ಐಪಿಎಲ್ 2021: ಉಳಿದ ಪಂದ್ಯಗಳಿಂದ ಹೊರಗುಳಿಯುವುದನ್ನು ಖಚಿತಪಡಿಸಿದ ಖ್ಯಾತ ಕ್ರಿಕೆಟಿಗ

ಈ ಬಾರಿಯ ಐಪಿಎಲ್ ಟೂರ್ನಿ ಕೊರೊನಾವೈರಸ್‌ನ ಕಾರಣದಿಂದಾಗಿ ಅರ್ಧಕ್ಕೆ ಮುಂದೂಡಿಕೆಯಾಗಿದೆ. ಹೀಗಾಗಿ ಉಳಿದ ಭಾಗವನ್ನು ಸೆಪ್ಟೆಂಬರ್ ತಿಂಗಳಿನ ಮಧ್ಯ ಭಾಗದಲ್ಲಿ ಯುಎಇನಲ್ಲಿ ಆಯೋಜನೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಆದರೆ ಈ ಮುಂದುವರಿದ ಭಾಗಕ್ಕೆ ಕೆಲ ಪ್ರಮುಖ ದೇಶಗಳ ಖ್ಯಾತ ಆಟಗಾರರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.
ಈಗ ಇಂಗ್ಲೆಂಡ್ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಜೋಸ್ ಬಟ್ಲರ್ ಈ ಬಾರಿಯ ಐಪಿಎಲ್‌ಗೆ ಸಂಬಂಧಿಸಿದಂತೆ ತಮ್ಮ ವೈಯಕ್ತಿಕ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳು ತನಗೆ ಮೊದಲ ಆದ್ಯತೆಯಾಗಿದೆ ಎಂದು ಹೇಳುವ ಮೂಲಕ ಈ ಬಾರಿಯ ಆವೃತ್ತಿಯ ಇನ್ನುಳಿದ ಪಂದ್ಯಗಳಿಂದ ಹೊರಗುಳಿಯುವುದನ್ನು ಜೋಸ್ ಬಟ್ಲರ್ ಖಚಿತಪಡಿಸಿದ್ದಾರೆ.
"ಸಾಮಾನ್ಯವಾಗಿ ಐಪಿಎಲ್ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅಡ್ಡಿಯಾಗುವುದಿಲ್ಲ. ಅಡ್ಡಿಯಾದಲ್ಲಿ ಇಂಗ್ಲೆಂಡ್ ನನಗೆ ಪ್ರಮುಖ ಆದ್ಯತೆಯಾಗುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ಬಿಬಿಸಿ ಪ್ರಕಟಿಸಿದೆ. ಐಪಿಎಲ್‌ನಲ್ಲಿ ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ.
ಇನ್ನು ಕಳೆದ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೋಸ್ ಬಟ್ಲರ್ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಚೆನ್ನೈನಲ್ಇ ನಡೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿತ್ತು. ನಂತರ ಇಂಗ್ಲೆಂಡ್‌ನ ರೊಟೇಶನ್ ನಿಯಮದ ಪ್ರಕಾರ ತಂಡದಿಂದ ಹೊರಗುಳಿದು ಇಂಗ್ಲೆಂಡ್‌ಗೆ ಮರಳಿದ್ದರು.
ನಂತರ ಜೋಸ್ ಬಟ್ಲರ್ ಐಪಿಎಲ್‌ನಲ್ಲಿ ಪಾಲ್ಗೊಂಡಿದ್ದರು. ಆದರೆ ನಂತರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಜೋಸ್ ಬಟ್ಲರ್ ಪಂದ್ಯದಿಂದ ಹೊರಗುಳಿದ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಇಂಗ್ಲೆಂಡ್ ಸೋಲು ಅನುಭವಿಸಿದರೆ ಒಂದು ಪಂದ್ಯ ಡ್ರಾ ಫಲಿತಾಂಶವನ್ನು ಕಂಡಿದೆ. "ನಾನು ಸಾಧ್ಯವಾದಷ್ಟು ಪಂದ್ಯಗಳನ್ನು ಆಡಲು ಬಯಸುತ್ತೇನೆ. ನಾನು ಎಲ್ಲದಕ್ಕೂ ಯಾವಾಗಲೂ ಲಭ್ಯವಿರಲು ಬಯಸುತ್ತೇನೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications