ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್

 IPL 2021: I don’t believe in past records in T20 says Rohit Sharma

ಇಡೀ ಕ್ರಿಕೆಟ್ ಜಗತ್ತು ಕಾಯುತ್ತಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮುಂದುವರಿದ ಭಾಗ ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಪುನಾರಂಭವಾಗಿದ್ದು ಸಾಕಷ್ಟು ಚರ್ಚೆ ಮತ್ತು ಸುದ್ದಿಗಳಿಗೆ ಕಾರಣವಾಗಿದೆ.

ಸತ್ಯ ಸ್ವೀಕರಿಸಿ ಮುಂದೆ ಸಾಗಬೇಕು; ಕೊನೆಗೂ ಪಂತ್ ನಾಯಕತ್ವದ ಬಗ್ಗೆ ಮೌನ ಮುರಿದ ಶ್ರೇಯಸ್ ಐಯ್ಯರ್ಸತ್ಯ ಸ್ವೀಕರಿಸಿ ಮುಂದೆ ಸಾಗಬೇಕು; ಕೊನೆಗೂ ಪಂತ್ ನಾಯಕತ್ವದ ಬಗ್ಗೆ ಮೌನ ಮುರಿದ ಶ್ರೇಯಸ್ ಐಯ್ಯರ್

ಹೌದು, ಶ್ರೀಮಂತ ಫ್ರಾಂಚೈಸಿ ಲೀಗ್ ಎಂದೇ ಕರೆಸಿಕೊಳ್ಳುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ನಾಲ್ಕನೇ ಆವೃತ್ತಿ ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಿ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣದಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಹೀಗೆ ಕೊರೋನಾವೈರಸ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯುಎಇಗೆ ಸ್ಥಳಾಂತರಗೊಂಡಿದ್ದು ಟೂರ್ನಿಯ 34ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಪ್ಟೆಂಬರ್ 23ರ ಗುರುವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಸೆಣಸಾಡಲಿವೆ.

ತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತುತಂಡದಲ್ಲಿ ಬೇರೆ ಒಳ್ಳೊಳ್ಳೆ ಆಟಗಾರರಿದ್ದಾರೆ; ಕೊಹ್ಲಿ ನಾಯಕತ್ವ ತ್ಯಜಿಸುತ್ತಿರುವುದರ ಬಗ್ಗೆ ಸುದೀಪ್ ಮಾತು

ಇನ್ನು ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಮೊದಲನೇ ಪಂದ್ಯ ಸೆಪ್ಟೆಂಬರ್ 19ರ ಭಾನುವಾರದಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿರಲಿಲ್ಲ. ಆದರೆ ಇಂದು ( ಸೆಪ್ಟೆಂಬರ್ 23 ) ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು ಪಂದ್ಯಕ್ಕೂ ಮುನ್ನ ಟಿ ಟ್ವೆಂಟಿ ಕ್ರಿಕೆಟ್ ಕುರಿತು ಮಾತನಾಡಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲುವುದು ಸುಲಭವಲ್ಲ

ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲುವುದು ಸುಲಭವಲ್ಲ

ಇನ್ನು ಸೆಪ್ಟೆಂಬರ್ 23ರ ಗುರುವಾರದಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಎದುರಾಳಿ ತಂಡದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 'ಕೊಲ್ಕತ್ತಾ ನೈಟ್ ರೈಡರ್ಸ್ ಒಂದು ಉತ್ತಮ ಎದುರಾಳಿ ತಂಡ, ತಂಡವಾಗಿ ಅವರು ಉತ್ತಮ ಪ್ರದರ್ಶನವನ್ನು ನೀಡುತ್ತಾರೆ. ಹಿಂದಿನ ಪಂದ್ಯದಲ್ಲಿ ಗೆಲುವನ್ನು ಸಾಧಿಸಿರುವ ಕಾರಣದಿಂದಾಗಿ ಕೊಲ್ಕತ್ತಾ ತಂಡ ಖಂಡಿತವಾಗಿಯೂ ದೊಡ್ಡ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಇಂದು ನಡೆಯಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಗೆಲುವು ಸಾಧಿಸುವುದು ಸುಲಭದ ಮಾತಲ್ಲ' ಎಂದು ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.

ದಾಖಲೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದ ರೋಹಿತ್ ಶರ್ಮಾ

ದಾಖಲೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ ಎಂದ ರೋಹಿತ್ ಶರ್ಮಾ

ಇನ್ನು ಮುಂಬೈ ಇಂಡಿಯನ್ಸ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಬಲಿಷ್ಠವಾಗಿದ್ದು ಈ ಹಿಂದೆ ನಡೆದ ಪಂದ್ಯಗಳಲ್ಲಿ ಹೆಚ್ಚಿನ ಪಂದ್ಯಗಳನ್ನು ಗೆದ್ದಿರುವ ಕಾರಣ ಒಳ್ಳೆಯ ದಾಖಲೆಯನ್ನು ಹೊಂದಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಸುಲಭವಾಗಿ ಗೆಲ್ಲಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ರೋಹಿತ್ ಶರ್ಮಾ 'ಮೊದಲನೆಯದಾಗಿ ನನಗೆ ಈ ದಾಖಲೆಗಳ ಬಗ್ಗೆ ಕೊಂಚವೂ ನಂಬಿಕೆಯಿಲ್ಲ, ಅದರಲ್ಲಿಯೂ ಟಿ ಟ್ವೆಂಟಿ ಕ್ರಿಕೆಟ್ ಪಂದ್ಯಗಳಲ್ಲಿ ದಾಖಲೆ ಮೇಲೆ ನಂಬಿಕೆ ಇಡಬಾರದು. ಪಂದ್ಯದ ದಿನ ಯಾವ ರೀತಿಯ ಪ್ರದರ್ಶನವನ್ನು ನೀಡುತ್ತೇವೆ ಎನ್ನುವುದು ಮಾತ್ರ ಲೆಕ್ಕಕ್ಕೆ ಬರುತ್ತದೆ ಹೊರತು ದಾಖಲೆಗಳಲ್ಲ' ಎಂದು ರೋಹಿತ್ ಶರ್ಮಾ ಹೇಳಿಕೆ ನೀಡಿದ್ದಾರೆ.

ನಾಯಕತ್ವದ ಬಗ್ಗೆ ಮೌನ ಮುರಿದ Shreyas Iyer | Oneindia Kannada
ಮುಂಬೈ vs ಕೊಲ್ಕತ್ತಾ ಮುಖಾಮುಖಿ ದಾಖಲೆ:

ಮುಂಬೈ vs ಕೊಲ್ಕತ್ತಾ ಮುಖಾಮುಖಿ ದಾಖಲೆ:

ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ ತಂಡ 22 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 6 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಹೀಗೆ ಒಟ್ಟಾರೆ ಮುಖಾಮುಖಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ದೊಡ್ಡ ಮಟ್ಟದ ಮೇಲುಗೈ ಸಾಧಿಸಿದೆ.

Story first published: Thursday, September 23, 2021, 16:19 [IST]
Other articles published on Sep 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X