ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್: ವಿಡಿಯೋ

IPL 2021: KL Rahul takes a one-handed stunning catch to dismiss Sanju Samson

ಐಪಿಎಲ್ 2021ರ ಆವೃತ್ತಿಯ 32ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಹಾಗೂ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ರಾಯಲ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಪಂಜಾಬ್ ಕಿಂಗ್ಸ್‌ಗೆ 186 ರನ್‌ಗಳ ದೊಡ್ಡ ಸವಾಲನ್ನು ನೀಡಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಯುಎಇ ಚರಣದಲ್ಲಿ ನೀರಸ ಆರಂಭವನ್ನು ಮಾಡಿದ್ದಾರೆ. ಬ್ಯಾಟಿಂಗ್‌ನಲ್ಲಿ ಸಂಜು ಕೇವಲ 5 ರನ್ ಮಾತ್ರವೇ ಗಳಿಸಲು ಶಕ್ತರಾದರು.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಉತ್ತಮ ರನ್‌ಗಳಿಸುವ ಲೆಕ್ಕಾಚಾರದಲ್ಲಿ ಆತ್ಮವಿಶ್ವಾದೊಂದಿಗೆ ಕಣಕ್ಕಿಳಿದಿದ್ದರು. ಆದರೆ ಇನ್ನಿಂಗ್ಸ್‌ನ 8ನೇ ಓವರ್‌ನ ಮೊದಲ ಎಸೆತದಲ್ಲಿ ಸಂಜು ಸ್ಯಾಮ್ಸನ್ ಎಡವಿದರು. ಇಶಾನ್ ಪೋವೆಲ್ ಶಾರ್ಟ್ ವೈಡ್ ಎಸೆತವನ್ನು ಬಾರಿಸುವ ಯತ್ನದಲ್ಲಿ ಬ್ಯಾಟ್‌ನ ಬದಿಗೆ ಸವರಿಕೊಂಡು ವಿಕೆಟ್ ಕೀಪರ್‌ ರಾಹುಲ್‌ಗಿಂತ ಎತ್ತರದಲ್ಲಿ ಧಾವಿಸಿತ್ತು. ಈ ಕ್ಯಾಚ್‌ಅನ್ನು ಕೆಎಲ್ ರಾಹುಲ್ ಅದ್ಭುತವಾಗಿ ಹಾರಿ ಗ್ಲೌಸ್‌ಗೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿದ್ದಾರೆ.

ಈ ಮೂಲಕ ಸಂಜು ಸ್ಯಾಮ್ಸನ್ ಚೊಚ್ಚಲ ಪಂದ್ಯವನ್ನಾಡುತ್ತಿರುವ ಪೋರೆಲ್‌ಗೆ ಮೊದಲ ವಿಕೆಟ್‌ ಆಗಿ ಬಲಿಯಾದರು. ಪೋರೆಲ್ ಆರಂಭ ಅಷ್ಟೇನೂ ಉತ್ತಮವಾಗಿಲ್ಲದಿದ್ದರೂ ಸಂಜು ಸ್ಯಾಮ್ಸನ್ ವಿಕೆಟ್ ಪಡೆಯುವ ಮೂಲಕ ಉತ್ತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪಡೆ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಲೂಯಿಸ್ ಹಾಗೂ ಜೈಸ್ವಾಲ್ ಜೋಡಿ ಮೊದಲ ವಿಕೆಟ್‌ಗೆ ಸ್ಪೋಟಕ 54 ರನ್‌ಗಳ ಕೊಡುಗೆ ನೀಡಿದ್ದಾರೆ. ಯುವ ಆಟಗಾರ ಯಶಸ್ವೀ ಜೈಸ್ವಾಲ್ ಈ ಪಂದ್ಯದಲ್ಲಿ 36 ಎಸೆತಗಳಲ್ಲಿ 49 ರನ್‌ ಬಾರಿಸುವ ಮೂಲಕ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಂತರ ಮಹಿಪಾಲ್ ಲೋಮ್ರರ್ ಕೇವಲ 17 ಎಸೆತಗಳಲ್ಲಿ 43 ರನ್ ಬಾರಿಸಿ ಮಿಂಚಿದ್ದಾರೆ. ಒಟ್ಟಾರೆಯಾಗಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ ನಿಗದಿತ 20 ಓವರ್‌ಗಳಲ್ಲಿ 185 ರನ್‌ ಬಾರಿಸಿದೆ.

ಇನ್ನು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಅರ್ಷದೀಪ್ ಸಿಂಗ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಅಬ್ಬರದ ಹೊರತಾಗಿಯೂ ಅರ್ಷದೀಪ್ ಸಿಂಗ್ 5 ವಿಕೆಟ್ ಪಡೆದು ಮಿಂಚಿದ್ದಾರೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಕೂಡ 3 ವಿಕೆಟ್ ಕಿತ್ತು ಯಶಸ್ವೀ ಬೌಲರ್ ಎನಿಸಿದ್ದಾರೆ.

Story first published: Tuesday, September 21, 2021, 22:18 [IST]
Other articles published on Sep 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X