For Quick Alerts
ALLOW NOTIFICATIONS  
For Daily Alerts
 

ಎದುರಾಳಿಗಳನ್ನು ಅತಿಹೆಚ್ಚು ಬಾರಿ ಆಲ್ಔಟ್ ಮಾಡಿರುವ ಐಪಿಎಲ್ ತಂಡಗಳು

IPL 2021 : Here is the list of teams to bowled out opponents most times

ಈ ಬಾರಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್‍ಗಳ ರೋಚಕ ಜಯ ಸಾಧಿಸಿತು. ಮೊದಲ ಪಂದ್ಯದಲ್ಲಿಯೇ ಸೋತು ಈ ಬಾರಿಯ ಐಪಿಎಲ್ ಟೂರ್ನಿಯನ್ನು ಆರಂಭಿಸಿದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವುದರ ಮೂಲಕ ಯಶಸ್ಸಿನ ಹಾದಿಗೆ ಮರಳಿತು.

ಶನಿವಾರ ( ಏಪ್ರಿಲ್ 17 ) ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ 150 ರನ್ ಗಳಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೋಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಮುಂಬೈ ಇಂಡಿಯನ್ಸ್ ಬೌಲರ್‌ಗಳ ಅತ್ಯುತ್ತಮ ಬೌಲಿಂಗ್‌ನಿಂದ ಸನ್ ರೈಸರ್ಸ್ ಹೈದರಾಬಾದ್ ಕೈನಲ್ಲಿದ್ದ ಪಂದ್ಯ ಮುಂಬೈ ಇಂಡಿಯನ್ಸ್ ಪಾಲಾಯಿತು. 10 ಓವರ್‌ಗಳಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 74 ರನ್‌ಗಳಿಸಿ ಕೇವಲ 2 ರನ್ ಕಳೆದುಕೊಂಡಿತ್ತು, ಆದರೆ 19.4 ಓವರ್‌ಗಳಲ್ಲಿ 137 ರನ್ ಗಳಿಸಿ ಆಲ್ಔಟ್ ಆಗಿ ಸೋಲುಂಡಿತು.

ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆಲ್ಔಟ್ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ತನ್ನ ವಿಶೇಷ ದಾಖಲೆಯೊಂದನ್ನು ಮುಂದುವರೆಸಿದೆ. ಹೌದು ಎದುರಾಳಿಗಳನ್ನು ಅತಿ ಹೆಚ್ಚು ಬಾರಿ ಆಲ್ಔಟ್ ಮಾಡಿರುವ ದಾಖಲೆ ಮುಂಬೈ ಇಂಡಿಯನ್ಸ್ ತಂಡದ ಹೆಸರಿನಲ್ಲಿದೆ. ಇದುವರೆಗೂ ಮುಂಬೈ ಇಂಡಿಯನ್ಸ್ ತಂಡ ಎದುರಾಳಿಗಳನ್ನು 29 ಬಾರಿ ಆಲ್ಔಟ್ ಮಾಡುವುದರ ಮೂಲಕ ಅತಿ ಹೆಚ್ಚು ಬಾರಿ ಎದುರಾಳಿ ತಂಡವನ್ನು ಆಲ್ಔಟ್ ಮಾಡಿದ ಐಪಿಎಲ್ ತಂಡ ಎಂಬ ಕೀರ್ತಿಯನ್ನು ಪಡೆದುಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹೊರತುಪಡಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಬಾರಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ಬಾರಿ ಎದುರಾಳಿ ತಂಡಗಳನ್ನು ಆಲ್ಔಟ್ ಮಾಡಿವೆ.

Story first published: Sunday, April 18, 2021, 17:22 [IST]
Other articles published on Apr 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+