ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: DC to SRH, ಪ್ಲೇ ಆಫ್ ಹಂತಕ್ಕೇರಲು ಎಲ್ಲಾ ತಂಡಗಳಿಗಿರುವ ಅವಕಾಶಗಳೆಷ್ಟು?

IPL 2021 in UAE: Playoff Qualification Scenarios of 8 teams ahead of second leg

ಕೊರೊನಾವೈರಸ್‌ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲಾರ್ಧ ಭಾರತದಲ್ಲಿ ನಡೆದು ಮುಂಡೂಡಿಕೆಯಾದ ನಂತರ ಈಗ ದ್ವಿತೀಯಾರ್ಧವನ್ನು ಯುಎಇನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಎಲ್ಲಾ 8 ತಂಡಗಳು ಕೂಡ ಟೂರ್ನಿಯ ಉಳಿದ ಪಂದ್ಯಗಳಲ್ಲಿ ಸ್ಪರ್ಧೆಗೆ ಇಳಿಯಲು ಸಜ್ಜಾಗಿದ್ದು ಅಂತಿಮ ಹಂತದ ಸಿದ್ಧತೆಯನ್ನು ನಡೆಸುತ್ತಿದೆ.

ಬಹುತೇಕ ತಂಡಗಳ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದ್ದು ಎರಡನೇ ಸುತ್ತಿನಲ್ಲಿ ಮುಖಾಮುಖಿಯಾಗಲಿ ಸಜ್ಜಾಗಿದೆ. ಹೀಗಾಗಿ ಪ್ಲೇಆಫ್ ಹಂತಕ್ಕೇರಲು ಎಲ್ಲಾ 8 ತಂಡಗಳಿಗೂ ಇನ್ನೂ ಅವಕಾಶಗಳು ಇದೆ. ದುಬೈನಲ್ಲಿ ನಡೆಯಲಿರುವ ಎರಡನೇ ಚರಣದ ಪಂದ್ಯಗಳಲ್ಲಿ ಯಾವ ತಂಡ ಅದ್ಭುತವಾಗಿ ಪ್ರದರ್ಶನ ನೀಡಿ ಪ್ಲೇಆಫ್ ಹಂತಕ್ಕೇರಲು ಯಶಸ್ವಿಯಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಐಪಿಎಲ್ 2021: ಆರ್‌ಸಿಬಿ ಅತಿ ಹೆಚ್ಚು ಸಮಸ್ಯೆಗೆ ಒಳಗಾಗಲಿದೆ ಎಂಬುದಕ್ಕೆ ಕಾರಣ ತಿಳಿಸಿದ ಚೋಪ್ರಐಪಿಎಲ್ 2021: ಆರ್‌ಸಿಬಿ ಅತಿ ಹೆಚ್ಚು ಸಮಸ್ಯೆಗೆ ಒಳಗಾಗಲಿದೆ ಎಂಬುದಕ್ಕೆ ಕಾರಣ ತಿಳಿಸಿದ ಚೋಪ್ರ

ಹಾಗಾದರೆ ಐಪಿಎಲ್ 14ನೇ ಆವೃತ್ತಿಯಲ್ಲಿ ಪ್ಲೇಆಫ್ ಹಂತಕ್ಕೇರಲು ಎಲ್ಲಾ ತಂಡಗಳ ಮುಂದೆ ಯಾವ ರೀತಿಯ ಅವಕಾಶಗಳಿ ಇದೆ ಎಂಬುದನ್ನು ಮುಂದೆ ಓದಿ..

ಡೆಲ್ಲಿ ಕ್ಯಾಪಿಟಲ್ಸ್

ಡೆಲ್ಲಿ ಕ್ಯಾಪಿಟಲ್ಸ್

ಈ ಬಾರಿಯ ಐಪಿಎಲ್‌ನಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ಆಡಿದ 8 ಪಂದ್ಯಗಳ ಪೈಕಿ ಯುವ ಆಟಗಾರರನ್ನು ಹೊಂದಿರುವ ಡೆಲ್ಲಿ ತಂಡ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂದಿನ ಪಂದ್ಯಗಳಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇಆಫ್ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಿದೆ. ಆದರೆ ಕಳೆದ ಬಾರಿಯ ರನ್ನರ್‌ಅಪ್ ತಂಡವಾಗಿರುವ ಡೆಲ್ಲಿ ಈ ಬಾರಿಯ ಟೂರ್ನಿಯಲ್ಲಿಯೂ ಲೀಗ್ ಹಂತದಲ್ಲಿ ಅಗ್ರ ಎರಡು ತಂಡಗಳ ಪೈಕಿ ಸ್ಥಾನಗಳಿಸಲು ಸೆಣೆಸಾಡಲಿದೆ. ಎರಡನೇ ಹಂತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 6 ಪಂದ್ಯಗಳು ಬಾಕಿಯಿದೆ. ಸನ್‌ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣೆಸಾಟವನ್ನು ನಡೆಸಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್

ಕೊಲ್ಕತ್ತಾ ನೈಟ್ ರೈಡರ್ಸ್

ಇಯಾನ್ ಮೋರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲ ಹಂತ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡುವ ಮೂಲಕ ನಿರಾಸೆ ಅನಿಭವಿಸಿತ್ತು. ಒಟ್ಟು ಏಳು ಪಂದ್ಯಗಳನ್ನು ಆಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 2 ಪಂದ್ಯಗಳಲ್ಲಿ ಮಾತ್ರವೇ ಗೆಲುವಿನ ರುಚಿ ಕಂಡಿದೆ. ಎರಡನೇ ಚರಣದ ಆರಂಭಿಕ ಮೂರು ಪಂದ್ಯಗಳು ಕೂಡ ಅಗ್ರ ಮೂರು ತಂಡಗಳ ವಿರುದ್ಧವೇ ನಡೆಯಲಿದ್ದು ಕೆಕೆಆರ್ ತಂಡದ ಮುಂದಿನ ಹಾದಿ ಕೂಟ ಅತ್ಯಂತ ಕಠಿಣವಾಗಿದೆ. ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಕೆಕೆಆರ್ ಮೊದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳುರು ವಿರುದ್ಧ ನಂತರ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಲಿದೆ. ಈ ಮೂಲಕ ಒಟ್ಟು ಏಳು ಪಂದ್ಯಗಳು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮುಂದಿದ್ದು ಪ್ಲೇಆಫ್ ಹಂತಕ್ಕೇರಬೇಕಾದರೆ ಇದರಲ್ಲಿ ಕನಿಷ್ಠ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ ಕೆಕೆಆರ್. ಸದ್ಯ ಅಂಕಪಟ್ಟಿಯಲ್ಲಿ ಕೆಕೆಆರ್ 7ನೇ ಸ್ಥಾನದಲ್ಲಿದೆ.

ಸನ್‌ರೈಸರ್ಸ್ ಹೈದರಾಬಾದ್

ಸನ್‌ರೈಸರ್ಸ್ ಹೈದರಾಬಾದ್

2016ರ ಐಪಿಎಲ್ ಟೂರ್ನಿಯ ಚಾಂಪಿಯನ್ ತಂಡವಾಗಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದೆ. ಹೀಗಾಗಿ ಯುಎಇ ಚರಣದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದೆ. ಸದ್ಯ ಟೂರ್ನಿಯ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಟೂರ್ನಿಯಲ್ಲಿ ಭರ್ತಿ ಏಳು ಪಂದ್ಯಗಳು ಉಳಿದುಕೊಂಡಿದೆ. ಇದರಲ್ಲಿ ಪ್ಲೇಆಫ್ ಹಂತಕ್ಕೇರಬೇಕಾದರೆ ಕನಿಷ್ಠ ಆರು ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗೆಲವು ಸಾಧಿಸಲೇಬೇಕಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ತಂಡ ಮುಂದಿನ ಭಾಗದಲ್ಲಿ ಕ್ರಮವಾಗಿ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ರಾಜಸ್ಥಾನ್ದ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಟರ್ಸ್ ತಂಡವನ್ನು ಎದುರಿಸಲಿದೆ.

ಪಂಜಾಬ್ ಕಿಂಗ್ಸ್

ಪಂಜಾಬ್ ಕಿಂಗ್ಸ್

ಪಂಜಾಬ್ ಮೂಲದ ಫ್ರಾಂಚೈಸಿ ಈ ಬಾರಿಯ ಟೂರ್ನಿಗೂ ಮುನ್ನ ತಂಡದ ಹೆಸರನ್ನು ಬದಲಾಯಿಸಿಕೊಂಡರೂ ರಾಹುಲ್ ಪಡೆಗೆ ಅದೃಷ್ಟ ಮಾತ್ರ ಕೈಹಿಡಿಯಲಿಲ್ಲ. ಭಾರತದಲ್ಲಿ ನಡೆದ ಮೊದಲಾರ್ಧದ ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಸಂಪೂರ್ಣವಾಗಿ ಅಸ್ಥಿರ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಕೆಎಲ್ ರಾಹುಲ್ ನೇತೃತ್ವದ ತಂಡ ಈಗಾಗಲೇ 8 ಪಂದ್ಯಗಳನ್ನು ಪೂರ್ಣಗೊಳಿಸಿದ್ದು ಆರು ಪಂದ್ಯಗಳು ಬಾಕಿಯಿದೆ. ಆದರೆ ಪ್ಲೇಆಫ್ ಹಂತಕ್ಕೇರಲು ಪಂಜಾಬ್ ತಂಡಕ್ಕೆ ಕನಿಷ್ಠ 5 ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಒತ್ತಡವಿದೆ. ಎರಡನೇ ಹಂತದಲ್ಲಿ ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳನ್ನು ಎದುರಿಸಲಿದೆ.

ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್

ನಿಧಾನವಾಗಿ ಟೂರ್ನಿಯನ್ನು ಆರಂಭಿಸುವ ಸಂಪ್ರದಾಯ ಹೊಂದಿರುವ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿಯೂ ಅದನ್ನು ಮುಂದುವರಿಸಿದೆ. ಐದು ಬಾರಿಯ ಚಾಂಪಿಯನ್ ತಂಡವಾಗಿರುವ ರೋಹಿತ್ ಶರ್ಮಾ ನೇತೃತ್ವದ ತಂಡ ಅಂಕಪಟ್ಟಿಯಲ್ಲಿ ಸದ್ಯ ನಾಲ್ಕನೇ ಸ್ಥಾನವನ್ನು ಪಡದುಕೊಂಡಿದೆ. ಮುಂಬರುವ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (CSK), ಕೋಲ್ಕತ್ತಾ ನೈಟ್ ರೈಡರ್ಸ್ (KKR), ಡೆಲ್ಲಿ ಕ್ಯಾಪಿಟಲ್ಸ್ (DC), ರಾಜಸ್ಥಾನ ರಾಯಲ್ಸ್ (RR), ಸನ್‌ರೈಸರ್ಸ್ ಹೈದರಾಬಾದ್ (SRH), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳನ್ನು ಎದುರಿಸಲಿದೆ.

ರಾಜಸ್ಥಾನ್ ರಾಯಲ್ಸ್

ರಾಜಸ್ಥಾನ್ ರಾಯಲ್ಸ್

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಾರ್ಧದ ಪಂದ್ಯಗಳು ಮುಕ್ತಾಯದ ನಂತರ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಆರ್‌ಆರ್ ತಂಡಕ್ಕೆ ಇನ್ನು 7 ಪಂದ್ಯಗಳು ಉಳಿದುಕೊಂಡಿದ್ದು ಇದರಲ್ಲಿ ಕನಿಷ್ಠ 4 ಪಂದ್ಯಗಳಲ್ಲಿ ಗೆಲ್ಲಲೇಬೇಕಿದೆ. ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೋಲ್ಕತಾ ನೈಟ್ ರೈಡರ್ಸ್ , ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಮಡಗಳ ವಿರುದ್ಧ ಮುಂದಿನ ಪಂದ್ಯಗಳನ್ನು ಯುಎಇನಲ್ಲಿ ಆಡಬೇಕಿದೆ. ಮೊದಲಾರ್ಧದ ಅಂತ್ಯದಲ್ಲಿ ತಂಡದ ಜೋಸ್ ಬಟ್ಲರ್‌ ಸಿಡಿಸಿದ ಭರ್ಜರಿ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಅದ್ಭುತ ಜಯದೊಂದಿಗೆ ಮೊದಲಾರ್ಧವನ್ನು ಅಂತ್ಯಗೊಳಿಸಿತ್ತು. ಆದರೆ ಜೋಸ್ ಬಟ್ಲರ್ ಬೆನ್ ಸ್ಟೋಕ್ಸ್‌ರಂತಾ ಆಟಗಾರರ ಸೇವೆ ಉಳಿದ ಪಂದ್ಯಗಳಿಗೆ ಲಭ್ಯವಿಲ್ಲದಿರುವುದು ತಂಡಕ್ಕೆ ಸವಾಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ ಎರಡನೇ ಚರಣದ ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಪ್ರಾರಂಭಿಸಲಿದೆ.

ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್

2020ರ ಆವೃತ್ತಿಯ ಐಪಿಎಲ್‌ನಲ್ಲಿ ಹಿಂದೆಂದೂ ಕಾಣದಷ್ಟು ಕಳಪೆ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 2021ರ ಆವೃತ್ತಿಯಲ್ಲಿ ಅಮೋಘವಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ. ಭಾರತದಲ್ಲಿ ನಡೆದ ಮೊದಲಾರ್ಧದ 7 ಪಂದ್ಯಗಳ ಪೈಕಿ 5 ಗೆಲುವು ಸಾಧಿಸಿರುವ ಧೋನಿ ಪಡೆಗೆ ಪ್ಲೇಆಫ್ ಅತ್ಯಂತ ಸನಿಹದಲ್ಲಿದೆ. ಈ ಮೂಲಕ ದಾಖಲೆಯ 11ನೇ ಬಾರಿಗೆ ಚೆನ್ನೈ ಪ್ಲೇಆಫ್ ಹಂತಕ್ಕೇರುವ ಅವಕಾಶವಿದೆ. ಮುಂದಿನ ಪಂದ್ಯಗಳಲ್ಲಿ ಸಿಎಸ್‌ಕೆ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಕೋಲ್ಕತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳನ್ನು ಎದುರಿಸಲಿದೆ.

ಹಸರಂಗನಿಗೆ ವಾಟ್ಸ್ ಆಪ್ ಮೆಸೇಜ್ ಮಾಡಿದ ವಿರಾಟ್ ! | Oneindia Kannada
ರಾಯಲ್ ಚಾಲೆಂಜರ್ಸ್ ಬೆಂಗಳೂರು

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್‌ನಲ್ಲಿ ಒಂದು ಬಾರಿಯೂ ಚಾಂಪಿಯನ್ ಪಟ್ಟಕ್ಕೇರುವಲ್ಲಿ ವಿಫಲವಾಗಿರುವ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಈ ಬಾರಿಯ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿಕೊಂಡು ಬಂದಿದೆ. ಆಡಿದ ಏಳು ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಎರಡಲ್ಲಿ ಮಾತ್ರವೇ ಸೋಲು ಕಂಡಿದೆ. ಹೀಗಾಗಿ ಆರ್‌ಸಿಬಿ ತಂಡಕ್ಕೆ ಕೂಡ ಪ್ಲೇಆಫ್ ಹಂತ ಸನಿಹದಲ್ಲಿದೆ. ಆದರೆ ಮುಂಬರುವ ಪಂದ್ಯಗಳಲ್ಲಿ ಮತ್ತಷ್ಟು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಎರಡಲ್ಲಿ ಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ ಆರ್‌ಸಿಬಿ. ಆದರೆ ಮುಂದಿನ ಹಂತಗಳಲ್ಲಿ ಎದುರಾಗುವ ಸವಾಲುಗಳನ್ನು ವಿರಾಟ್ ಕೊಹ್ಲಿ ಪಡೆ ಯಾವ ರೀತಿಯಾಗಿ ಎದುರಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ಮುಂದಿನ ಪಂದ್ಯಗಳಲ್ಲಿ ಆರ್‌ಸಿಬಿ ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಣೆಸಾಡಲಿದೆ.

Story first published: Wednesday, September 15, 2021, 9:45 [IST]
Other articles published on Sep 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X