ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂಜಾಬ್ ಕಿಂಗ್ಸ್‌ಗೆ ಗೆಲ್ಲಲು 166 ರನ್ ಗುರಿ; ಪ್ಲೇಆಫ್ ಆಸೆಯನ್ನು ಉಳಿಸಿಕೊಳ್ಳುತ್ತಾ ಕೆಕೆಆರ್?

IPL 2021: Kolkata Knight Riders have given the target of 166 runs to Punjab Kings

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಯು. ಎ. ಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 45ನೇ ಪಂದ್ಯ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಅಕ್ಟೋಬರ್ 1ರ ಶುಕ್ರವಾರದಂದು ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಹೀಗೆ ದುಬೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿ, ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿಯನ್ನು ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಅಬ್ಬರಿಸಿದರೆ, ಶುಬ್ಮನ್ ಗಿಲ್ ಮತ್ತೊಮ್ಮೆ ಕಳಪೆ ಆಟವನ್ನು ಮುಂದುವರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಬೌಲರ್ ಫ್ಯಾಬಿಯನ್ ಅಲೆನ್ ಎಸೆದ ಪಂದ್ಯದ ಮೊದಲ ಎಸೆತವನ್ನೇ ಬೌಂಡರಿಗೆ ಅಟ್ಟುವ ಮೂಲಕ ಇನಿಂಗ್ಸ್ ಆರಂಭಿಸಿದ ವೆಂಕಟೇಶ್ ಅಯ್ಯರ್ 49 ಎಸೆತಗಳಲ್ಲಿ 67 ರನ್ ಬಾರಿಸುವ ಮೂಲಕ ಟೂರ್ನಿಯಲ್ಲಿ ತಮ್ಮ ಅತ್ಯದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ವೆಂಕಟೇಶ್ ಅಯ್ಯರ್ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಮತ್ತೊಬ್ಬ ಆಟಗಾರ ಶುಬ್ಮನ್ ಗಿಲ್ 7 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರೆ, ರಾಹುಲ್ ತ್ರಿಪಾಠಿ 34 ರನ್ ಗಳಿಸಿ ಔಟ್ ಆದರು. ನಾಯಕ ಇಯಾನ್ ಮಾರ್ಗನ್ ಎಂದಿನಂತೆ ತಮ್ಮ ಕಳಪೆ ಪ್ರದರ್ಶನವನ್ನು ಈ ಪಂದ್ಯದಲ್ಲಿಯೂ ಮುಂದುವರೆಸಿದ್ದು ಕೇವಲ 2 ರನ್ ಗಳಿಸಿದರು, ನಿತೀಶ್ ರಾಣಾ 18 ಎಸೆತಗಳಲ್ಲಿ 31 ರನ್ ಗಳಿಸಿ ವಿಕೆಟ್ ಒಪ್ಪಿಸಿದರು, ಉಳಿದಂತೆ ಟಿಮ್ ಸೈಫರ್ಟ್ 2 ರನ್, ದಿನೇಶ್ ಕಾರ್ತಿಕ್ 11 ರನ್ ಮತ್ತು ಸುನಿಲ್ ನರೈನ್ ಅಜೇಯ 3 ರನ್ ಗಳಿಸಿದರು.

ಇನ್ನು ಪಂಜಾಬ್ ಕಿಂಗ್ಸ್ ತಂಡದ ಪರ ಅರ್ಷದೀಪ್ ಸಿಂಗ್ 3 ವಿಕೆಟ್, ರವಿ ಬಿಷ್ಣೋಯಿ 2 ವಿಕೆಟ್‍ ಮತ್ತು ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು. ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ಗುರಿಯನ್ನು ನೀಡಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

KKR vs PBKS live score:

1
50850

ಆಡುವ ಬಳಗಗಳು

ಪಂಜಾಬ್ ಕಿಂಗ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್‌), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಾರುಖ್ ಖಾನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

Dhoni ಪಂದ್ಯ ಮುಗಿದ ಬಳಿಕ Afghanistan ಆಟಗಾರನಿಗೆ ಕೊಟ್ಟಿದ್ದೇನು | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಟಿಮ್ ಸೀಫರ್ಟ್, ಸುನಿಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ವರುಣ್ ಚಕ್ರವರ್ತಿ

Story first published: Friday, October 1, 2021, 21:44 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X