ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿಗೆ ಆಘಾತ; ತಂಡದ ಪ್ರಮುಖ ಆಟಗಾರ ಟೂರ್ನಿಯಿಂದಲೇ ಔಟ್!

IPL: Kane Richardson and three other Australian players likely to skip second leg

ಕಳೆದ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ 29 ಪಂದ್ಯಗಳು ಮುಗಿದ ನಂತರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!

ಹೌದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ತೀರ್ಮಾನವನ್ನು ತೆಗೆದುಕೊಂಡಿತ್ತು. ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಮುನ್ನವೇ ಯುಎಇಯಲ್ಲಿ ಆರಂಭಿಸುವ ಯೋಜನೆಯನ್ನು ಬಿಸಿಸಿಐ ಹಾಕಿಕೊಂಡಿತ್ತು.

ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರುಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

ಹೀಗೆ ಬಿಸಿಸಿಐ ಯೋಜಿಸಿದ ರೀತಿಯೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಮುನ್ನವೇ ಯುಎಇಯಲ್ಲಿ ಆರಂಭವಾಗಲಿದೆ. ಸೆಪ್ಟೆಂಬರ್‌ 19 ರಂದು ಯುಎಇಯಲ್ಲಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದ್ದು ಟೂರ್ನಿಯ ಉಳಿದ 31 ಪಂದ್ಯಗಳು ನಡೆಯಲಿವೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಕೆಲ ಆಟಗಾರರು ದುಬೈ ತಲುಪಿದ್ದು ಮುಂಬರಲಿರುವ ಟೂರ್ನಿಗೆ ಮುಂಚಿತವಾಗಿಯೇ ತರಬೇತಿಗಳನ್ನು ನಡೆಸಲು ಸಜ್ಜಾಗಿದ್ದಾರೆ. ಈ ನಡುವೆ ಮುಂಬರಲಿರುವ ಐಪಿಎಲ್ ಟೂರ್ನಿಯಲ್ಲಿ ವಿದೇಶಿ ಆಟಗಾರರ ಭಾಗವಹಿಸುವಿಕೆಯ ಕುರಿತು ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಅದರಲ್ಲಿಯೂ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡದ ಕೆಲ ಆಟಗಾರರು ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹಾಗೂ ಇತ್ತೀಚೆಗೆ ಬಹುತೇಕ ಎಲ್ಲಾ ವಿದೇಶಿ ಆಟಗಾರರು ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವುದು ಖಚಿತ ಎಂದು ಸ್ಪಷ್ಟನೆ ನೀಡಿದ ಬಿಸಿಸಿಐ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿದೇಶಿ ಆಟಗಾರರ ಲಭ್ಯತೆಯ ಕುರಿತು ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆಯಿತು. ಆದರೆ ಇದೀಗ ಆಸ್ಟ್ರೇಲಿಯಾದ ಈ ಕೆಳಕಂಡ 4 ಆಟಗಾರರು ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಆಸ್ಟ್ರೇಲಿಯಾ ತಿಳಿಸಿದ್ದು ಕೆಲ ಐಪಿಎಲ್ ಫ್ರಾಂಚೈಸಿಗಳಿಗೆ ಹಿನ್ನಡೆ ಉಂಟಾಗಿದೆ.

ಆರ್‌ಸಿಬಿಯ ಕೇನ್ ರಿಚರ್ಡ್ಸನ್ ಐಪಿಎಲ್ ಟೂರ್ನಿಯಿಂದ ಔಟ್

ಆರ್‌ಸಿಬಿಯ ಕೇನ್ ರಿಚರ್ಡ್ಸನ್ ಐಪಿಎಲ್ ಟೂರ್ನಿಯಿಂದ ಔಟ್

ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಕೇನ್ ರಿಚರ್ಡ್ಸನ್ ಭಾಗವಹಿಸುವುದಿಲ್ಲ ಎಂದು ಆಸ್ಟ್ರೇಲಿಯಾ ತಿಳಿಸಿದೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ 4 ಕೋಟಿ ಮೊತ್ತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ್ದ ವೇಗಿ ಕೇನ್ ರಿಚರ್ಡ್ಸನ್ ಟೂರ್ನಿಯಲ್ಲಿ ಇದುವರೆಗೂ ಆರ್‌ಸಿಬಿ ಪರ ಕೇವಲ ಒಂದೇ ಒಂದು ಪಂದ್ಯವನ್ನಾಡಿ ಒಂದು ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು. ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೇನ್ ರಿಚರ್ಡ್ಸನ್ ಹೆಚ್ಚು ಪಂದ್ಯಗಳಲ್ಲಿ ಭಾಗಿಯಾಗುವ ಅವಕಾಶ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ಮುಂದುವರಿಯಲಿರುವ ಐಪಿಎಲ್ ಟೂರ್ನಿಯಿಂದಲೇ ಕೇನ್ ರಿಚರ್ಡ್ಸನ್ ಹೊರಬಿದ್ದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೊಂಚ ನಿರಾಸೆಯ ವಿಚಾರವೇ ಸರಿ.

ಇನ್ನೂ ಮೂವರು ಆಸ್ಟ್ರೇಲಿಯನ್ನರು ಅಲಭ್ಯ!

ಇನ್ನೂ ಮೂವರು ಆಸ್ಟ್ರೇಲಿಯನ್ನರು ಅಲಭ್ಯ!

ಮುಂದುವರಿಯಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೇನ್ ರಿಚರ್ಡ್ಸನ್ ಮಾತ್ರವಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರ ಪ್ಯಾಟ್ ಕಮಿನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡದ ಆಟಗಾರರಾದ ಜೇ ರಿಚರ್ಡ್ಸನ್ ಮತ್ತು ರಿಲೆ ಮೆರೆಡಿತ್ ಕೂಡ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯಾ ತಿಳಿಸಿದೆ.

ಈ ಆಟಗಾರರ ಮುಂದೆ t- 20 ಗೆಲ್ಲೋದು ತುಂಬಾ ಕಷ್ಟ ಅಂತೆ | Oneindia Kannada
ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯ

ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯ

ಒಂದೆಡೆ ಆಸ್ಟ್ರೇಲಿಯಾದ 4 ಆಟಗಾರರು ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ತಿಳಿದ ಕೂಡಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯತೆಯ ಕುರಿತು ಅನುಮಾನ ಉಂಟಾಗಿತ್ತು. ಆದರೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಾರೆ ಎಂದು ಆಸ್ಟ್ರೇಲಿಯಾ ಖಚಿತಪಡಿಸಿದೆ.

Story first published: Friday, August 20, 2021, 12:57 [IST]
Other articles published on Aug 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X