ಐಪಿಎಲ್ 2021: ನೆಟ್ ಅಭ್ಯಾಸದಲ್ಲಿ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಸಿಕ್ಸರ್ ಸುರಿಮಳೆ

ಐಪಿಎಲ್ 14ನೇ ಆವೃತ್ತಿಗೆ ಈಗ ಕ್ಷಣಗಣನೆ ಆರಂಬವಾಗಿದ್ದು ಎಲ್ಲಾ ತಂಡಗಳ ಆಟಗಾರರು ಕೂಡ ಅಂತಿಮ ಹಂತದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಬಾರಿಯ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿ ಕೆಳಕ್ಕೆ ಜಾರಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಈ ಬಾರಿ ಮೇಲೆತ್ತಲೇಬೇಕೆಂದು ನಾಯಕ ಎಂಎಸ್ ಧೋನಿ ಪಣತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಧೋನಿ ನೆಟ್ಸ್‌ನಲ್ಲಿ ಸತತವಾಗಿ ಬೆವರಿಳಿಸುತ್ತಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಸೋಮವಾರ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ನೆಟ್ಸ್‌ನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದು ಸಿಕ್ಸರ್‌ಗಳ ಮೇಲೆ ಸಿಕ್ಸರ್ ಬಾರಿಸಿದ್ದಾರೆ. ಮೈದಾನದ ಸುತ್ತಲೂ ಚೆಂಡನ್ನು ಅಟ್ಟುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ.
ಭಾರತೀಯ ಆಟಗಾರರ ಪೈಕಿ ಎಂಎಸ್ ಧೋನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರನಾಗಿದ್ದಾರೆ. 204 ಪಂದ್ಯಗಳಲ್ಲಿ ಆಡಿರುವ ಎಂಎಸ್ ಧೋನಿ 216 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಒಟ್ಟಾರೆಯಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದು 349 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ಕಳೆದ ವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಮಾತನಾಡುತ್ತಾ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಸಮತೋಲಿತ ತಂಡವಾಗಿದೆ. ಆಟದ ಎಲ್ಲಾ ಆಯಾಮಗಳನ್ನು ತಂಡ ಹೊಂದಿದ್ದು ಇದು ತಂಡಕ್ಕೆ ಲಾಭವಾಗಲಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದರು.
ಇನ್ನು ಕಳೆದ ಫೆಬ್ರವರಿಯಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರು ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಮೊಯೀನ್ ಅಲಿ, ಕೃಷ್ಣಪ್ಪ ಗೌತಮ್ ಸಿಎಸ್‌ಕೆ ತಂಡದ ಪಾಲಾಗಿದ್ದರು. ಇದಕ್ಕೂ ಮುನ್ನ ಆರ್‌ಆರ್ ಜೊತೆಗೆ ಟ್ರೇಟ್ ನಡೆಸಿದ ಸಿಎಸ್‌ಕೆ ರಾಬಿನ್ ಉತ್ತಪ್ಪ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications