬೌಲ್ಟ್
ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಟ್ರೆಂಟ್ ಬೌಲ್ಟ್ 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಪವರ್ ಪ್ಲೇನಲ್ಲಿ 23 ವಿಕೆಟ್ ಪಡೆಯುವುದರ ಮೂಲಕ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. ಉಮೇಶ್ ಯಾದವ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಉಮೇಶ್ ಯಾದವ್ 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ ಪವರ್ ಪ್ಲೇನಲ್ಲಿ 18 ವಿಕೆಟ್ ಪಡೆಯುವುದರ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

4. ಜೋಫ್ರಾ ಆರ್ಚರ್
ರಾಜಸ್ಥಾನ್ ರಾಯಲ್ಸ್ ತಂಡದ ಬೌಲರ್ ಜೋಫ್ರಾ ಆರ್ಚರ್ 2018ರ ಐಪಿಎಲ್ ಟೂರ್ನಿಯಿಂದ ಇಲ್ಲಿಯವರೆಗೂ 17 ವಿಕೆಟ್ ಪಡೆಯುವುದರ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications