Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈ ಇಂಡಿಯನ್ಸ್ ಪರ ದಾಖಲೆ ಬರೆದ ಕೃನಾಲ್ ಪಾಂಡ್ಯ

IPL 2021: Krunal Pandya completes 50 wickets for Mumbai Indians in IPL

ಅಬುಧಾಬಿ: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಕೃನಾಲ್ ಪಾಂಡ್ಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಸೆಪ್ಟೆಂಬರ್ 28ರಂದು ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪಾಂಡ್ಯ ಈ ಸಾಧನೆ ಮಾಡಿದ್ದಾರೆ.

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಕೃನಾಲ್ ಪಾಂಡ್ಯ 50 ವಿಕೆಟ್‌ಗಳ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್‌ನಲ್ಲಿ 5.2ನೇ ಓವರ್‌ನಲ್ಲಿ ಮನ್‌ದೀಪ್ ಸಿಂಗ್ ಅವರನ್ನು ಎಲ್‌ಬಿಡಬ್ಲ್ಯೂ ಮೂಲಕ ಪೆವಿಲಿಯನ್‌ಗೆ ಕಳುಹಿಸಿ ಕೃನಾಲ್ 50 ವಿಕೆಟ್‌ ದಾಖಲೆ ಪೂರೈಸಿದ್ದಾರೆ.

ಇದೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ನ ಇನ್ನಿಬ್ಬರು ಆಟಗಾರರು ದಾಖಲೆ ನಿರ್ಮಿಸಿದ್ದಾರೆ. ಆಲ್ ರೌಂಡರ್ ಕೀರನ್ ಪೊಲಾರ್ಡ್ 2 ವಿಕೆಟ್‌ಗಳ ಮೂಲಕ ಟಿ20 ಕ್ರಿಕೆಟ್ ಮಾದರಿಯಲ್ಲಿ 300 ವಿಕೆಟ್‌ಗಳ ಸಾಧನೆ ಮೆರೆದರೆ, ಬ್ಯಾಟ್ಸ್‌ಮನ್‌ ಕ್ವಿಂಟನ್ ಡಿ ಕಾಕ್ ಟಿ20ಯಲ್ಲಿ 7000 ರನ್ ಗಡಿ ದಾಟಿದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್ ಕಿಂಗ್ಸ್‌ ಕೆಎಲ್ ರಾಹುಲ್ 21, ಮನ್‌ದೀಪ್ ಸಿಂಗ್ 15, ಕ್ರಿಸ್ ಗೇಲ್ 1, ಐಡೆನ್ ಮಾರ್ಕ್ರಮ್ 1, ನಿಕೋಲಸ್ ಪೂರನ್ 2, ದೀಪಕ್ ಹೂಡ 28, ಹರ್ಪ್ರೀತ್‌ ಬ್ರಾರ್ 14, ನೇತನ್ ಎಲ್ಲಿಸ್ 6 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ಕಳೆದು 135 ರನ್ ಗಳಿಸಿತ್ತು.

ಗುರಿ ಬೆನ್ನಟ್ಟಿದ ಮುಂಬೈ, ರೋಹಿತ್ ಶರ್ಮಾ 8, ಕ್ವಿಂಟನ್ ಡಿ ಕಾಕ್ 27, ಸೌರಭ್ ತಿವಾರಿ 45, ಹಾರ್ದಿಕ್ ಪಾಂಡ್ಯ 40, ಕೀರನ್ ಪೊಲಾರ್ಡ್ 15 ರನ್‌ನೊಂದಿಗೆ 19 ಓವರ್‌ಗೆ 4 ವಿಕೆಟ್ ಕಳೆದು 137 ರನ್ ಗಳಿಸಿತು. ಆಲ್ ರೌಂಡರ್ ಪ್ರದರ್ಶನ ನೀಡಿದ ಕೀರನ್ ಪೊಲಾರ್ಡ್ ಪಂದ್ಯಶ್ರೇಷ್ಠರೆನಿಸಿದರು.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI
ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಾಹರ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆಎಲ್ ರಾಹುಲ್ (c & wk), ಮನ್ ದೀಪ್ ಸಿಂಗ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಹರಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್.

Story first published: Wednesday, September 29, 2021, 10:27 [IST]
Other articles published on Sep 29, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+