ಐಪಿಎಲ್‌ನಲ್ಲಿ ಗೆಲುವಿನ ಶತಕ ಬಾರಿಸಿದ ಕೊಲ್ಕತ್ತಾ ನೈಟ್ ರೈಡರ್ಸ್

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ 10 ರನ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಐಪಿಎಲ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ವಿಶೇಷ ಸಾಧನೆ ಮಾಡಿದ ತಂಡಗಳ ಪಟ್ಟಿಯನ್ನು ಸೇರಿಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲ್ಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 100ನೇ ಗೆಲುವು ಆಚರಿಸಿ ಸಂಭ್ರಮಿಸಿದೆ. ಈ ಸಾಧನೆ ಮಾಡಿದ ಐಪಿಎಲ್‌ನ ಮೂರನೇ ತಂಡವಾಗಿದೆ ಕೊಲ್ಕತ್ತಾ ನೈಟ್ ರೈಡರ್ಸ್.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ತಂಡ ಎಂಬ ದಾಖಲೆ ಮುಂಬೈ ಇಂಡಿಯನ್ಸ್ ಹೆಸರಿನಲ್ಲಿದೆ. ಮುಂಬೈ 120 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದೆ. ಧೋನಿ ನೇತೃತ್ವದ ತಂಡ ಐಪಿಎಲ್‌ನಲ್ಲಿ ಒಟ್ಟು 106 ಬಾರಿ ಗೆಲುವಿನ ರುಚಿ ಕಂಡಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ 2012 ಮತ್ತು 2014ರಲ್ಲಿ ಐಪಿಎಲ್ ಚಾಂಪಿಯನ್ ಎನಿಸಿಕೊಂಡ ತಂಡವಾಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡ ನಂತರ ಅಂಕಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಮಾನ ಅಂಕವನ್ನು ಹೊಂದಿದ್ದರೂ ರನ್‌ರೇಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮುಂದಿದೆ.
ಭಾನುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ಗೆ ಇಳಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿತೀಶ್ ರಾಣಾ ಹಾಗೂ ರಾಹುಲ್ ತ್ರಿಪಾಠಿ ಭರ್ಜರಿ ಅರ್ಧ ಶತಕದ ನೆರವಿನಿಂದ 188 ರನ್‌ಗಳ ಗುರಿಯನ್ನು ಸನ್‌ರೈಸರ್ಸ್ ಮುಂದಿಟ್ಟಿತು. ಆದರೆ ಈ ಗುರಿಯನ್ನು ತಲುಪಲು ಸಾಧ್ಯವಾಗದ ಹೈದರಾಬಾದ್ 10 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಮನೀಶ್ ಪಾಂಡೆ ಅಂತಿಮ ಹಂತದವರೆಗೂ ಹೋರಾಡಿ 61 ರನ್‌ಗಳಿಸಿ ಅಜೇಯವಾಗುಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications