ಐಪಿಎಲ್ : ಟೂರ್ನಿಯ ಮೊದಲ 4 ಪಂದ್ಯಗಳನ್ನು ಗೆದ್ದಿರುವ ತಂಡಗಳು

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳಲ್ಲಿಯೂ ಸಹ ಗೆಲುವು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.
ಏಪ್ರಿಲ್ 9ರಂದು ಪ್ರಸ್ತುತ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್‍ಗಳ ಜಯವನ್ನು ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಖಾತೆಯನ್ನು ತೆರೆದಿತ್ತು. ನಂತರ ಏಪ್ರಿಲ್ 14ರಂದು ಎರಡನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 6 ರನ್‌ಗಳ ಗೆಲುವು ಸಾಧಿಸಿತು. ಏಪ್ರಿಲ್ 18ರಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 38 ರನ್‌ಗಳ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಬೆಂಗಳೂರು ತಂಡ ಟೂರ್ನಿಯಲ್ಲಿ ಸತತ ಮೂರನೇ ಗೆಲುವನ್ನು ಸಾಧಿಸಿತು. ಹಾಗೂ ಗುರುವಾರ (ಏಪ್ರಿಲ್ 18) ನಡೆದ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ 10 ವಿಕೆಟ್‍ಗಳ ಅಮೋಘ ಗೆಲುವನ್ನು ಸಾಧಿಸುವುದರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಸತತ ನಾಲ್ಕನೇ ಗೆಲುವನ್ನು ಸಾಧಿಸಿ ದಾಖಲೆ ಬರೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಟೂರ್ನಿಯ ಮೊದಲ ನಾಲ್ಕು ಪಂದ್ಯಗಳನ್ನು ಗೆದ್ದಿರುವ 5ನೇ ತಂಡ ಎನಿಸಿಕೊಂಡಿದೆ. ಇದುವರೆಗೂ ನಡೆದಿರುವ ಐಪಿಎಲ್ ಟೂರ್ನಿಗಳಲ್ಲಿ ಮೊದಲ 4 ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ.

1. ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್ ತಂಡ 2008ರ ಐಪಿಎಲ್ ಟೂರ್ನಿಯಲ್ಲಿ ಮೊದಲ ನಾಲ್ಕು ಪಂದ್ಯಗಳನ್ನು ಗೆಲ್ಲುವುದರ ಮೂಲಕ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿಯೇ ಈ ದಾಖಲೆಯನ್ನು ಬರೆದಿತ್ತು.

2. ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್
2009ರ ಐಪಿಎಲ್ ಆವೃತ್ತಿಯ ಚಾಂಪಿಯನ್ಸ್ ಆಗಿದ್ದ ಡೆಕ್ಕನ್ ಚಾರ್ಜರ್ಸ್ ಅದೇ ಆವೃತ್ತಿಯಲ್ಲಿ ಆಡಿದ್ದ ಮೊದಲ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.

3. ಪಂಜಾಬ್ ಕಿಂಗ್ಸ್
2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಮೊದಲ 4 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿತ್ತು.

4. ರಾಜಸ್ಥಾನ್ ರಾಯಲ್ಸ್
2015ರ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮೊದಲ 4 ಪಂದ್ಯಗಳಲ್ಲಿ ಸತತವಾಗಿ ಜಯ ಗಳಿಸಿತ್ತು.

5. ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಸತತವಾಗಿ ಮೊದಲ 4 ಪಂದ್ಯಗಳಲ್ಲಿ ಜಯ ಗಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications