For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಪಂಜಾಬ್ ಕಿಂಗ್ಸ್-ಕೋಲ್ಕತ್ತಾ ನೈಟ್ ರೈಡರ್ಸ್‌ನಲ್ಲಿ ಬಲಿಷ್ಠರಾರು?

IPL 2021: Kolkata Knight Riders vs Punjab Kings, Head to head to head information

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಅಕ್ಟೋಬರ್ 1ರ ಶುಕ್ರವಾರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 45ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳಿಗೂ ಪ್ಲೇ ಆಫ್ಸ್‌ ಪ್ರವೇಶದ ದೃಷ್ಟಿಯಲ್ಲಿ ಈ ಪಂದ್ಯದ ಗೆಲುವು ಪ್ರಮುಖವಾಗಿದೆ.

ಆಡಿರುವ 11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 10 ಪಾಯಿಂಟ್ಸ್‌ ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್‌ ತಂಡ 11ರಲ್ಲಿ 4 ಪಂದ್ಯ ಗೆದ್ದು 8 ಪಾಯಿಂಟ್ಸ್‌ನೊಂದಿಗೆ 6ನೇ ಸ್ಥಾನದಲ್ಲಿದೆ. ಹೀಗಾಗಿ ಪಂಜಾಬ್‌ಗೆ ಗೆಲುವಿನ ಅವಶ್ಯಕತೆ ಇನ್ನೂ ಹೆಚ್ಚಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್‌ನಲ್ಲಿ ಒಟ್ಟು ಎರಡು ಬಾರಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿರುವ ತಂಡ. ಪಂಜಾಬ್ ಕಿಂಗ್ಸ್ ಒಮ್ಮೆಯೂ ಟ್ರೋಫಿ ಗೆಲ್ಲದ ತಂಡಗಳ ಸಾಲಿನಲ್ಲಿದೆ. ಹೀಗಾಗಿ ಪಂಜಾಬ್‌ ಪ್ಲೇ ಆಫ್ಸ್‌ಗೆ ಪ್ರವೇಶಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಡಬೇಕಾದರೆ ಇನ್ನುಳಿದ ಪಂದ್ಯಗಳನ್ನು ಗೆಲ್ಲಲೇಬೇಕು.

ಐಪಿಎಲ್‌ನಲ್ಲಿ ಪಂಜಾಬ್ ಮತ್ತು ಕೋಲ್ಕತ್ತಾ ತಂಡಗಳು 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 19 ಪಂದ್ಯಗಳಲ್ಲಿ ಕೋಲ್ಕತ್ತಾ ಗೆದ್ದಿದ್ದರೆ, 9ರಲ್ಲಿ ಪಂಜಾಬ್ ಗೆದ್ದಿದೆ. ಇದರಲ್ಲೇ ಗೊತ್ತಾಗುತ್ತದೆ; ಪಿಬಿಕೆಎಸ್ ಮತ್ತು ಕೆಕೆಆರ್ ನಡುವಿನ ಪಂದ್ಯದಲ್ಲಿ ಕೆಕೆಆರ್ ಹೆಚ್ಚು ಬಲಶಾಲಿ. ಇಂದಿನ ಪಂದ್ಯದಲ್ಲೂ ಕೋಲ್ಕತ್ತಾ ಗೆಲ್ಲುವ ಸಾಧ್ಯತೆ ಹೆಚ್ಚು.

ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ XI
ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯೋನ್ ಮಾರ್ಗನ್ (ಸಿ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆ), ಸುನಿಲ್ ನರೈನ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಸಂದೀಪ್ ವಾರಿಯರ್, ವರುಣ್ ಚಕ್ರವರ್ತಿ.

ಕೋಲ್ಕತ್ತಾ ನೈಟ್ ರೈಡರ್ಸ್‌ ಸಂಭಾವ್ಯ ಪ್ಲೇಯಿಂಗ್ XI
ಕೆಎಲ್ ರಾಹುಲ್ (ಡಬ್ಲ್ಯೂ/ಸಿ), ಮಂದೀಪ್ ಸಿಂಗ್/ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಹರಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.

Story first published: Friday, October 1, 2021, 13:53 [IST]
Other articles published on Oct 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+