ಐಪಿಎಲ್ 2021 ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿ
ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ರದ್ದಾಗಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದು ಮಾಡಿದೆ.
ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರದ್ದಾಗುವ ವೇಳೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಸೀಮಿತವಾಗಿದೆ. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಉತ್ತಮ ಆಟವನ್ನಾಡುವುದರ ಮೂಲಕ ಅಂಕಪಟ್ಟಿಯ ಟಾಪ್ 4ರಲ್ಲಿ ಸ್ಥಾನವನ್ನು ಪಡೆದುಕೊಂಡಿವೆ. ತಂಡಗಳನ್ನು ಹೊರತುಪಡಿಸಿ ವೈಯಕ್ತಿಕವಾಗಿ ಯಾವ ಯಾವ ಆಟಗಾರರು ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬ ಮಾಹಿತಿ ಮುಂದೆ ಇದೆ ಓದಿ.

1. ಶಿಖರ್ ಧವನ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 380 ರನ್ ಬಾರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಶಿಖರ್ ಧವನ್ ಟೂರ್ನಿಯಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

2. ಕೆಎಲ್ ರಾಹುಲ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 16 ಸಿಕ್ಸರ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರನಾಗಿದ್ದಾರೆ.

3. ಅತಿ ಹೆಚ್ಚು ಬೌಂಡರಿ
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 43 ಬೌಂಡರಿಗಳನ್ನು ಬಾರಿಸುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ ಟೂರ್ನಿಯಲ್ಲಿ ಅತಿಹೆಚ್ಚು ಬೌಂಡರಿ ಬಾರಿಸಿದ ಆಟಗಾರನಾಗಿದ್ದಾರೆ.

4. ಜೋಸ್ ಬಟ್ಲರ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇನ್ನಿಂಗ್ಸ್‌ವೊಂದರಲ್ಲಿ 124 ರನ್ ಬಾರಿಸಿದ್ದ ಜೋಸ್ ಬಟ್ಲರ್ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆಟಗಾರ ಎನಿಸಿಕೊಂಡಿದ್ದಾರೆ.

5. ಹರ್ಷಲ್ ಪಟೇಲ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರ್ಷಲ್ ಪಟೇಲ್ 17 ವಿಕೆಟ್ ಪಡೆದುಕೊಳ್ಳುವುದರ ಮೂಲಕ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

6. ಆ್ಯಂಡ್ರೆ ರಸೆಲ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯವೊಂದರಲ್ಲಿ 4 ಓವರ್ ಮಾಡಿ 15 ರನ್ ನೀಡಿ 5 ವಿಕೆಟ್‍ಗಳನ್ನು ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆ್ಯಂಡ್ರೆ ರಸೆಲ್ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆಟಗಾರ ಎನಿಸಿಕೊಂಡಿದ್ದಾರೆ.

7. ಕಗಿಸೊ ರಬಾಡ
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಕಗಿಸೊ ರಬಾಡ 148.73 kmph ವೇಗದಲ್ಲಿ ಎಸೆತವನ್ನು ಎಸೆಯುವುದರ ಮೂಲಕ ಟೂರ್ನಿಯಲ್ಲಿ ಅತೀ ವೇಗದ ಎಸೆತ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ.

8. ಕೀರನ್ ಪೊಲಾರ್ಡ್
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಆಟಗಾರ ಕೀರನ್ ಪೊಲಾರ್ಡ್ 105 ಮೀಟರ್ ಉದ್ದದ ಸಿಕ್ಸ್ ಸಿಡಿಸುವ ಮೂಲಕ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸ್ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications