ಧೋನಿ ಐಪಿಎಲ್ ನಿವೃತ್ತಿ ಸುದ್ದಿಗೆ ತಿರುವು; ತಾವು ಆಡಲಿರುವ ಕೊನೆಯ ಪಂದ್ಯದ ಕುರಿತು ಬಾಯ್ಬಿಟ್ಟ ಧೋನಿ!

ಎಂಎಸ್ ಧೋನಿ ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಭಾರತ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ಹಲವಾರು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿರುವ ಎಂಎಸ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಓರ್ವ ಯಶಸ್ವಿ ನಾಯಕನಾಗಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಒಟ್ಟು 3 ಐಪಿಎಲ್ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

ಕಳೆದ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಆ ಸಂದರ್ಭದಲ್ಲಿ ಮಾತನಾಡಿದ್ದ ಎಂ ಎಸ್ ಧೋನಿ ಮುಂದಿನ ವರ್ಷ ನಮ್ಮ ತಂಡ ಪುಟಿದೇಳಲಿದ್ದು ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಕಮ್ ಬ್ಯಾಕ್ ಮಾಡಿ ತೋರಿಸುತ್ತೇವೆ ಎಂದು ಭರವಸೆಯನ್ನು ನೀಡಿದ್ದರು. ಎಂಎಸ್ ಧೋನಿ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪುಟಿದೆದ್ದಿದೆ, ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಡೆಲ್ಲಿ ವಿರುದ್ಧದ ಸಿಎಸ್‌ಕೆ ಸೋಲಿಗೆ ಕಾರಣ ಯಾರು ಎಂಬುದನ್ನು ಬಿಚ್ಚಿಟ್ಟ ಎಂಎಸ್ ಧೋನಿಡೆಲ್ಲಿ ವಿರುದ್ಧದ ಸಿಎಸ್‌ಕೆ ಸೋಲಿಗೆ ಕಾರಣ ಯಾರು ಎಂಬುದನ್ನು ಬಿಚ್ಚಿಟ್ಟ ಎಂಎಸ್ ಧೋನಿ

ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂಎಸ್ ಧೋನಿ ಜಾಣ್ಮೆಯ ನಾಯಕತ್ವದಲ್ಲಿ ಅತ್ಯುತ್ತಮ ಹಂತಗಳನ್ನು ತಲುಪುತ್ತಿರುವುದನ್ನು ಮತ್ತು ತಲುಪಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಕಳೆದ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯ ಲೀಗ್ ಹಂತದಲ್ಲಿ ತನ್ನ ಕೊನೆಯ ಪಂದ್ಯ ಮುಗಿಸಿದ ನಂತರ ಎಂಎಸ್ ಧೋನಿ ಪಂದ್ಯೋತ್ತರ ಸಂದರ್ಶನದಲ್ಲಿ ಮಾತನಾಡಿದ್ದರು. ಈ ವೇಳೆ ಇದೇ ನಿಮ್ಮ ಕೊನೆಯ ಐಪಿಎಲ್ ಆವೃತ್ತಿಯಾ ಎಂಬ ಪ್ರಶ್ನೆಗೆ 'ಖಂಡಿತವಾಗಿಯೂ ಇಲ್ಲ' ಎಂದು ಉತ್ತರವನ್ನು ನೀಡುವುದರ ಮೂಲಕ ಮುಂದಿನ ಆವೃತ್ತಿಯಲ್ಲಿಯೂ ಕಣಕ್ಕಿಳಿಯುವ ವಿಷಯವನ್ನು ಎಂಎಸ್ ಧೋನಿ ಹಂಚಿಕೊಂಡಿದ್ದರು.

ಅದೇ ರೀತಿ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ಪಾಲ್ಗೊಂಡಿದ್ದಾರೆ. ಆದರೆ ಈ ಆವೃತ್ತಿಯ ಬಳಿಕ ಎಂ ಎಸ್ ಧೋನಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಭಾರತ ತಂಡದ ಮಾರ್ಗದರ್ಶಕನಾಗಿ ಕೆಲಸ ನಿರ್ವಹಿಸಲಿದ್ದು ಮುಂದಿನ ಐಪಿಎಲ್ ಆವೃತ್ತಿಗಳಲ್ಲಿ ಆಟಗಾರನಾಗಿ ಕಣಕ್ಕಿಳಿಯುವುದು ಅನುಮಾನ ಎಂಬ ಸುದ್ದಿಗಳೂ ಹರಿದಾಡಿದ್ದವು. ಹೌದು, ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಎಂಎಸ್ ಧೋನಿ ಆಡಲಿರುವ ಕೊನೆಯ ಟೂರ್ನಿ ಎಂಬ ಸಾಕಷ್ಟು ಸುದ್ದಿಗಳು ಈಗಾಗಲೇ ಹರಿದಾಡಿದ್ದವು. ಈ ಕುರಿತಾಗಿ ಇದೀಗ ಎಂ ಎಸ್ ಧೋನಿ ಮಾತನಾಡಿದ್ದು ತಾವು ಆಡಲಿರುವ ತಮ್ಮ ಕೊನೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದ ಕುರಿತು ಇತ್ತೀಚೆಗಷ್ಟೇ ಅಭಿಮಾನಿಗಳೊಡನೆ ನಡೆದ ವಿಡಿಯೋ ಚರ್ಚೆಯೊಂದರಲ್ಲಿ ಸುಳಿವನ್ನು ನೀಡಿದ್ದಾರೆ.

ರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗರೈನಾ ಸಿಎಸ್‌ಕೆ ಬಿಟ್ಟು ಬೇರೆ ಯಾವುದೇ ತಂಡದಲ್ಲಿದ್ದರೂ ಅವಕಾಶ ಸಿಗುತ್ತಿರಲಿಲ್ಲ ಎಂದ ಮಾಜಿ ಕ್ರಿಕೆಟಿಗ

ಅಷ್ಟಕ್ಕೂ ಅಭಿಮಾನಿಗಳ ಜೊತೆ ಮಾತನಾಡಿದ ಎಂ ಎಸ್ ಧೋನಿ ತಾವು ಪಾಲ್ಗೊಳ್ಳಲಿರುವ ಕೊನೆಯ ಐಪಿಎಲ್ ಪಂದ್ಯದ ಬಗ್ಗೆ ಕೆಲವೊಂದಷ್ಟು ಕನಸುಗಳನ್ನಿಟ್ಟುಕೊಂಡಿದ್ದು, ಆ ಕನಸುಗಳ ಕುರಿತಾಗಿ ಈ ಕೆಳಕಂಡಂತೆ ಮಾತನಾಡಿದ್ದಾರೆ.

ತಮ್ಮ ಕೊನೆಯ ಐಪಿಎಲ್ ಪಂದ್ಯವನ್ನು ಈ ಕ್ರೀಡಾಂಗಣದಲ್ಲಿಯೇ ಆಡಬೇಕು ಎಂದ ಧೋನಿ

ತಮ್ಮ ಕೊನೆಯ ಐಪಿಎಲ್ ಪಂದ್ಯವನ್ನು ಈ ಕ್ರೀಡಾಂಗಣದಲ್ಲಿಯೇ ಆಡಬೇಕು ಎಂದ ಧೋನಿ

ಎಂ ಎಸ್ ಧೋನಿಗೆ ತಮ್ಮ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂದರೆ ಅಚ್ಚುಮೆಚ್ಚು. ಅದೇ ರೀತಿ ಚೆನ್ನೈ ನಗರವೆಂದರೂ ಕೂಡ ಎಂಎಸ್ ಧೋನಿಗೆ ಅಪಾರವಾದ ಪ್ರೀತಿ ಇದೆ. ಹೀಗಾಗಿ ಎಂ ಎಸ್ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದ ಕೊನೆಯ ಪಂದ್ಯವನ್ನು ಚೆನ್ನೈ ನಗರದಲ್ಲಿರುವ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ಆಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಎಂಎಸ್ ಧೋನಿ ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯವೊಂದರ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ವಿದಾಯವನ್ನು ಹೇಳುವುದು ಖಚಿತವಾಗಿದೆ.

ನಿವೃತ್ತಿ ಈ ವರ್ಷವಂತೂ ಖಂಡಿತ ಅಲ್ಲ

ನಿವೃತ್ತಿ ಈ ವರ್ಷವಂತೂ ಖಂಡಿತ ಅಲ್ಲ

ಕಳೆದ ವರ್ಷವೇ ಎಂ ಎಸ್ ಧೋನಿ ತಮ್ಮ ಕೊನೆಯ ಐಪಿಎಲ್ ಆವೃತ್ತಿಯನ್ನು ಆಡಲಿದ್ದಾರೆ ಎಂಬ ಸುದ್ದಿಯು ದೊಡ್ಡಮಟ್ಟದಲ್ಲಿ ಹಬ್ಬಿತ್ತು. ಆದರೆ ಆ ಸುದ್ದಿಗಳಿಗೆ ಆವೃತ್ತಿಯ ಕೊನೆಯಲ್ಲಿ ಉತ್ತರಿಸಿದ್ದ ಎಂಎಸ್ ಧೋನಿ ಮುಂದಿನ ಆವೃತ್ತಿಯಲ್ಲಿಯೂ ಪಾಲ್ಗೊಳ್ಳುವುದಾಗಿ ಹೇಳಿಕೆ ನೀಡಿದ್ದರು. ಸದ್ಯ ಇದೀಗ ತಮ್ಮ ಕೊನೆಯ ಐಪಿಎಲ್ ಪಂದ್ಯವನ್ನು ಚೆನ್ನೈ ನಗರದ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿಯೇ ಆಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸುವುದರ ಮೂಲಕ ಎಂಎಸ್ ಧೋನಿ ಈ ವರ್ಷ ನಿವೃತ್ತಿಯನ್ನು ಘೋಷಿಸುವುದಿಲ್ಲ ಎಂಬ ಸೂಚನೆಯನ್ನು ನೀಡಿದ್ದಾರೆ. ಹೌದು, ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲ್ಲಾ ಪಂದ್ಯಗಳು ಸಹ ಯುಎಇಯ ಕ್ರೀಡಾಂಗಣಗಳಲ್ಲಿಯೇ ನಡೆಯುತ್ತಿವೆ. ಹೀಗಾಗಿ ಎಂ ಎಸ್ ಧೋನಿ ತಮ್ಮ ಕೊನೆಯ ಪಂದ್ಯವನ್ನು ಚೆನ್ನೈ ನಗರದಲ್ಲಿ ಆಡಬೇಕೆಂಬ ಆಸೆಯನ್ನು ವ್ಯಕ್ತಪಡಿಸುವುದರ ಮೂಲಕ ಮುಂದಿನ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವ ಸೂಚನೆ ನೀಡಿದ್ದಾರೆ.

Pant CSK ವಿರುದ್ಧ ಗೆಲ್ಲುವ ಸಾಧಿಸಿದ ನಂತರ ಹೇಳಿದ್ದೇನು | Oneindia Kannada
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ಬ್ಯಾಟಿಂಗ್ ಪ್ರದರ್ಶನ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ಬ್ಯಾಟಿಂಗ್ ಪ್ರದರ್ಶನ

ಇನ್ನು ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಓರ್ವ ನಾಯಕನಾಗಿ ಎಂ ಎಸ್ ಧೋನಿ ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅತ್ಯುತ್ತಮ ಮಟ್ಟಕ್ಕೆ ಕೊಂಡೊಯ್ದಿರುವುದು ಎಷ್ಟು ನಿಜವೋ, ಓರ್ವ ಬ್ಯಾಟ್ಸ್‌ಮನ್‌ ಆಗಿ ಎಂಎಸ್ ಧೋನಿ ಕಳಪೆ ಪ್ರದರ್ಶನ ನೀಡುತ್ತಿರುವುದು ಕೂಡ ಅಷ್ಟೇ ನಿಜ. ಹೌದು, ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂಎಸ್ ಧೋನಿ ಇದುವರೆಗೂ ಒಟ್ಟು 13 ಪಂದ್ಯಗಳನ್ನಾಡಿದ್ದು ಕೇವಲ 84 ರನ್ ಗಳಿಸಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, October 6, 2021, 8:29 [IST]
Other articles published on Oct 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X