ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚೆನ್ನೈ ವಿರುದ್ಧ ಸೋಲಿನ ಜತೆ ಇಯಾನ್ ಮಾರ್ಗನ್ಗೆ 12 ಲಕ್ಷ ದಂಡದ ಬರೆ

IPL 2021 : KKR skipper Eoin Morgan fined Rs 12 lakh for maintaining slow over-rate

14ನೇ ಐಪಿಎಲ್ ಆವೃತ್ತಿಯ 15ನೇ ಪಂದ್ಯ ಬುಧವಾರ (ಏಪ್ರಿಲ್ 22) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಿತು. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಟಾಸ್ ವಿಚಾರದಲ್ಲಿ ನಿಜಕ್ಕೂ ಎಡವಿದ್ದರು. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರುತುರಾಜ್ ಗಾಯಕ್ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ಭರ್ಜರಿ ಆರಂಭವನ್ನು ಮಾಡಿದರು. ಚೆನ್ನೈ ತಂಡ 20 ಓವರ್‌ಗಳಲ್ಲಿ 3 ವಿಕೆಟ್‍ಗಳನ್ನು ಕಳೆದುಕೊಂಡು 220 ರನ್ ಬಾರಿಸಿತು.

ಹೀಗೆ ಟಾಸ್ ಗೆದ್ದು ಚೆನ್ನೈಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 221 ರನ್‌ಗಳ ಬೃಹತ್ ಬೆನ್ನತ್ತಲು ಆರಂಭಿಸಿ ತನ್ನ ಮೊದಲ 5 ವಿಕೆಟ್‍ಗಳನ್ನು ಬಹು ಬೇಗನೇ ಕಳೆದುಕೊಂಡು ಹೀನಾಯ ಸೋಲು ಕಾಣುವ ಹಂತಕ್ಕೆ ಬಂದು ಬಿಟ್ಟಿತ್ತು. ತದನಂತರ ಕೊಲ್ಕತ್ತಾದ ಮಧ್ಯಮ ಕ್ರಮಾಂಕದ ಆಟಗಾರರ ಭರ್ಜರಿ ಆಟದ ನೆರವಿನಿಂದ ಕೊನೆಯ ಓವರ್ ತನಕ ಪಂದ್ಯ ನಡೆಯಿತು. ಕೊನೆಗೆ 19.1 ಓವರ್‌ಗಳಲ್ಲಿ 202 ರನ್‌ಗಳಿಗೆ ಕೊಲ್ಕತ್ತಾ ಆಲ್ಔಟ್ ಆಗುವ ಮೂಲಕ 18 ರನ್‌ಗಳಿಂದ ಸೋಲುಂಡಿತು.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ ಸೋಲಿನ ಗಾಯದ ಮೇಲೆ ದಂಡದ ಬರೆ ಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಾರ್ಗನ್ ಪಡೆ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕಾಗಿ ತಂಡದ ನಾಯಕ ಇಯಾನ್ ಮಾರ್ಗನ್ ಅವರಿಗೆ 12 ಲಕ್ಷ ದಂಡ ವಿಧಿಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್‌ಗಳು ರನ್ ಹೊಳೆ ಹರಿಸುತ್ತಿದ್ದರೆ ಕಂಗಾಲಾದ ಮಾರ್ಗನ್ ನೇತೃತ್ವದ ಕೊಲ್ಕತ್ತಾ ಪಡೆ ನಿಧಾನಗತಿಯ ಬೌಲಿಂಗ್ ಮಾಡಿತ್ತು. ಹೀಗಾಗಿ ನಾಯಕನಿಗೆ ಐಪಿಎಲ್ 2021 ನೀತಿ ಸಂಹಿತೆ ಪ್ರಕಾರ 90 ನಿಮಿಷಗಳಲ್ಲಿ ಬೌಲಿಂಗ್ ಮುಗಿಸದೆ ಇರುವ ಕಾರಣಕ್ಕೆ 12 ಲಕ್ಷ ದಂಡ ವಿಧಿಸಲಾಗಿದೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಕೂಡ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ದಂಡ ಕಟ್ಟಿದ್ದರು. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡ ತನ್ನ ಮೊದಲನೇ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿತ್ತು, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಪಡೆ ನಿಧಾನಗತಿಯ ಬೌಲಿಂಗ್ ಮಾಡಿದ್ದ ಕಾರಣದಿಂದಾಗಿ 12 ಲಕ್ಷ ದಂಡವನ್ನು ವಿಧಿಸಲಾಗಿತ್ತು.

Story first published: Thursday, April 22, 2021, 17:18 [IST]
Other articles published on Apr 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X