ಐಪಿಎಲ್ ಆರಂಭಿಕ ಪಂದ್ಯಗಳಿಗೆ ಜೋಫ್ರಾ ಆರ್ಚರ್ ಅಲಭ್ಯ: ಇಸಿಬಿ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಇಂಗ್ಲೆಂಡ್ ವೇಗಿ ಜೋಪ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದಾರೆ. ಆದರೆ ಭಾರತದ ವಿರುದ್ಧದ ಏಕದಿನ ಸರಣಿಯ ಜೊತೆಗೆ ಜೋಪ್ರಾ ಆರ್ಚರ್ ಐಪಿಎಲ್‌ನ ಕೆಲ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಬೋರ್ಡ್ ಮಾಹಿತಿ ನೀಡಿದೆ.
ಬಲ ಮೊಣಕೈ ಗಾಯದ ಹಿನ್ನೆಲೆಯಲ್ಲಿ ಜೋಫ್ರಾ ಆರ್ಚರ್ ಏಕದಿನ ತಂಡದಿಂದ ಹೊರಗುಳಿದಿದ್ದು ವೈದ್ಯಕೀಯ ಪರಿಶೀಲನೆಗಾಗಿ ಯುಕೆಗೆ ಮರಳಿದ್ದಾರೆ. ಹೀಗಾಗಿ ಅವರ ವೈದ್ಯಕೀಯ ಪರಿಶೀಲನೆಯ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ವೈದ್ಯರ ನಿಗಾದಲ್ಲಿ ಜೋಫ್ರಾ ಆರ್ಚರ್ ಇರಲಿದ್ದಾರೆ. ಐಪಿಎಲ್‌ನಲ್ಲಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
"ಭಾರತದ ವಿರುದ್ಧದ ಟಿ20 ಅಂತರರಾಷ್ಟ್ರೀಯ ಸರಣಿಯ ಅವಧಿಯಲ್ಲಿ ಆರ್ಚರ್ ಅವರ ಮೊಣಕೈ ಸಮಸ್ಯೆ ಹೆಚ್ಚಾಗಿದೆ. ಅವರ ಕಾರ್ಯಕ್ಷಮತೆಯ ಮಟ್ಟವನ್ನು ಕಾಯ್ದುಕೊಳ್ಳುವುದು ಅವರಿಗೆ ಹೆಚ್ಚು ಸವಾಲಾಗಿ ಪರಿಣಮಿಸಿದೆ" ಎಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ.
ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕಳೆದ ಶನಿವಾರ ಮಾತನಾಡುತ್ತಾ ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸುಳಿವು ನೀಡಿದ್ದರು. ಆರ್ಚರ್ ಮೊಣಕೈ ನೋವು ಹೆಚ್ಚಾಗುತ್ತಿರುವ ವಿಚಾರವನ್ನು ಈ ಸಂದರ್ಭದಲ್ಲಿ ಅವರು ತಿಳಿಸಿದ್ದರು.
ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಪುಣೆಯಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಮೂರು ಪಂದ್ಯಗಳಿಗೂ ಪುಣೆ ಕ್ರೀಡಾಂಗಣ ವೇದಿಕೆಯಾಗಲಿದೆ. ಎರಡು ತಂಡಗಳು ಚುಟುಕು ಸರಣಿಯ ನಂತರ ಏಕದಿನ ಸರಣಿಗೆ ಸಜ್ಜಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications