ಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರು

RCB ತಂಡಕ್ಕೆ ಸ್ಟಾರ್ ಆಟಗಾರನ ಎಂಟ್ರಿ ! | Oneindia Kannada

ಇದೇ ವರ್ಷದ ಏಪ್ರಿಲ್ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆದ ಲೀಗ್ ಹಂತದ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೊನಾ ವೈರಸ್ ಸೋಂಕಿನ ಹರಡುವಿಕೆಯಿಂದ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?

ಹೀಗೆ ಭಾರತದಲ್ಲಿಯೇ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯಾವುದೇ ಅಡಚಣೆಯಿಲ್ಲದೇ 29 ಪಂದ್ಯಗಳು ಮುಗಿಯುವವರೆಗೂ ಯಶಸ್ವಿಯಾಗಿ ನಡೆದಿತ್ತು. ಆದರೆ ನಂತರ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಆ ಕ್ಷಣವೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ ಎಂಬ ಆದೇಶವನ್ನು ಹೊರಡಿಸಿತ್ತು.

ಹೀಗೆ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇಗೆ ಯೋಜಿಸಿದಂತೆ ಬಿಸಿಸಿಐ ಸ್ಥಳಾಂತರಿಸಿದ್ದು ಮುಂಬರುವ ಸೆಪ್ಟೆಂಬರ್ ತಿಂಗಳಿನ 19 ನೇ ತಾರೀಖಿನಿಂದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯು. ಎ. ಇ. ಯಲ್ಲಿ ಮುಂದುವರಿಯಲಿದೆ.

ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!ಕೊಹ್ಲಿಯದ್ದು ಹೊಲಸುಬಾಯಿ; ಆತ ರೂಟ್, ವಿಲಿಯಮ್ಸನ್ ಮತ್ತು ಸಚಿನ್ ರೀತಿ ಉತ್ತಮನಲ್ಲ ಎಂದ ಮಾಜಿ ಕ್ರಿಕೆಟಿಗ!

ಹೀಗೆ ಸೆಪ್ಟೆಂಬರ್ ತಿಂಗಳಿನಿಂದ ಯು. ಎ. ಇ. ಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಲವಾರು ಆಟಗಾರರು ಅಲಭ್ಯರಾದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ಶನಿವಾರ ( ಆಗಸ್ಟ್ 21 ) ಘೋಷಣೆಯನ್ನು ಮಾಡಿತ್ತು. ಹೀಗೆ ಮೂವರು ಆಟಗಾರರು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ದ್ವಿತೀಯಾರ್ಧಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡ ನಂತರ ಆಟಗಾರರ ಪ್ರದರ್ಶನದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಹೊಸ ಆಟಗಾರರು ಈ ಹಿಂದೆ ವಿವಿಧ ಟೂರ್ನಿಗಳಲ್ಲಿ ಯಾವ ರೀತಿಯ ಪ್ರದರ್ಶನ ನೀಡಿದ್ದಾರೆ ಮತ್ತು ಅವರ ಆಟದ ಅತ್ಯುತ್ತಮ ಅಂಕಿ ಅಂಶಗಳು ಹೇಗಿವೆ ಎಂಬುದರ ಕುರಿತು ಚರ್ಚೆಯಾಗುತ್ತಿದ್ದು ಇದೇ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಆಟಗಾರರು ಮತ್ತು ಕಳಪೆ ಪ್ರದರ್ಶನ ತೋರಿದ ಆಟಗಾರರ ಕುರಿತೂ ಸಹ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಹದಿನಾಲ್ಕನೇ ಆವೃತ್ತಿಯ ಮೊದಲಾರ್ಧದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೂವರು ಆಟಗಾರರು ಮತ್ತು ಕಳಪೆ ಪ್ರದರ್ಶನ ನೀಡಿ ನೆಲಕಚ್ಚಿದ ಇಬ್ಬರು ಆಟಗಾರರ ಪಟ್ಟಿ ಮುಂದೆ ಇದೆ ಓದಿ...

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮೂವರು ಆಟಗಾರರ ಪಟ್ಟಿ:

1. ಗ್ಲೆನ್ ಮ್ಯಾಕ್ಸ್‌ವೆಲ್

1. ಗ್ಲೆನ್ ಮ್ಯಾಕ್ಸ್‌ವೆಲ್

ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೆರ್ಸಿ ತೊಟ್ಟು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿ ಬೆಂಗಳೂರು ತಂಡದ ಪರ ಮೊದಲಾರ್ಧದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡರು. ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 2 ಅರ್ಧ ಶತಕಗಳನ್ನು ಬಾರಿಸಿ ಮಿಂಚಿದ ಗ್ಲೆನ್ ಮ್ಯಾಕ್ಸ್‌ವೆಲ್ 7 ಪಂದ್ಯಗಳನ್ನಾಡಿ ಒಟ್ಟು 223 ರನ್ ಬಾರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಉತ್ತಮ ಪ್ರದರ್ಶನ ನೀಡಿದ ಆಟಗಾರ ಎನಿಸಿಕೊಂಡರು.

2. ಎಬಿ ಡಿವಿಲಿಯರ್ಸ್

2. ಎಬಿ ಡಿವಿಲಿಯರ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಪದ್ಬಾಂಧವ ಡಿ ವಿಲಿಯರ್ಸ್ ಎಂದೇ ಖ್ಯಾತಿಯನ್ನು ಪಡೆದಿರುವ ಮಿಸ್ಟರ್ 360 ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯಲ್ಲಿ ಪ್ರತಿ ವರ್ಷವೂ ಸಹ ಸ್ಥಾನ ಪಡೆದುಕೊಳ್ಳುತ್ತಿರುವಂಥ ಆಟಗಾರನಾಗಿದ್ದಾರೆ. ಇಷ್ಟು ವರ್ಷಗಳ ಹಾಗೆ ಈ ವರ್ಷವೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಎಬಿ ಡಿವಿಲಿಯರ್ಸ್ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ತಂಡಕ್ಕೆ ಆಸರೆಯಾದರು. ಈ ಬಾರಿಯ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಮೊದಲನೇ ಪಂದ್ಯದಲ್ಲಿ 27 ಎಸೆತಗಳಲ್ಲಿ 48 ರನ್ ಬಾರಿಸಿ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟ ಎಬಿ ಡಿವಿಲಿಯರ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಅಜೇಯ 76 ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಅಜೇಯ 75 ರನ್ ಬಾರಿಸಿ ಮಿಂಚಿದರು. ಹೀಗೆ ಹದಿನಾಲ್ಕನೇ ಆವೃತ್ತಿಯ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿದ ಎಬಿ ಡಿವಿಲಿಯರ್ಸ್ 207 ರನ್ ಬಾರಿಸಿ ಬೆಂಗಳೂರು ತಂಡದ ಪರ ಉತ್ತಮ ಪ್ರದರ್ಶನವನ್ನು ನೀಡಿದರು.

3. ಹರ್ಷಲ್ ಪಟೇಲ್

3. ಹರ್ಷಲ್ ಪಟೇಲ್

ಏಪ್ರಿಲ್ 9 ರಂದು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 4 ಓವರ್ ಮಾಡಿ, 27 ರನ್ ನೀಡಿ 5 ವಿಕೆಟ್‍ಗಳನ್ನು ಪಡೆದಿದ್ದ ಹರ್ಷಲ್ ಪಟೇಲ್ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 17 ವಿಕೆಟ್ ಪಡೆದು ಮಿಂಚಿದ್ದಾರೆ.

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಳಪೆ ಪ್ರದರ್ಶನ ನೀಡಿದ ಇಬ್ಬರು ಆಟಗಾರರ ಪಟ್ಟಿ:

1. ಯಜುವೇಂದ್ರ ಚಹಾಲ್

1. ಯಜುವೇಂದ್ರ ಚಹಾಲ್

ಇಷ್ಟು ವರ್ಷಗಳ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಭಾಗವಹಿಸಿದ ಎಲ್ಲಾ ಆವೃತ್ತಿಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದ್ದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಕ್ಷರಶಃ ಮಂಕಾಗಿದ್ದರು. ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ 7 ಪಂದ್ಯಗಳಲ್ಲಿ ಭಾಗವಹಿಸಿದ ಯಜುವೇಂದ್ರ ಚಹಾಲ್ ಕೇವಲ 4 ವಿಕೆಟ್ ಪಡೆದು ನಿರಾಸೆ ಮೂಡಿಸಿದರು.

2 ವಿರಾಟ್ ಕೊಹ್ಲಿ

2 ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅಜೇಯ 72 ರನ್ ಗಳಿಸಿದ್ದು ಬಿಟ್ಟರೆ ಬೇರೆ ಯಾವುದೇ ಪಂದ್ಯದಲ್ಲಿಯೂ ಅರ್ಧಶತಕವನ್ನು ಬಾರಿಸಿಲ್ಲ. ಹೀಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲನೇ ಭಾಗದಲ್ಲಿ 7 ಪಂದ್ಯಗಳನ್ನಾಡಿ 198 ರನ್ ಬಾರಿಸಿದ ವಿರಾಟ್ ಕೊಹ್ಲಿ ದೊಡ್ಡ ಮಟ್ಟದ ಯಶಸ್ವಿ ಪ್ರದರ್ಶನವನ್ನು ನೀಡುವಲ್ಲಿ ಎಡವಿದ್ದಾರೆ.

ಹೀಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ವನ್ನು ನೀಡದೇ ಮಂಕಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಈ ಇಬ್ಬರು ಆಟಗಾರರು ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಭಾಗದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಯಶಸ್ಸಿನ ಹಾದಿಗೆ ಮರಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, August 23, 2021, 16:03 [IST]
Other articles published on Aug 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X