For Quick Alerts
ALLOW NOTIFICATIONS  
For Daily Alerts
 

ಮುಂದಿನ ಆವೃತ್ತಿಯಿಂದ ವಾರ್ನರ್ ಹೈದರಾಬಾದ್ ಪರ ಆಡುವುದು ಅನುಮಾನ ಎಂದ ಸ್ಟೇನ್

IPL 2021 : IPL 2021: Might be the last time we see David Warner at SRH, says Dale Steyn

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನವನ್ನು ನೀಡಲಿಲ್ಲ. ಸಾಲು ಸಾಲು ಸೋಲಿನಿಂದ ಕಂಗೆಟ್ಟ ಸನ್ ರೈಸರ್ಸ್ ಹೈದರಾಬಾದ್ ತಂಡದ ಮ್ಯಾನೇಜ್‌ಮೆಂಟ್ ಪಂದ್ಯವನ್ನು ಗೆಲ್ಲಲು ಸಾಕಷ್ಟು ತಂತ್ರಗಳನ್ನು ಹೆಣೆದರೂ ಸಹ ಗೆಲುವಿನ ದರ್ಶನ ಆಗುತ್ತಿಲ್ಲ. ಡೇವಿಡ್ ವಾರ್ನರ್ ನಾಯಕತ್ವದಲ್ಲಿ 6 ಪಂದ್ಯಗಳನ್ನಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ ಒಂದು ಪಂದ್ಯದಲ್ಲಿ ಜಯಗಳಿಸಿ 5 ಪಂದ್ಯಗಳಲ್ಲಿ ಮುಗ್ಗರಿಸಿತ್ತು. ಡೇವಿಡ್ ವಾರ್ನರ್ ಅವರ ಕಳಪೆ ನಾಯಕತ್ವದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಸಾಲು ಸಾಲು ಪಂದ್ಯಗಳನ್ನು ಕೈಚೆಲ್ಲುತ್ತಿದೆ ಎಂಬ ರೀತಿ ನಾಯಕತ್ವವನ್ನು ಡೇವಿಡ್ ವಾರ್ನರ್‌ರಿಂದ ಕಸಿದು ಕೇನ್ ವಿಲಿಯಮ್ಸನ್ ಹೆಗಲಿಗೆ ಹಾಕಲಾಯಿತು.

ಆದರೆ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲೂ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಗ್ಗರಿಸಿತು. ನಾಯಕತ್ವದ ಬದಲಾವಣೆಯ ನಂತರ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಿತು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಹೈದರಾಬಾದ್ ತಂಡ 55 ರನ್‌ಗಳ ಹೀನಾಯ ಸೋಲನ್ನು ಕಾಣುವುದರ ಮೂಲಕ ಟೂರ್ನಿಯಲ್ಲಿ 6ನೇ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಸೀಮಿತವಾಯಿತು. ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಹೈದರಾಬಾದ್ ತಂಡದ ಆಡುವ ಬಳಗದಲ್ಲಿ ವಾರ್ನರ್ ಅವರನ್ನು ಸೇರಿಸಿಕೊಳ್ಳದೆ ಕೈಬಿಡಲಾಗಿತ್ತು.

ಸನ್ ರೈಸರ್ಸ್ ಹೈದರಾಬಾದ್ ತಂಡ ತೆಗೆದುಕೊಂಡ ಈ ನಿರ್ಧಾರದಿಂದಲೇ ರಾಜಸ್ಥಾನ್ ವಿರುದ್ಧ ಹೀನಾಯ ಸೋಲನ್ನು ಕಾಣಬೇಕಾಗಿ ಬಂತು ಎಂದು ಸಾಮಾಜಿಕ ಜಾಲತಾಣದಲ್ಲಿ ಹೈದರಾಬಾದ್ ತಂಡದ ವಿರುದ್ಧ ಸಾಕಷ್ಟು ಟೀಕೆಗಳು ಹರಿದಾಡಿದವು. ಸೌತ್ ಆಫ್ರಿಕಾ ತಂಡದ ಆಟಗಾರ ಡೇಲ್ ಸ್ಟೇನ್ ಕೂಡ ಹೈದರಾಬಾದ್ ತಂಡದ ಈ ನಿರ್ಧಾರಕ್ಕೆ ಕಿಡಿಕಾರಿದರು. ವಾರ್ನರ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಯಕತ್ವದಲ್ಲಿ ವಿಫಲತೆ ಕಂಡಿರಬಹುದು ಆದರೆ ಓರ್ವ ಬ್ಯಾಟ್ಸ್‌ಮನ್‌ ಆಗಿ ಐಪಿಎಲ್ ಇತಿಹಾಸದಲ್ಲಿ ಅವರ ಸಾಧನೆ ಬಹಳಷ್ಟಿದೆ, ಇಂತಹ ಆಟಗಾರನನ್ನು ಆಡುವ ಬಳಗದಿಂದ ಹೊರಗಿಟ್ಟದ್ದು ನಿಜಕ್ಕೂ ಆಶ್ಚರ್ಯಕರ ಮತ್ತು ಬೇಸರದ ಸಂಗತಿ ಎಂದು ಸ್ಟೇನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಾರ್ನರ್ ಅವರನ್ನು ಹೈದರಾಬಾದ್ ತಂಡದ ನಾಯಕತ್ವದಿಂದ ವಜಾ ಮಾಡಿರುವುದನ್ನು ಗಮನಿಸಿದರೆ ಮುಂದಿನ ಬಾರಿಯ ಆವೃತ್ತಿಯಲ್ಲಿ ವಾರ್ನರ್ ಹೈದರಾಬಾದ್ ತಂಡದ ಪರ ಆಡುವುದು ಅನುಮಾನ ಎಂದು ಡೇಲ್ ಸ್ಟೇನ್ ಊಹಿಸಿದರು.

Story first published: Tuesday, May 4, 2021, 21:05 [IST]
Other articles published on May 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+