ಈ ತಂಡ ಪ್ಲೇ ಆಫ್ ಪ್ರವೇಶಿಸುತ್ತದೆ ಎಂದು ಯಾರೂ ಊಹಿಸಿರಲಿಲ್ಲ: ಇರ್ಫಾನ್ ಪಠಾಣ್

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತಕ್ಕೆ ತೆರೆಬಿದ್ದಿದ್ದು 56 ಲೀಗ್ ಪಂದ್ಯಗಳು ಸಂಪೂರ್ಣವಾಗಿ ಮುಗಿದಿವೆ.
ಹೀಗೆ ಲೀಗ್ ಹಂತದ ಪಂದ್ಯಗಳು ಸಂಪೂರ್ಣವಾಗಿ ಮುಗಿದ ನಂತರ ನಾಲ್ಕನೇ ತಂಡವಾಗಿ ಯಾವ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂಬ ಗೊಂದಲಕ್ಕೆ ತೆರೆಬಿದ್ದಿದೆ. ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲಿಗೆ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ನಂತರ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇ ಆಫ್ ಹಂತವನ್ನು ಇನ್ನೂ ಕೆಲ ಲೀಗ್ ಹಂತದ ಪಂದ್ಯಗಳು ಬಾಕಿ ಇರುವಾಗಲೇ ಪ್ರವೇಶಿಸಿದ್ದವು.
ಆದರೆ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಾಲ್ಕನೇ ತಂಡವಾಗಿ ಯಾವ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂಬುದು ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಒಂದೆಡೆ ಟೂರ್ನಿಯ ಆರಂಭದಿಂದಲೂ ಸಾಮಾನ್ಯ ಪ್ರದರ್ಶನ ನೀಡುತ್ತಾ ಸಾಲುಸಾಲು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ್ದ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ ಅಂತಿಮ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಪ್ಲೇ ಆಫ್ ಪ್ರವೇಶಿಸುವ ನಿರೀಕ್ಷೆಯನ್ನು ಹುಟ್ಟುಹಾಕಿತ್ತು.
ಮತ್ತೊಂದೆಡೆ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಯುಎಇ ಚರಣ ಆರಂಭವಾದ ಬಳಿಕ ಉತ್ತಮ ಪ್ರದರ್ಶನಗಳನ್ನು ನೀಡಿ ಪ್ಲೇಆಫ್ ಸುತ್ತಿನತ್ತ ಮುಖಮಾಡಿತ್ತು. ಹೀಗೆ ಅಂತಿಮವಾಗಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದುಕೊಳ್ಳುವಲ್ಲಿ ದೊಡ್ಡ ಮಟ್ಟದ ಪೈಪೋಟಿ ಏರ್ಪಟ್ಟಿತ್ತು.
ಹೀಗೆ ಟೂರ್ನಿ ಮುಗಿಯುವ ಹೊತ್ತಿಗೆ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳೆರಡೂ ಸಮನಾದ ಪಂದ್ಯಗಳಲ್ಲಿ ಜಯ ಸಾಧಿಸಿದ್ದರೂ ಕೂಡ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಕೋಲ್ಕತಾ ನೈಟ್ ರೈಡರ್ಸ್ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕಾರಣ ಪ್ಲೇ ಆಫ್ ಸುತ್ತಿಗೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಪ್ರವೇಶಿಸದೇ ಟೂರ್ನಿಯಿಂದ ಹೊರಬಿದ್ದಿದೆ.

ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂದು ಊಹಿಸಿಯೇ ಇರಲಿಲ್ಲ
ಇತ್ತ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನವನ್ನು ತೋರಿತ್ತು. ಆ ಸಂದರ್ಭದಲ್ಲಿ ಯಾರೂ ಕೂಡ ಕೋಲ್ಕತಾ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ ಎಂದು ಊಹಿಸಿಯೇ ಇರಲಿಲ್ಲ. ಈ ವಿಷಯದ ಕುರಿತಾಗಿ ಇದೀಗ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮಾತನಾಡಿದ್ದು ಅಂತಿಮ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ತೋರಿದ ಉತ್ತಮ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

ಉನ್ನತ ಗುಣಮಟ್ಟದ ಆಟವನ್ನಾಡಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿತು
'ಅಂತಿಮ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಉನ್ನತ ಗುಣಮಟ್ಟದ ಆಟವನ್ನಾಡಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿತು. ಕೋಲ್ಕತಾ ನೈಟ್ ರೈಡರ್ಸ್ ತಂಡ ಈ ರೀತಿ ಪ್ಲೇಆಫ್ ಪ್ರವೇಶಿಸಲಿದೆ ಎಂದು ಯಾರೂ ಊಹಿಸಿರಲಿಲ್ಲ. ಅಂತಿಮ ಪಂದ್ಯಗಳಲ್ಲಿ ತಂಡದ ಪ್ರಮುಖ ಆಟಗಾರರಾದ ದಿನೇಶ್ ಕಾರ್ತಿಕ್ ಮತ್ತು ಇಯಾನ್ ಮಾರ್ಗನ್ ಕೂಡ ಉತ್ತಮ ಬ್ಯಾಟಿಂಗ್ ಮಾಡಿರುವುದು ಇತರ ಆಟಗಾರರಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ' ಎಂದು ಇರ್ಫಾನ್ ಪಠಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊನೆಯಲ್ಲಿ ಕಮ್ ಬ್ಯಾಕ್ ಮಾಡಿದ ಕೆಕೆಆರ್
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ ತನ್ನ ಕೊನೆಯ 7 ಪಂದ್ಯಗಳಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 5 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications