ಐಪಿಎಲ್ 2021: ಆರ್‌ಸಿಬಿಗೆ ದ್ವಿತೀಯ ಸ್ಥಾನ ಪಡೆದುಕೊಳ್ಳುವ ಅವಕಾಶ ಇನ್ನೂ ಇದೆ; ಹೀಗಾದರೆ ಮಾತ್ರ!

ಹಲವಾರು ಆವೃತ್ತಿಗಳ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇತರೆ ತಂಡಗಳ ನಡುವಿನ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಿರದೇ ತನ್ನದೇ ಅಂಕಗಳೊಂದಿಗೆ ಪ್ಲೇ ಆಫ್ ಹಂತವನ್ನು ಅಧಿಕೃತವಾಗಿ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.

ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ, ಮುಂಬೈ ಪ್ಲೇಆಫ್ ಪ್ರವೇಶಿಸಲು ಈ ಅಂತರದಲ್ಲಿ ಗೆಲ್ಲಲೇಬೇಕು!ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆದ್ದರೆ, ಮುಂಬೈ ಪ್ಲೇಆಫ್ ಪ್ರವೇಶಿಸಲು ಈ ಅಂತರದಲ್ಲಿ ಗೆಲ್ಲಲೇಬೇಕು!

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಪ್ಲೇ ಆಫ್ ಹಂತವನ್ನು ಅಧಿಕೃತವಾಗಿ ಪ್ರವೇಶಿಸಿದ ಮೂರನೇ ತಂಡ ಎನಿಸಿಕೊಂಡಿತ್ತು. ಹೀಗೆ 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಲೀಗ್ ಹಂತದಲ್ಲಿ ಇನ್ನೂ ಉಳಿದಿದ್ದ ತನ್ನ ಎರಡೂ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದ್ದರೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಳ್ಳಬಹುದಿತ್ತು. ಹೀಗೆ ಎರಡೂ ಪಂದ್ಯಗಳನ್ನು ಗೆದ್ದು ದ್ವಿತೀಯ ಸ್ಥಾನಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲುಪಿದ್ದರೆ ಕ್ವಾಲಿಫೈಯರ್ 1 ಪಂದ್ಯವನ್ನಾಡುವ ಅವಕಾಶ ಸಿಗುವುದರ ಜತೆಗೆ ಆ ಪಂದ್ಯದಲ್ಲಿ ಸೋತರೆ ಮತ್ತೊಂದು ಪಂದ್ಯವನ್ನಾಡುವ ಸುವರ್ಣಾವಕಾಶ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿತ್ತು.

ಆದರೆ ಈ ಅವಕಾಶವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಟೋಬರ್ 6ರಂದು ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ ಕೊನೆಯ ಹಂತದಲ್ಲಿ ಸೋಲುವ ಮೂಲಕ ಕೈಚೆಲ್ಲಿದೆ. ಹಾಗೂ ಟೂರ್ನಿಯಲ್ಲಿ 13 ಪಂದ್ಯಗಳನ್ನು ಪೂರೈಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಗೆಲುವು ಮತ್ತು 5 ಸೋಲುಗಳೊಂದಿಗೆ 16 ಅಂಕಗಳನ್ನು ತನ್ನದಾಗಿಸಿಕೊಂಡು ತೃತೀಯ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಈ ಪಂದ್ಯ ಆರಂಭವಾಗುವ ಮುನ್ನ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ವಿರಾಟ್ ಕೊಹ್ಲಿ ಪಡೆ ಸುಲಭವಾಗಿ ಗೆಲ್ಲಲಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಊಹಿಸಿದ್ದರು. ಆದರೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್‌ಗಳು ಕೊನೆಯ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಕನಸಿಗೆ ತಣ್ಣೀರೆರಚಿದರು. ಪರಿಣಾಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ರನ್‌ಗಳ ಸೋಲನ್ನು ಅನುಭವಿಸುವ ಮೂಲಕ ದ್ವಿತೀಯ ಸ್ಥಾನಕ್ಕೇರುವ ಆಸೆಯಿಂದ ಬಹು ದೂರ ಸರಿದಿದೆ.

ಐಪಿಎಲ್‌ನಿಂದ ನಿವೃತ್ತಿ ಹೊಂದಿದ ನಂತರ ಸಿನಿಮಾ ನಟನಾಗುತ್ತಾರಾ ಧೋನಿ?; ಧೋನಿ ಹೇಳಿದ್ದಿಷ್ಟುಐಪಿಎಲ್‌ನಿಂದ ನಿವೃತ್ತಿ ಹೊಂದಿದ ನಂತರ ಸಿನಿಮಾ ನಟನಾಗುತ್ತಾರಾ ಧೋನಿ?; ಧೋನಿ ಹೇಳಿದ್ದಿಷ್ಟು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಾಸ್ತವವಾಗಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವ ಅವಕಾಶವನ್ನು ಕೈ ತಪ್ಪಿಸಿಕೊಂಡಿರಬಹುದು. ಆದರೆ ಲೆಕ್ಕಾಚಾರದ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದ್ವಿತೀಯ ಸ್ಥಾನಕ್ಕೇರುವಂತಹ ಅವಕಾಶಗಳು ಇನ್ನೂ ಇವೆ. ಆದರೆ ಈ ಲೆಕ್ಕಾಚಾರಗಳು ಅಂದುಕೊಂಡಂತೆ ನಡೆಯುವುದು ಅಷ್ಟು ಸುಲಭದ ಮಾತಲ್ಲ. ಆದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದ್ವಿತೀಯ ಸ್ಥಾನಕ್ಕೆ ಏರಬೇಕೆಂದರೆ ಮುಂದಿನ ಪಂದ್ಯಗಳ ಫಲಿತಾಂಶಗಳು ಈ ಕೆಳಕಂಡಂತೆ ಇರಲೇಬೇಕು..

ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲಬೇಕು

ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋಲಬೇಕು

ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ನೆಟ್ ರನ್ ರೇಟ್ ಜೊತೆಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಒಂದೇ ಒಂದು ಅಧಿಕ ಪಂದ್ಯವನ್ನು ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಕ್ಟೋಬರ್ 7ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಸೆಣಸಾಡಲಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 115 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿದರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಳ್ಳುವ ಹಾದಿ ತೆರೆಯಲಿದೆ. ಆದರೆ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ 80 ರನ್‌ಗಳ ಅಂತರದಲ್ಲಿಯೂ ಸೋತಿರುವ ಉದಾಹರಣೆಗಳೇ ಇಲ್ಲ. ಇನ್ನು ಪಂಜಾಬ್ ಕಿಂಗ್ಸ್‌ನಂತಹ ತಂಡದ ವಿರುದ್ಧ 115 ರನ್‌ಗಳ ಸೋಲು ತೀರಾ ದೂರದ ಮಾತು. ಆದರೂ ಲೆಕ್ಕಾಚಾರದ ಪ್ರಕಾರ ಈ ರೀತಿ ನಡೆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದ್ವಿತೀಯ ಸ್ಥಾನದ ಅವಕಾಶ ಸಿಗಬಹುದು. ಚೆನ್ನೈ ಸೂಪರ್ ಕಿಂಗ್ಸ್ ಇಷ್ಟು ದೊಡ್ಡ ಅಂತರದಲ್ಲಿ ಸೋಲುವುದು ಮಾತ್ರವಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರೆ ಮಾತ್ರ ದ್ವಿತೀಯ ಸ್ಥಾನ ಸಿಗಲಿದೆ, ಅದರ ಮಾಹಿತಿ ಮುಂದೆ ಇದೆ ಓದಿ..

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಚಮತ್ಕಾರ ಮಾಡಬೇಕಿದೆ!

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಚಮತ್ಕಾರ ಮಾಡಬೇಕಿದೆ!

ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 115 ರನ್‌ಗಳ ಅಂತರದಲ್ಲಿ ಸೋಲುವುದು ಮಾತ್ರವಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಟೋಬರ್ 8ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಡ್ಡಾಯವಾಗಿ 115 ರನ್‌ಗಳ ಜಯವನ್ನು ಸಾಧಿಸಲೇಬೇಕಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಹೀನಾಯವಾಗಿ ಸೋತು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೀನಾಯವಾಗಿ ಸೋತರೆ ಮಾತ್ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಟೂರ್ನಿಯ ಅಂತ್ಯಕ್ಕೆ ಪಡೆದುಕೊಳ್ಳಲಿದೆ. ಆದರೆ ಈ ಎರಡೂ ಸಾಧ್ಯತೆಗಳು ಲೆಕ್ಕಾಚಾರದ ಪ್ರಕಾರ ಇದೆಯೇ ಹೊರತು, ಇದು ಸಾಧ್ಯವಾಗುವುದು ತೀರಾ ದೂರದ ಮಾತು.

Harshal Patel ಅವರ ಹೆಸರಿನಲ್ಲಿ ಅಮೋಘ ದಾಖಲೆ | Oneindia Kannada
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಪಂದ್ಯ ಯಾವಾಗ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಪಂದ್ಯ ಯಾವಾಗ?

ಮೇಲ್ಕಂಡ ಲೆಕ್ಕಾಚಾರಗಳ ಪ್ರಕಾರ ಪಂದ್ಯ ನಡೆಯುವುದು ಅಸಾಧ್ಯವೆಂಬುದು ತಿಳಿದಿರುವ ವಿಷಯವೇ, ಹೀಗಾಗಿ ಟೂರ್ನಿಯ ಅಂತ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತೃತೀಯ ಸ್ಥಾನಕ್ಕೆ ಸೀಮಿತವಾಗಲಿದ್ದು ಪ್ಲೇ ಆಫ್ ಸುತ್ತಿನ ಎಲಿಮಿನೇಟರ್ ಪಂದ್ಯದಲ್ಲಿ ಭಾಗವಹಿಸಲಿದೆ. ಸದ್ಯ ಪ್ಲೇ ಆಫ್ ಹಂತಕ್ಕೆ ಪೈಪೋಟಿ ನಡೆಸುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವ ತಂಡ ಪ್ಲೇ ಆಫ್ ಪ್ರವೇಶಿಸಲಿದೆಯೋ ಆ ತಂಡದ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಟೋಬರ್ 11ರ ಸೋಮವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಾಡಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದರೆ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶ ಪಡೆದುಕೊಳ್ಳಲಿದೆ ಅಥವಾ ಸೋತರೆ ಟೂರ್ನಿಯಿಂದ ಹೊರ ಬೀಳಲಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, October 7, 2021, 11:22 [IST]
Other articles published on Oct 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X