ಐಪಿಎಲ್ 2021: ಕೆಕೆಆರ್‌ಗೆ ಕೆಎಲ್ ರಾಹುಲ್ ಪಡೆ ಸವಾಲು: ಪ್ರಿವ್ಯೂ, ಸಂಭಾವ್ಯ ಆಡುವ ಬಳಗ

ಈ ಬಾರಿಯ ಐಪಿಎಲ್‌ನ ಎರಡನೇ ಚರಣದಲ್ಲಿ ಅಮೋಘ ಪ್ರದರ್ಶನ ನಿಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಈಗ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿದೆ. ಪಂಜಾಬ್ ಕಿಂಗ್ಸ್ ಕೆಕೆಆರ್‌ಗೆ ಇಂದು ಸವಾಲೆಸೆಯಲಿದ್ದು ಈ ಪಂದ್ಯದಲ್ಲಿ ಪ್ಲೇಆಫ್‌ಗೇರುವ ಕನಸನ್ನು ಮತ್ತಷ್ಟು ಹತ್ತಿರವಾಗಿಸಲು ಕೆಕೆಆರ್‌ಗೆ ಉತ್ತಮ ಅವಕಾಶ ಇದಾಗಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ಕೂಡ ಈ ಪಂದ್ಯವನ್ನು ಗೆದ್ದು ತಾನು ಕೂಡ ಈ ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಮುಂದುವರಿಯುವ ವಿಶ್ವಾಸದಲ್ಲಿದೆ.

ಭಾರತದಲ್ಲಿ ನಡೆದ ಮೊದಲ ಚರಣದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯುಎಇನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಈ ಮೂಲಕ ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ಸ್ಥಾನವನ್ನು ಉಳಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಸಾಧಿಸುವ ಗೆಲುವು ತಂಡಕ್ಕೆ ನಿರ್ಣಾಯಕವಾಗಿದೆ. ಐದನೇ ಸ್ಥಾನದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಇದ್ದು ಅದು ಕೂಡ ಅವಕಾಶಕ್ಕಾಗಿ ಹಾತೊರೆಯುತ್ತಿದೆ. ಯುಎಇ ಚರಣದಲ್ಲಿ ಅನುಭವಿಸಿದ ಸಾಲು ಸಾಲು ಸೋಲು ಮುಂಬೈ ಇಂಡಿಯನ್ಸ್‌ಗೆ ಭಾರೀ ಹಿನ್ನಡೆಯುಂಟು ಮಾಡಿದೆ.

ಈ ಮಧ್ಯೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಲ್‌ರೌಂಡರ್ ಆಂಡ್ರೆ ರಸೆಲ್ ಫಿಟ್‌ನೆಸ್ ಚಿಂತೆಗೀಡು ಮಾಡಿದೆ. ಅಲ್ಲದೆ ಇಯಾನ್ ಮಾರ್ಗನ್ ಕಳಪೆ ಫಾರ್ಮ್ ಕೂಡ ಕೆಕೆಆರ್‌ಗೆ ಸವಾಲಾಗಿದೆ. ಆದರೆ ಉಳಿದ ಆಟಗಾರರು ಉತ್ತಮ ಲಯದಲ್ಲಿರುವುದು ತಂಡದ ಪ್ಲಸ್‌ ಪಾಯಿಂಟ್.

ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ಸಾಲು ಸಾಲು ಸಮಸ್ಯೆಗಳಿಂದ ಕೂಡಿದೆ. ಮಧ್ಯಮ ಕ್ರಮಾಂಕದ ಆಟಗಾರರಿಂದ ಉತ್ತಮ ಪ್ರದರ್ಶನ ಬಾರದಿರಿವುದು ಆರಂಭಿಕ ಆಟಗಾರರ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಹೀಗಾಗಿ ನಿರ್ಭೀತಿಯಿಂದ ಆಡಲು ಆರಂಭಿಕರಿಂದ ಸಾಧ್ಯವಾಗುತ್ತಿಲ್ಲ. ಹೀಗಾಗೊ ದೊಡ್ಡ ಮೊತ್ತದ ಗುರಿಯನ್ನು ಎದುರಾಳಿಗಳಿಗೆ ನೀಡಲು ಪಂಜಾಬ್ ಹೆಣಗಾಡುತ್ತಿದೆ. ಬೌಲಿಂಗ್ ವಿಭಾಗ ಭರವಸೆ ಮೂಡಿಸಿದ್ದರೂ ಹೆಚ್ಚಿನ ರನ್‌ಗಳಿಸಲು ಬ್ಯಾಟಿಂಗ್ ವಿಭಾಗ ವೈಫಲ್ಯವಾಗುತ್ತಿರುವುದು ತಂಡಕ್ಕೆ ಪ್ರಮುಖ ಹಿನ್ನಡೆಯಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನೀಲ್ ನರೈನ್, ಲಾಕಿ ಫರ್ಗುಸನ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಪ್ರಸಿಧ್ದ್ ಕೃಷ್ಣ

Dhoni ಅವರ ಈ ಒಂದು ಹೊಡೆತಕ್ಕೆ ಅಭಿಮಾನಿಗಳು ಫುಲ್ ಖುಷ್ | Oneindia Kannada

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್(ನಾಯಕ, ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಶಾರೂಕ್ ಖಾನ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಹರಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

For Quick Alerts
ALLOW NOTIFICATIONS
For Daily Alerts
Story first published: Friday, October 1, 2021, 10:28 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X