For Quick Alerts
ALLOW NOTIFICATIONS  
For Daily Alerts
 

KKR vs MI: ಈ ಮೈಲಿಗಲ್ಲುಗಳ ಮೇಲೆ ರೋಹಿತ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಕಣ್ಣು

IPL 2021, KKR vs MI : Player Records and Approaching Milestones

ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ನಡೆಸಲು ಟೂರ್ನಿಯನ್ನು ಇದೀಗ ಯುಎಇಗೆ ಸ್ಥಳಾಂತರಿಸಲಾಗಿದ್ದು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯ ಭಾಗ ಆರಂಭವಾಗಿದೆ. ಹೌದು, ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಆರಂಭವಾಗಿದ್ದು ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಸೆಪ್ಟೆಂಬರ್ 23ರ ಗುರುವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯ ಇದಾಗಿದ್ದು ಎರಡೂ ತಂಡಗಳಿಗೂ ಈ ಪಂದ್ಯ ಅತಿ ಮುಖ್ಯ ಪಂದ್ಯವಾಗಿದೆ.

ಸದ್ಯ ಯುಎಇಯಲ್ಲಿ ಐಪಿಎಲ್ ಪುನಾರಂಭವಾದ ನಂತರ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸೋಲುಂಡಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಜಯವನ್ನು ಸಾಧಿಸಿದೆ. ಇನ್ನು ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿ, 4 ಪಂದ್ಯಗಳಲ್ಲಿ ಸೋಲುಂಡು 8 ಅಂಕಗಳನ್ನು ಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದರೆ, ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಜಯಗಳಿಸಿ, 5 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಇಂದು ( ಸೆಪ್ಟೆಂಬರ್ 23 ) ಅಬುಧಾಬಿಯಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಎರಡೂ ತಂಡಗಳಿಗೂ ಸಹ ಅತಿಮುಖ್ಯವಾದ ಪಂದ್ಯವಾಗಿದ್ದು, ಈ ಪಂದ್ಯದ ಮೂಲಕ ಎರಡೂ ತಂಡಗಳ ವಿವಿಧ ಆಟಗಾರರು ತಮ್ಮದೇ ಆದ ಈ ಕೆಳಕಂಡ ವೈಯಕ್ತಿಕ ಮೈಲಿಗಲ್ಲುಗಳನ್ನು ನಿರ್ಮಿಸಲಿದ್ದಾರೆ.

* ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿದಿರಲಿಲ್ಲ. ಆದರೆ ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆಗಳಿದ್ದು ರೋಹಿತ್ ಶರ್ಮಾ 5500 ಐಪಿಎಲ್ ರನ್‌ಗಳ ಮೈಲಿಗಲ್ಲನ್ನು ಮುಟ್ಟುವ ಸಾಧ್ಯತೆಯಿದೆ. ರೋಹಿತ್ ಶರ್ಮಾಗೆ ಈ ಮೈಲುಗಲ್ಲನ್ನು ಮುಟ್ಟಲು 20 ರನ್‌ಗಳ ಅಗತ್ಯತೆಯಿದ್ದು ಈ ಪಂದ್ಯದ ಮೂಲಕ ಈ ಸಾಧನೆ ಮಾಡುವ ಸಾಧ್ಯತೆಯಿದೆ.

* ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರ ದಿನೇಶ್ ಕಾರ್ತಿಕ್ ಇಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 4000 ಐಪಿಎಲ್ ರನ್‌ಗಳ ಮೈಲಿಗಲ್ಲನ್ನು ಮುಟ್ಟುವ ಸಾಧ್ಯತೆಗಳಿವೆ. ಈ 4000 ಐಪಿಎಲ್ ರನ್ ಮೈಲುಗಲ್ಲನ್ನು ಮುಟ್ಟಲು ದಿನೇಶ್ ಕಾರ್ತಿಕ್ ಅವರಿಗೆ 54 ರನ್‌ಗಳ ಅಗತ್ಯತೆಯಿದೆ.

* ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಆಟಗಾರ ಹಾರ್ದಿಕ್ ಪಾಂಡ್ಯ ಇದುವರೆಗೂ 95 ಸಿಕ್ಸರ್ ಬಾರಿಸಿದ್ದು 100 ಸಿಕ್ಸರ್ ಮೈಲಿಗಲ್ಲನ್ನು ಪೂರೈಸುವ ಹೊಸ್ತಿಲಲ್ಲಿದ್ದಾರೆ. ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ 5 ಸಿಕ್ಸರ್ ಬಾರಿಸಿದರೆ 100 ಐಪಿಎಲ್ ಸಿಕ್ಸರ್ ಬಾರಿಸಿದ ದಾಖಲೆಯನ್ನು ನಿರ್ಮಿಸಲಿದ್ದಾರೆ.

* ಮುಂಬೈ ಇಂಡಿಯನ್ಸ್ ತಂಡದ ಪರ ಕೃನಾಲ್ ಪಾಂಡ್ಯ 49 ವಿಕೆಟ್‍ಗಳನ್ನು ಪಡೆದಿದ್ದು 50 ವಿಕೆಟ್‍ಗಳ ಮೈಲುಗಲ್ಲನ್ನು ಮುಟ್ಟಲು ಇನ್ನೂ ಒಂದು ವಿಕೆಟ್ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದುಕೊಂಡರೆ ಈ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

* ಇಲ್ಲಿಯವರೆಗೂ ದಿನೇಶ್ ಕಾರ್ತಿಕ್ ವಿಕೆಟ್ ಕೀಪರ್ ಆಗಿ 114 ಕ್ಯಾಚ್‌ಗಳನ್ನು ಪಡೆದುಕೊಂಡಿದ್ದು, ಐಪಿಎಲ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಕ್ಯಾಚ್ ಪಡೆದ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲು ಇನ್ನೂ ಒಂದು ಕ್ಯಾಚ್ ಪಡೆಯುವ ಅಗತ್ಯತೆ ಇದೆ. ಹೀಗಾಗಿ ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಒಂದು ಕ್ಯಾಚ್ ಹಿಡಿದರೆ ಈ ದಾಖಲೆಯನ್ನು ನಿರ್ಮಿಸಲಿದ್ದಾರೆ.

Story first published: Thursday, September 23, 2021, 15:07 [IST]
Other articles published on Sep 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+