ಐಪಿಎಲ್ 2021: ಕೋಲ್ಕತ್ತಾ vs ಚೆನ್ನೈ, ಬಲಿಷ್ಠರಾರು ಗೊತ್ತಾ?!

ಮುಂಬೈ: ಏಪ್ರಿಲ್ 21ರ ಬುಧವಾರ ಮುಂಬೈಯ ವಾಂಖೆಡೆ ಸ್ಟೇಡಿಯಂ ಕುತೂಹಲಕಾರಿ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ಸ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ.
ಈವರೆಗೆ ಎರಡೂ ತಂಡಗಳು ತಲಾ ಮೂರು ಪಂದ್ಯಗಳನ್ನಾಡಿವೆ. ಇದರಲ್ಲಿ ಚೆನ್ನೈ ತಂಡ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಕೋಲ್ಕತ್ತಾ ತಂಡ ಒಂದು ಪಂದ್ಯ ಜಯಿಸಿದೆ. ಅಂಕಪಟ್ಟಿಯಲ್ಲಿ ಚೆನ್ನೈ ಮೂರನೇ ಸ್ಥಾನದಲ್ಲಿದ್ದರೆ, ಕೆಕೆಆರ್ 5ನೇ ಸ್ಥಾನದಲ್ಲಿದೆ.
ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 24 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ 15 ಬಾರಿ ಗೆದ್ದಿದ್ದರೆ, ಕೋಲ್ಕತ್ತಾ 9 ಪಂದ್ಯಗಳಲ್ಲಿ ಗೆದ್ದಿದೆ. ಈ ಅಂಕಿ-ಅಂಶದ ಆಧಾರದಲ್ಲಿ ಸಿಎಸ್‌ಕೆ ಹೆಚ್ಚು ಬಲಶಾಲಿ ತಂಡವಾಗಿ ಕಾಣಿಸಿದೆ.
ಕಳೆದ ಬಾರಿ ಕೆಕೆಆರ್ ಮತ್ತು ಸಿಎಸ್‌ಕೆ ಮುಖಾಮುಖಿಯಲ್ಲಿ 4 ವಿಕೆಟ್ ಗೆಲುವು ದಾಖಲಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ 20 ಓವರ್‌ಗೆ 6 ವಿಕೆಟ್ ಕಳೆದು 172 ರನ್ ಗಳಿಸಿದ್ದರೆ, ಚೆನ್ನೈ 20 ಓವರ್ ಮುಕ್ತಾಯಕ್ಕೆ 6 ವಿಕೆಟ್ ಕಳೆದು 178 ರನ್ ಗಳಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications