Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಬೆಂಗಳೂರು vs ಕೊಲ್ಕತ್ತಾ: ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, KKR vs RCB: Pre Match report and playing XI prediction

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿ ಒಂದರಲ್ಲಿ ಸೋತು ಒಂದರಲ್ಲಿ ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿ ಎರಡರಲ್ಲಿಯೂ ಜಯ ಸಾಧಿಸಿ ಯಶಸ್ಸಿನ ಹಾದಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ( ಏಪ್ರಿಲ್ 18 ) ಎದುರಿಸಲಿದೆ.

ಪಂದ್ಯದ ಆರಂಭ: ಪಂದ್ಯ ಮಧ್ಯಾಹ್ನ 3.30ಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ ಇರುವುದಿಲ್ಲ. ಪಂದ್ಯ ಮಧ್ಯಾಹ್ನವೇ ಆರಂಭವಾಗುವುದರಿಂದ ಎರಡನೇ ಇನ್ನಿಂಗ್ಸ್ ವೇಳೆಯಲ್ಲಿಯೂ ಹೆಚ್ಚಾಗಿ ಇಬ್ಬನಿ ಬೀಳುವುದಿಲ್ಲ.

ಪಿಚ್ ರಿಪೋರ್ಟ್

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನ ಪಿಚ್‌ನಲ್ಲಿ ಚೇಸಿಂಗ್ ಬಲು ಕಷ್ಟ. ಚೆನ್ನೈನಲ್ಲಿ ನಡೆದಿರುವ ಈ ಟೂರ್ನಿಯ ಪಂದ್ಯಗಳನ್ನು ಗಮನಿಸಿದರೆ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಸಾಧ್ಯವಾದಷ್ಟು ಹೆಚ್ಚಿನ ರನ್ ಗಳಿಸುವುದು ಉತ್ತಮ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ:

ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ ( ನಾಯಕ ), ಶಹಬಾಝ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್ (ವಿ.ಕೀ), ವಾಷಿಂಗ್ಟನ್ ಸುಂದರ್, ಡೇನಿಯಲ್ ಕ್ರಿಶ್ಚಿಯನ್, ಕೈಲ್ ಜೆಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಹಲ್.

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ:

ನಿತೀಶ್ ರಾಣಾ, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ ( ನಾಯಕ ), ಶಕೀಬ್ ಅಲ್ ಹಸನ್, ದಿನೇಶ್ ಕಾರ್ತಿಕ್ (ವಿ.ಕೀ), ಆ್ಯಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಹರ್ಭಜನ್ ಸಿಂಗ್, ಪ್ರಸಿದ್ಧ್ ಕೃಷ್ಣ ಹಾಗೂ ವರುಣ್ ಚಕ್ರವರ್ತಿ.

Story first published: Sunday, April 18, 2021, 13:26 [IST]
Other articles published on Apr 18, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+