ಅತಿಹೆಚ್ಚು ಬಾರಿ 10 ವಿಕೆಟ್‍ಗಳ ಗೆಲುವು ಸಾಧಿಸಿರುವ ಐಪಿಎಲ್ ತಂಡ ಯಾವುದು ಗೊತ್ತಾ?

ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಟೂರ್ನಿಯಲ್ಲಿ ಆಡಿರುವ ಒಟ್ಟು 4 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿಯೂ ಸಹ ಜಯಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ಇಷ್ಟೊಂದು ಯಶಸ್ವಿ ಆರಂಭವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಡೆದುಕೊಂಡಿರಲಿಲ್ಲ, ಇದೇ ಮೊದಲ ಬಾರಿಗೆ ಟೂರ್ನಿಯೊಂದರ ಮೊದಲ ನಾಲ್ಕೂ ಪಂದ್ಯಗಳಲ್ಲಿ ಬೆಂಗಳೂರು ತಂಡ ಜಯಗಳಿಸುವುದರ ಮೂಲಕ ಯಶಸ್ಸಿನ ಉತ್ತುಂಗದಲ್ಲಿದೆ.
ಗುರುವಾರ ( ಏಪ್ರಿಲ್ 20 ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯವನ್ನು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತು. ರಾಜಸ್ಥಾನ್ ರಾಯಲ್ಸ್ ತಂಡ ನೀಡಿದ ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರಾಗಿ ಬಂದ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ ಕಾರಣ 16.3 ಓವರ್‌ಗಳಲ್ಲಿಯೇ ಯಾವುದೇ ವಿಕೆಟ್ ಕಳೆದುಕೊಳ್ಳದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 181 ರನ್ ಗಳಿಸಿ ಪಂದ್ಯವನ್ನು ವಶಪಡಿಸಿಕೊಂಡಿತು.
ಹೀಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹತ್ತು ವಿಕೆಟ್‍ಗಳ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿ ಹತ್ತು ವಿಕೆಟ್‍ಗಳ ಜಯವನ್ನು ಸಾಧಿಸಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ 10 ವಿಕೆಟ್‍ಗಳ ಗೆಲುವನ್ನು ಸಾಧಿಸಿರುವ ತಂಡ ಎಂಬ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದುವರೆಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊರತುಪಡಿಸಿ ಮುಂಬೈ ಇಂಡಿಯನ್ಸ್ 2 ಬಾರಿ, ಸನ್ ರೈಸರ್ಸ್ ಹೈದರಾಬಾದ್ 2 ಬಾರಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಬಾರಿ ಹತ್ತು ವಿಕೆಟ್‍ಗಳ ಜಯವನ್ನು ಐಪಿಎಲ್ ಇತಿಹಾಸದಲ್ಲಿ ಸಾಧಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications