ಐಪಿಎಲ್ : ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದವರ ಪಟ್ಟಿ
ಇಂಡಿಯನ್ ಪ್ರೀಮಿಯರ್ ಲೀಗ್ ಹತ್ತಿರ ಬರುತ್ತಿದ್ದಂತೆ ಐಪಿಎಲ್ ಕ್ರೇಜ್ ದಿನ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೇ ತಿಂಗಳ 9ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವಾರು ದಾಖಲೆಗಳು ಬ್ರೇಕ್ ಆಗುವ ಸಾಧ್ಯತೆ ಇದ್ದು ಅದರಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದ ಆಟಗಾರರ ದಾಖಲೆಯೂ ಒಂದು. ಇಲ್ಲಿಯವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಎಬಿ ಡಿವಿಲಿಯರ್ಸ್ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆಯುವುದರ ಮೂಲಕ ಆ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಉಳಿಸಿಕೊಂಡಿದ್ದಾರೆ.
ಎಬಿ ಡಿವಿಲಿಯರ್ಸ್ ಇದುವರೆಗೂ ಐಪಿಎಲ್ ಟೂರ್ನಿಯಲ್ಲಿ ಒಟ್ಟು 23 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ಈ ದಾಖಲೆಯನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಾರಾದರೂ ಅಳಿಸಿ ಹಾಕುತ್ತಾರಾ ಅಥವಾ ಎಬಿ ಡಿವಿಲಿಯರ್ಸ್ ಅವರೇ ಉಳಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕು.
ಇಲ್ಲಿಯವರೆಗೂ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದುಕೊಂಡ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ..

1. ಎಬಿ ಡಿವಿಲಿಯರ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಅತಿಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಐಪಿಎಲ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಎಬಿಡಿ ಇದುವರೆಗೂ ಪಡೆದಿರುವ ಒಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿಗಳ ಸಂಖ್ಯೆ 23.

2. ಕ್ರಿಸ್ ಗೇಲ್
ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ ಒಟ್ಟು 22 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದು ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಇದುವರೆಗೂ ಒಟ್ಟು 18 ಐಪಿಎಲ್ ಪಂದ್ಯಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಸಾಲಿನಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

4. ಡೇವಿಡ್ ವಾರ್ನರ್
ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಇದುವರೆಗೂ ಐಪಿಎಲ್ ಟೂರ್ನಿಯಲ್ಲಿ ಒಟ್ಟು 17 ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ .

5. ಎಂ ಎಸ್ ಧೋನಿ
ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಇದುವರೆಗೂ 17 ಬಾರಿ ಐಪಿಎಲ್ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications