ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ನೆಟ್ ಅಭ್ಯಾಸದಲ್ಲಿ ಸಿಎಸ್‌ಕೆ ನಾಯಕ ಎಂಎಸ್ ಧೋನಿ ಸಿಕ್ಸರ್ ಸುರಿಮಳೆ

IPL 2021: It’s raining sixes at nets as CSK captain MS Dhoni looks in outstanding touch

ಐಪಿಎಲ್ 14ನೇ ಆವೃತ್ತಿಗೆ ಈಗ ಕ್ಷಣಗಣನೆ ಆರಂಬವಾಗಿದ್ದು ಎಲ್ಲಾ ತಂಡಗಳ ಆಟಗಾರರು ಕೂಡ ಅಂತಿಮ ಹಂತದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಬಾರಿಯ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿ ಕೆಳಕ್ಕೆ ಜಾರಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಈ ಬಾರಿ ಮೇಲೆತ್ತಲೇಬೇಕೆಂದು ನಾಯಕ ಎಂಎಸ್ ಧೋನಿ ಪಣತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಧೋನಿ ನೆಟ್ಸ್‌ನಲ್ಲಿ ಸತತವಾಗಿ ಬೆವರಿಳಿಸುತ್ತಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಸೋಮವಾರ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ನೆಟ್ಸ್‌ನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದು ಸಿಕ್ಸರ್‌ಗಳ ಮೇಲೆ ಸಿಕ್ಸರ್ ಬಾರಿಸಿದ್ದಾರೆ. ಮೈದಾನದ ಸುತ್ತಲೂ ಚೆಂಡನ್ನು ಅಟ್ಟುವಲ್ಲಿ ಧೋನಿ ಯಶಸ್ವಿಯಾಗಿದ್ದಾರೆ.

ಮುಂಬೈ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XI ಹೆಸರಿಸಿದ ಚೋಪ್ರಾಮುಂಬೈ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್ XI ಹೆಸರಿಸಿದ ಚೋಪ್ರಾ

ಭಾರತೀಯ ಆಟಗಾರರ ಪೈಕಿ ಎಂಎಸ್ ಧೋನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರನಾಗಿದ್ದಾರೆ. 204 ಪಂದ್ಯಗಳಲ್ಲಿ ಆಡಿರುವ ಎಂಎಸ್ ಧೋನಿ 216 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಒಟ್ಟಾರೆಯಾಗಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದು 349 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಕಳೆದ ವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಕೋಚ್ ಮೈಕಲ್ ಹಸ್ಸಿ ಮಾತನಾಡುತ್ತಾ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಸಮತೋಲಿತ ತಂಡವಾಗಿದೆ. ಆಟದ ಎಲ್ಲಾ ಆಯಾಮಗಳನ್ನು ತಂಡ ಹೊಂದಿದ್ದು ಇದು ತಂಡಕ್ಕೆ ಲಾಭವಾಗಲಿದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದರು.

ಇನ್ನು ಕಳೆದ ಫೆಬ್ರವರಿಯಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರು ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಮೊಯೀನ್ ಅಲಿ, ಕೃಷ್ಣಪ್ಪ ಗೌತಮ್ ಸಿಎಸ್‌ಕೆ ತಂಡದ ಪಾಲಾಗಿದ್ದರು. ಇದಕ್ಕೂ ಮುನ್ನ ಆರ್‌ಆರ್ ಜೊತೆಗೆ ಟ್ರೇಟ್ ನಡೆಸಿದ ಸಿಎಸ್‌ಕೆ ರಾಬಿನ್ ಉತ್ತಪ್ಪ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು.

Story first published: Monday, April 5, 2021, 19:53 [IST]
Other articles published on Apr 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X