ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ, ಮುಂಬೈ ಪ್ಲೇಆಫ್ ಪ್ರವೇಶಿಸಲು ಈ ಅಂತರದಲ್ಲಿ ಗೆಲ್ಲಲೇಬೇಕು!

IPL 2021: How Mumbai Indians should win against Sunrisers Hyderabad to qualify for playoffs

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದು ತಲುಪಿದ್ದು ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯಲಿರುವ ನಾಲ್ಕನೇ ತಂಡ ಯಾವುದು ಎಂಬ ಕುತೂಹಲ ಹೆಚ್ಚಾಗಿದೆ.

ಹೌದು, ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈಗಾಗಲೇ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ್ದು, ಉಳಿದ ತಂಡಗಳಾದ ಕೋಲ್ಕತ್ತಾ ನೈಟ್ ರೈಡರ್ಸ್ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಪ್ಲೇಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿತ್ತು.

'ಧೋನಿ ಸಿಎಸ್‌ಕೆ ಪರ ಏನೂ ಮಾಡಿಲ್ಲ, ಆದರೂ ತಂಡ ಪ್ಲೇಆಫ್ ತಲುಪಿದೆ' ಎಂದ ಮಾಜಿ ಕ್ರಿಕೆಟಿಗ'ಧೋನಿ ಸಿಎಸ್‌ಕೆ ಪರ ಏನೂ ಮಾಡಿಲ್ಲ, ಆದರೂ ತಂಡ ಪ್ಲೇಆಫ್ ತಲುಪಿದೆ' ಎಂದ ಮಾಜಿ ಕ್ರಿಕೆಟಿಗ

ಆದರೆ ಅಕ್ಟೋಬರ್ 5ರ ಮಂಗಳವಾರದಂದು ನಡೆದ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಸೋಲು ಅನುಭವಿಸಿ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಹೀಗಾಗಿ ಸದ್ಯ ಪ್ಲೇ ಆಫ್ ಪ್ರವೇಶಿಸಲಿರುವ ನಾಲ್ಕನೇ ತಂಡದ ಸ್ಥಾನಕ್ಕಾಗಿ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಐದನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇನ್ನು ಈ ಎರಡೂ ತಂಡಗಳು ಸಹ ತಲಾ 12 ಅಂಕಗಳನ್ನು ಪಡೆದುಕೊಂಡಿವೆ, ಆದರೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನೆಟ್ ರನ್ ರೇಟ್ ಹೆಚ್ಚಿರುವ ಕಾರಣ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಉತ್ತಮ ಸ್ಥಾನವನ್ನು ಅಂಕಪಟ್ಟಿಯಲ್ಲಿ ತನ್ನದಾಗಿಸಿಕೊಂಡಿದೆ. ಹಾಗೂ ಈ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಲಿದ್ದು ಪ್ಲೇ ಆಫ್ ಪ್ರವೇಶಿಸಲು ಆ ಪಂದ್ಯಗಳಲ್ಲಿ ಎರಡೂ ತಂಡಗಳು ಸಹ ಕಡ್ಡಾಯವಾಗಿ ಜಯ ಸಾಧಿಸಲೇಬೇಕಾಗಿದೆ.

ರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗ

ಒಂದುವೇಳೆ ಅಕ್ಟೋಬರ್ 7ರ ಗುರುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಜಯಗಳಿಸಿದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಒತ್ತಡ ಹೆಚ್ಚಾಗಲಿದೆ. ಹೀಗಾದರೆ ಮುಂಬೈ ಇಂಡಿಯನ್ಸ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದ್ದು ಆ ಪಂದ್ಯದಲ್ಲಿ ಈ ಕೆಳಕಂಡ ಅಂತರಗಳಲ್ಲಿ ಜಯ ಗಳಿಸಿದರೆ ಮಾತ್ರ ಅಂಕಪಟ್ಟಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಐದನೇ ಸ್ಥಾನಕ್ಕೆ ತಳ್ಳಿ ತಾನು ನಾಲ್ಕನೇ ಸ್ಥಾನಕ್ಕೆ ಏರುವುದರ ಮೂಲಕ ಪ್ಲೇ ಆಫ್ ಹಂತವನ್ನು ಯಶಸ್ವಿಯಾಗಿ ಪ್ರವೇಶಿಸುವ ಸಾಧ್ಯತೆಯಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿದರೆ ಈ ಅಂತರದಲ್ಲಿ ಗೆಲ್ಲಲೇಬೇಕು

ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿದರೆ ಈ ಅಂತರದಲ್ಲಿ ಗೆಲ್ಲಲೇಬೇಕು


ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿ, ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದೇ ಆದಲ್ಲಿ, ಆ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕಡ್ಡಾಯವಾಗಿ 48 ರನ್‌ಗಳ ಅಂತರದಿಂದ ಗೆದ್ದರೆ ಮಾತ್ರ ಅಂಕಪಟ್ಟಿಯಲ್ಲಿ ಉತ್ತಮ ನೆಟ್ ರನ್ ರೇಟ್ ಪಡೆದುಕೊಳ್ಳುವುದರ ಮೂಲಕ ನಾಲ್ಕನೇ ಸ್ಥಾನಕ್ಕೇರಲಿದ್ದು ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಅವಕಾಶ ಸಿಗಲಿದೆ. ಒಂದುವೇಳೆ 48 ರನ್‌ಗಳಿಗಿಂತ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದರೂ ಕೂಡ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಸುತ್ತಿಗೆ ಪ್ರವೇಶ ಪಡೆದುಕೊಳ್ಳುವಲ್ಲಿ ವಿಫಲವಾಗಲಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಿದರೆ ಈ ಅಂತರದಲ್ಲಿ ಗೆಲ್ಲಲೇಬೇಕು

ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಿದರೆ ಈ ಅಂತರದಲ್ಲಿ ಗೆಲ್ಲಲೇಬೇಕು


ಒಂದುವೇಳೆ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಮಾಡಿದರೆ ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡುವ ಗುರಿಯನ್ನು ಕಡ್ಡಾಯವಾಗಿ 9 ಓವರ್‌ಗಳಲ್ಲಿ ಬೆನ್ನತ್ತಿದರೆ ಮಾತ್ರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಉತ್ತಮ ನೆಟ್ ರನ್ ರೇಟ್ ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ.

Pant CSK ವಿರುದ್ಧ ಗೆಲ್ಲುವ ಸಾಧಿಸಿದ ನಂತರ ಹೇಳಿದ್ದೇನು | Oneindia Kannada
ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಅವಕಾಶ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಅವಕಾಶ

ಹೌದು, ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ನಡೆಯುವುದಕ್ಕೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ನಡೆಯುವುದರಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಇಲ್ಲಿ ಉತ್ತಮ ಅವಕಾಶ ದೊರೆತಂತಾಗುತ್ತದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಜಯ ಗಳಿಸಿದರೂ ಸಹ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಪ್ರವೇಶಿಸಲು ಯಾವ ಅಂತರದಲ್ಲಿ ಗೆಲ್ಲಲೇಬೇಕು ಎಂಬ ಅಂಕಿ ಅಂಶಗಳು ಲಭ್ಯವಾಗಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಆ ಅಂಕಿ ಅಂಶಗಳನ್ನು ಅನುಸರಿಸಿ ಆಟವನ್ನಾಡುವ ಉತ್ತಮ ಅವಕಾಶವನ್ನು ಪಡೆದುಕೊಳ್ಳಲಿದೆ.

Story first published: Wednesday, October 6, 2021, 12:41 [IST]
Other articles published on Oct 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X