Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

IPL 2021: Hitman Rohit Sharma becomes first Indian to hit 400 T20 sixes

ಶಾರ್ಜಾ: ಟೀಮ್ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮನ್‌, ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಬಾರಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್‌ ಆಗಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಗುರುತಿಸಿಕೊಂಡಿದ್ದಾರೆ.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ (ಅಕ್ಟೋಬರ್ 5) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಲ್ಲಿ ರೋಹಿತ್ ಈ ಸಾಧನೆ ಮಾಡಿದ್ದಾರೆ.

ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ 13 ಎಸೆತಗಳಲ್ಲಿ 22 ರನ್ ಪೇರಿಸಿದರು. ಇದರಲ್ಲಿ 1 ಫೋರ್, 1 ಸಿಕ್ಸರ್ ಸೇರಿತ್ತು. ಈ ಸಿಕ್ಸ್‌ನೊಂದಿಗೆ ರೋಹಿತ್ ದಾಖಲೆ ಪಟ್ಟಿ ಸೇರಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ವಿಶ್ವದಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ.

ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್‌ನಲ್ಲಿ 1042 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇನ್ನು ವೆಸ್ಟ್‌ ಇಂಡೀಸ್‌ನ ಕೀರನ್ ಪೊಲಾರ್ಡ್ 758 ಸಿಕ್ಸರ್, ವೆಸ್ಟ್ ಇಂಡೀಸ್‌ನ ಆ್ಯಂಡ್ರೆ ರಸೆಲ್ 510 ಸಿಕ್ಸರ್, ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ 485 ಸಿಕ್ಸರ್, ಆಸ್ಟ್ರೇಲಿಯಾದ ಶೇನ್ ವಾಟ್ಸನ್ 467 ಸಿಕ್ಸರ್, ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ 434 ಸಿಕ್ಸರ್ ದಾಖಲೆ ಹೊಂದಿದ್ದಾರೆ.

ಮಂಗಳವಾರದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್, ಎವಿನ್ ಲೂಯಿಸ್ 24, ಯಶಸ್ವಿ ಜೈಸ್ವಾಲ್ 12, ಸಂಜು ಸ್ಯಾಮ್ಸನ್ 3, ಶಿವಂ ದೂಬೆ 3, ಗ್ಲೆನ್ ಫಿಲಿಪ್ಸ್ 4, ಡೇವಿಡ್ ಮಿಲ್ಲರ್ 15, ರಾಹುಲ್ ತೆವಾಟಿಯಾ 12, ಕುಲದೀಪ್ ಯಾದವ್ 0, ಚೇತನ್ ಸಕಾರಿಯಾ 6, ಮುಸ್ತಫಿಜುರ್ ರೆಹಮಾನ್ 8 ರನ್‌ನೊಂದಿಗೆ 20 ಓವರ್‌ಗೆ 9 ವಿಕೆಟ್‌ ಕಳೆದು 90 ರನ್ ಗಳಿಸಿತ್ತು.

ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ 22 (13), ಇಶಾನ್ ಕಿಶನ್ ಅಜೇಯ 50 (25), ಸೂರ್ಯಕುಮಾರ್ ಯಾದವ್ 13, ಹಾರ್ದಿಕ್ ಪಾಂಡ್ಯ ಅಜೇಯ 5 ರನ್‌ನೊಂದಿಗೆ 8.2 ಓವರ್‌ಗೆ 2 ವಿಕೆಟ್ ಕಳೆದು 94 ರನ್ ಗಳಿಸಿ ಗೆಲುವಿನ ನಗು ಬೀರಿತು.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್.
ಬೆಂಚ್: ಅನುಕೂಲ್ ರಾಯ್, ಕ್ರಿಸ್ ಲಿನ್, ಆಡಮ್ ಮಿಲ್ನೆ, ಆದಿತ್ಯ ತಾರೆ, ಪಿಯೂಷ್ ಚಾವ್ಲಾ, ಧವಳ್ ಕುಲಕರ್ಣಿ, ರೋಶ್ ಕಲರಿಯಾ, ಅನ್ಮೋಲ್ಪ್ರೀತ್ ಸಿಂಗ್, ರಾಹುಲ್ ಚಾಹರ್, ಮಾರ್ಕೊ ಜಾನ್ಸನ್, ಯುದ್ಧವೀರ್ ಸಿಂಗ್, ಕೃನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (c & wk), ಶಿವಂ ದೂಬೆ, ಗ್ಲೆನ್ ಫಿಲಿಪ್ಸ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಕುಲದೀಪ್ ಯಾದವ್, ಚೇತನ್ ಸಕಾರಿಯಾ, ಶ್ರೇಯಸ್ ಗೋಪಾಲ್, ಮುಸ್ತಫಿಜುರ್ ರೆಹಮಾನ್.
ಬೆಂಚ್: ಜಯದೇವ್ ಉನದ್ಕತ್, ಕ್ರಿಸ್ ಮೋರಿಸ್, ಮನನ್ ವೊಹ್ರಾ, ಲಿಯಾಮ್ ಲಿವಿಂಗ್ಸ್ಟೋನ್, ತಬ್ರೇಜ್ ಶಮ್ಸಿ, ಕೆಸಿ ಕರಿಯಪ್ಪ, ಮಹಿಪಾಲ್ ಲೊಮರ್, ಓಶಾನೆ ಥಾಮಸ್, ರಿಯಾನ್ ಪರಾಗ್, ಅನುಜ್ ರಾವತ್, ಕಾರ್ತಿಕ್ ತ್ಯಾಗಿ, ಜೆರಾಲ್ಡ್ ಕೋಟ್ಜಿ, ಮಯಾಂಕ್ ಮಾರ್ಕಂಡೆ, ಆಕಾಶ್ ಸಿಂಗ್.

Story first published: Wednesday, October 6, 2021, 10:05 [IST]
Other articles published on Oct 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+