ಸಿ ಎಸ್ ಕೆ ಜೀವಮಾನ ಸಾಧನೆಯನ್ನು ಮುರಿದುಹಾಕಿದ ಡೆಲ್ಲಿ ಕ್ಯಾಪಿಟಲ್ಸ್

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯ ಮಂಗಳವಾರ ( ಏಪ್ರಿಲ್ 20 ) ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ದಾಳಿಗೆ ತತ್ತರಿಸಿತು. 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಮುಂಬೈ ಕಲೆಹಾಕಲು ಶಕ್ತವಾಯಿತು.
138 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಪೃಥ್ವಿ ಶಾ ಮತ್ತು ಶಿಖರ್ ಧವನ್ ಆರಂಭಿಕ ಆಟಗಾರರಾಗಿ ಕಣಕ್ಕಿಳಿದರು. ಪೃಥ್ವಿ ಶಾ 7(5) ರನ್ ಗಳಿಸಿ ಬಹುಬೇಗನೆ ಪೆವಿಲಿಯನ್ ಸೇರಿಕೊಂಡರೆ ಶಿಖರ್ ಧವನ್ ಮತ್ತು ಸ್ಟೀವ್ ಸ್ಮಿತ್ ಜತೆಗೂಡಿ ಜವಾಬ್ದಾರಿಯುತ ಆಟದೊಂದಿಗೆ ಉತ್ತಮ ಇನ್ನಿಂಗ್ಸ್ ನಿರ್ಮಿಸಿದರು. ಸುಲಭ ಮೊತ್ತವನ್ನು ಬೆನ್ನತ್ತುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್‌ಗಳು ಪರದಾಡಿದ್ದಂತೂ ನಿಜ. ಧವನ್ 45 (42) , ಸ್ಟೀವ್ ಸ್ಮಿತ್ 33 ( 29 ) ಮತ್ತು ರಿಷಭ್ ಪಂತ್ 7 (8) ರನ್ ಗಳಿಸಿದರು. ಲಲಿತ್ ಯಾದವ್ ಅಜೇಯ 22 (25) ಹಾಗೂ ಶಿಮ್ರಾನ್ ಹೆಟ್ಮೇಯರ್ ಅಜೇಯ 14 (9) ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೊನೆಯ ಓವರ್‌ನಲ್ಲಿ ಗೆಲುವಿನ ಗುರಿ ಮುಟ್ಟಿಸಿದರು. 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‍ಗಳ ಜಯ ಸಾಧಿಸಿ ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸುವುದರ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.
ಈ ಗೆಲುವಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿತು. ಹೌದು ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನಕ್ಕೇರಿದೆ. ಮುಂಬೈ ಇಂಡಿಯನ್ಸ್ ತಂಡದೊಂದಿಗಿನ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಲ್ಲಿ ಜಯಗಳಿಸಿದೆ. ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಅತಿಹೆಚ್ಚು ಪಂದ್ಯಗಳಲ್ಲಿ ಜಯ ಸಾಧಿಸಿರುವ ಟಾಪ್ 5 ಐಪಿಎಲ್ ತಂಡಗಳ ಪಟ್ಟಿ ಈ ಕೆಳಕಂಡಂತಿದೆ.

1. ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇದುವರೆಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಒಟ್ಟು 13 ಪಂದ್ಯಗಳಲ್ಲಿ ಜಯ ಸಾಧಿಸಿದೆ.

2. ಚೆನ್ನೈ ಸೂಪರ್ ಕಿಂಗ್ಸ್
ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಇದುವರೆಗೂ 12 ಪಂದ್ಯಗಳಲ್ಲಿ ಗೆಲುವನ್ನು ಕಂಡಿದೆ.

3. ಪಂಜಾಬ್ ಕಿಂಗ್ಸ್
ಪಂಜಾಬ್ ಕಿಂಗ್ಸ್ ತಂಡ ಕೂಡ ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 12 ಪಂದ್ಯಗಳಲ್ಲಿ ಜಯಗಳಿಸಿದೆ.

4. ರಾಜಸ್ಥಾನ್ ರಾಯಲ್ಸ್
ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ ಇತಿಹಾಸದಲ್ಲಿ ಒಟ್ಟು 11 ಪಂದ್ಯಗಳಲ್ಲಿ ಗೆಲುವು ಕಂಡಿದೆ.

5. ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಇತಿಹಾಸದಲ್ಲಿ ಒಟ್ಟು 11 ಪಂದ್ಯಗಳಲ್ಲಿ ಜಯ ಗಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications