ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಸಾಲು ಸಾಲು ಪಂದ್ಯ ಸೋತ ಮುಂಬೈಗೆ ಪ್ಲೇ ಆಫ್ ಪ್ರವೇಶಿಸಲು ಇವೆ ಈ 2 ಮಾರ್ಗಗಳು

IPL 2021: In these ways Mumbai Indians can still have the chances of qualify for the playoffs

ಮುಂಬೈ ಇಂಡಿಯನ್ಸ್, ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ಸನ್ನು ಸಾಧಿಸಿರುವಂತಹ ತಂಡ. ಬರೋಬ್ಬರಿ 5 ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ 2 ಐಪಿಎಲ್ ಟೂರ್ನಿಗಳಲ್ಲಿ ಸತತವಾಗಿ ಗೆಲುವು ಸಾಧಿಸಿತ್ತು. ಹೌದು, ಹಾಲಿ ಚಾಂಪಿಯನ್ಸ್ ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ 8 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳ ಪೈಕಿ 5 ಟೂರ್ನಿಗಳಲ್ಲಿ ಚಾಂಪಿಯನ್ಸ್ ಆಗಿ ಹೊರ ಹೊಮ್ಮುವುದರ ಮೂಲಕ ಇತ್ತೀಚಿನ ವರ್ಷಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ದೊಡ್ಡಮಟ್ಟದ ಪಾರುಪತ್ಯವನ್ನು ಸಾಧಿಸಿದೆ. ಕಳೆದ ಬಾರಿ ಯುಎಇಯಲ್ಲಿ ನಡೆದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸದೆಬಡಿಯುವುದರ ಮೂಲಕ ಐದನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದ ಮುಂಬೈ ಇಂಡಿಯನ್ಸ್ ತಂಡ ಸದ್ಯ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದೆ.

ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!

ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿರುವ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ 6 ಪಂದ್ಯಗಳಲ್ಲಿ ಸೋತಿದ್ದು, ಜಯ ಸಾಧಿಸಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಹೀಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಗಿರುವ ಮುಂಬೈ ಇಂಡಿಯನ್ಸ್ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸದ್ಯ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಹೀನಾಯವಾಗಿ ಸೋತ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ತನ್ನ ಆರನೇ ಸೋಲನ್ನು ಕಂಡಿತು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತ ಬಳಿಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಾರಿರುವ ಮುಂಬೈ ಇಂಡಿಯನ್ಸ್ ತಂಡ ಕೊಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ಸಮಕ್ಕೆ 8 ಅಂಕಗಳನ್ನು ಪಡೆದುಕೊಂಡಿದ್ದರೂ ಸಹ ಕಡಿಮೆ ನೆಟ್ ರನ್ ರೇಟ್ ಇರುವ ಕಾರಣ ಅಂಕಪಟ್ಟಿಯಲ್ಲಿ ಆ ತಂಡಗಳಿಗಿಂತ ಕೆಳ ಸ್ಥಾನದಲ್ಲಿದೆ.

'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್

ಹೀಗೆ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಕಂಡು ಕಳಪೆಯಾಗಿರುವ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಇನ್ನೂ 4 ಪಂದ್ಯಗಳನ್ನು ಆಡಲಿದ್ದು, ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಹೀಗೆ ಉಳಿದಿರುವ 4 ಪಂದ್ಯಗಳಲ್ಲಿ ಎಷ್ಟು ಪಂದ್ಯಗಳಲ್ಲಿ ಯಾವ ರೀತಿ ಗೆದ್ದರೆ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಬಹುದು ಎಂಬುದರ ಮಾಹಿತಿ ಈ ಕೆಳಕಂಡಂತಿದೆ ಓದಿ.

4 ಪಂದ್ಯಗಳಲ್ಲಿ 4 ಪಂದ್ಯಗಳನ್ನೂ ಗೆಲ್ಲಬೇಕು!

4 ಪಂದ್ಯಗಳಲ್ಲಿ 4 ಪಂದ್ಯಗಳನ್ನೂ ಗೆಲ್ಲಬೇಕು!

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಈಗಾಗಲೇ 10 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಏಳನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಉಳಿದಿರುವ ತನ್ನ ಮುಂದಿನ ಎಲ್ಲಾ 4 ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಳ್ಳಲಿದ್ದು ಪ್ಲೇ ಆಫ್ ಹಂತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗಲಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯಲ್ಲಿ ಉಳಿದಿರುವ ತನ್ನ 4 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ತಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳನ್ನು ಎದುರಿಸಲಿದ್ದು ಈ ಎಲ್ಲಾ ತಂಡಗಳನ್ನೂ ಸೋಲಿಸಬೇಕಾದ ಅನಿವಾರ್ಯತೆ ಇದೆ. ಹೀಗೆ ಈ ಎಲ್ಲಾ ತಂಡಗಳ ವಿರುದ್ಧವೂ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿದರೆ 16 ಅಂಕಗಳನ್ನು ಪಡೆಯುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಳ್ಳಲಿದೆ.

ಒಂದುವೇಳೆ ಕೇವಲ 3 ಪಂದ್ಯಗಳಲ್ಲಿ ಗೆದ್ದರೆ?

ಒಂದುವೇಳೆ ಕೇವಲ 3 ಪಂದ್ಯಗಳಲ್ಲಿ ಗೆದ್ದರೆ?

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಉಳಿದ ಎಲ್ಲಾ 4 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಒಂದುವೇಳೆ ಈ 4 ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯವನ್ನು ಮುಂಬೈ ಇಂಡಿಯನ್ಸ್ ತಂಡ ಸೋತರೆ 14 ಅಂಕಗಳನ್ನು ಪಡೆದುಕೊಳ್ಳಲಿದ್ದು ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಉಳಿದ ತಂಡಗಳ ನಡುವಿನ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಅದರಲ್ಲಿಯೂ ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ತನ್ನ ಮುಂದಿನ ಪ್ರತಿಸ್ಪರ್ಧಿ ತಂಡಗಳಿಗಿಂತ ಕಡಿಮೆಯಿರುವುದು ಇಲ್ಲಿ ದೊಡ್ಡ ಮಟ್ಟದ ಹಿನ್ನಡೆಯನ್ನುಂಟುಮಾಡಿದೆ.

ಇದೇ ರೀತಿ 2014ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಕಡಿಮೆ ನೆಟ್ ರನ್ ರೇಟ್ ಹೊಂದಿ ಲೀಗ್ ಹಂತದಲ್ಲಿನ ತನ್ನ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಣಸಾಡುತ್ತಿದ್ದಾಗ ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ಆ ಪಂದ್ಯದ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲೇಬೇಕಾದ ಸನ್ನಿವೇಶವನ್ನು ಎದುರಿಸಿತ್ತು.

ಪ್ಲೇ ಆಫ್ ಹಾದಿ ಸುಗಮ ಮಾಡಿಕೊಂಡಿರುವ ತಂಡಗಳು

ಪ್ಲೇ ಆಫ್ ಹಾದಿ ಸುಗಮ ಮಾಡಿಕೊಂಡಿರುವ ತಂಡಗಳು

ಸದ್ಯಕ್ಕೆ ಪ್ಲೇ ಆಫ್ ಸುತ್ತಿನ ಪ್ರವೇಶವನ್ನು ಬಹುತೇಕ ಖಚಿತಪಡಿಸಿಕೊಂಡಿರುವ ತಂಡಗಳೆಂದರೆ ಅದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು. ಈ ಎರಡೂ ತಂಡಗಳು ಸಹ ತಲಾ 10 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿವೆ. ಈ ಮೂಲಕ ಎರಡೂ ತಂಡಗಳೂ ಸಹ 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇಆಫ್ ಸುತ್ತಿನ ಹಾದಿಯನ್ನು ಸುಗಮ ಮಾಡಿಕೊಂಡಿವೆ.

Story first published: Wednesday, September 29, 2021, 10:31 [IST]
Other articles published on Sep 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X