ಟಿ20 ಕ್ರಿಕೆಟ್‌ನಲ್ಲಿ 7000 ರನ್ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳ ಪಟ್ಟಿ

ದುಬೈ: ಬುಧವಾರ (ಸೆಪ್ಟೆಂಬರ್ 29) ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 43ನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಸಿಬಿ ಪರ ಬಿರುಸಿನ ಅರ್ಧ ಶತಕ ಬಾರಿಸಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಮ್ಯಾಕ್ಸ್‌ವೆಲ್ 7000 ರನ್ ಕೂಡ ಪೂರೈಸಿದ್ದಾರೆ.

ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಪರ ಜಾರ್ಜ್ ಗಾರ್ಟನ್ ಪಾದಾರ್ಪಣೆಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಪರ ಜಾರ್ಜ್ ಗಾರ್ಟನ್ ಪಾದಾರ್ಪಣೆ

ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಆರ್‌ಸಿಬಿ ಪರ 4ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಂದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ 30 ಎಸೆತಗಳಲ್ಲಿ 50 ರನ್ ಬಾರಿಸಿದರು. ಇದರಲ್ಲಿ 6 ಫೋರ್ಸ್, 1 ಸಿಕ್ಸರ್ ಸೇರಿತ್ತು. ಇದರೊಂದಿಗೆ ಮ್ಯಾಕ್ಸ್‌ವೆಲ್ ಟಿ20 ಕ್ರಿಕೆಟ್‌ನಲ್ಲಿ 7000 ರನ್ ಪೂರೈಸಿದ್ದಾರೆ.

32ರ ಹರೆಯದ ಮ್ಯಾಕ್ಸ್‌ವೆಲ್, 7 ಟೆಸ್ಟ್‌ ಪಂದ್ಯಗಳಲ್ಲಿ 339 ರನ್, 8 ವಿಕೆಟ್, 116 ಏಕದಿನ ಪಂದ್ಯಗಳಲ್ಲಿ 3230 ರನ್, 51 ವಿಕೆಟ್‌, 72 ಟಿ20ಐ ಪಂದ್ಯಗಳಲ್ಲಿ 1780 ವಿಕೆಟ್‌, 92 ಐಪಿಎಲ್ ಪಂದ್ಯಗಳಲ್ಲಿ 1805 ರನ್, 22 ವಿಕೆಟ್‌ ದಾಖಲೆ ಹೊಂದಿದ್ದಾರೆ. ಇದರೊಂದಿಗೆ ಟಿ20ಯಲ್ಲಿ 7000 ರನ್ ಬಾರಿಸಿದ ಆಸೀಸ್ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಮ್ಯಾಕ್ಸಿ ಕೂಡ ಸೇರಿಕೊಂಡಿದ್ದಾರೆ.

ಪಾಕಿಸ್ತಾನದ ಆಲ್ ರೌಂಡರ್ ಮೊಹಮ್ಮದ್ ಹಫೀಜ್ ತಂಡದಿಂದ ಹೊರಕ್ಕೆಪಾಕಿಸ್ತಾನದ ಆಲ್ ರೌಂಡರ್ ಮೊಹಮ್ಮದ್ ಹಫೀಜ್ ತಂಡದಿಂದ ಹೊರಕ್ಕೆ

ಟಿ20ಯಲ್ಲಿ 7000 ರನ್ ಬಾರಿಸಿರುವ ಆಸ್ಟ್ರೆಲಿಯಾ ಆಟಗಾರರ ಪಟ್ಟಿ
* ಡೇವಿಡ್ ವಾರ್ನರ್ (10019)
* ಆ್ಯರನ್ ಫಿಂಚ್ (9845)
* ಶೇನ್ ವ್ಯಾಟ್ಸನ್ (8821)
* ಬ್ರಾಡ್ ಹಾಡ್ಜ್ (7406)
* ಗ್ಲೆನ್ ಮ್ಯಾಕ್ಸ್‌ವೆಲ್ (7002*)

ದುಬೈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್, ಎವಿನ್ ಲೂಯಿಸ್ 58, ಯಶಸ್ವಿ ಜೈಸ್ವಾಲ್ 31, ಸಂಜು ಸ್ಯಾಮ್ಸನ್ 19, ಲಿಯಾಮ್ ಲಿವಿಂಗ್ಸ್ಟೋನ್ 6, ಮಹಿಪಾಲ್ ಲೊಮ್ರರ್ 3, ರಿಯಾನ್ ಪರಾಗ್ 9, ರಾಹುಲ್ ತೆವಾಟಿಯಾ 2, ಕ್ರಿಸ್ ಮೋರಿಸ್ 14, ಕಾರ್ತಿಕ್ ತ್ಯಾಗಿ 1 ರನ್‌ನೊಂದಿಗೆ 20 ಓವರ್‌ಗೆ 9 ವಿಕೆಟ್‌ ಕಳೆದು 149 ರನ್ ಗಳಿಸಿತ್ತು.

'ಮತ್ತೊಮ್ಮೆ ಕಪ್ ಗೆದ್ದು ಇತಿಹಾಸ ಸೃಷ್ಟಿಸೋಣ' ಎಂದು ರೋಹಿತ್ ಶರ್ಮಾಗೆ ಹೇಳಿದ ಸೂರ್ಯಕುಮಾರ್ ಯಾದವ್'ಮತ್ತೊಮ್ಮೆ ಕಪ್ ಗೆದ್ದು ಇತಿಹಾಸ ಸೃಷ್ಟಿಸೋಣ' ಎಂದು ರೋಹಿತ್ ಶರ್ಮಾಗೆ ಹೇಳಿದ ಸೂರ್ಯಕುಮಾರ್ ಯಾದವ್

ಗುರಿ ಬೆನ್ನಟ್ಟಿದ ಬೆಂಗಳೂರು, ವಿರಾಟ್ ಕೊಹ್ಲಿ 25, ದೇವದತ್ ಪಡಿಕ್ಕಲ್ 22, ಶ್ರೀಕರ್ ಭರತ್ 44, ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 50, ಎಬಿ ಡಿ ವಿಲಿಯರ್ಸ್ ಅಜೇಯ 4 ರನ್‌ನೊಂದಿಗೆ 17.1 ಓವರ್‌ಗೆ 3 ವಿಕೆಟ್‌ ಕಳೆದು 153 ರನ್‌ ಗಳಿಸಿ 7 ವಿಕೆಟ್ ಗೆಲುವನ್ನಾಚರಿಸಿತು.

ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!ಐಪಿಎಲ್ 2021: ಟೂರ್ನಿ ಮಧ್ಯದಲ್ಲಿಯೇ ಮುಂಬೈ ಇಂಡಿಯನ್ಸ್‌ನಿಂದ ಅರ್ಜುನ್ ತೆಂಡೂಲ್ಕರ್ ಔಟ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಬೆಂಚ್: ಕೈಲ್ ಜೇಮೀಸನ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI
ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (c & wk), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್.
ಬೆಂಚ್: ತಬ್ರೇಜ್ ಶಮ್ಸಿ, ಶ್ರೇಯಸ್ ಗೋಪಾಲ್, ಡೇವಿಡ್ ಮಿಲ್ಲರ್, ಮನನ್ ವೊಹ್ರಾ, ಕೆಸಿ ಕಾರಿಯಪ್ಪ, ಗ್ಲೆನ್ ಫಿಲಿಪ್ಸ್, ಶಿವಂ ದೂಬೆ, ಓಶಾನೆ ಥಾಮಸ್, ಮಯಾಂಕ್ ಮಾರ್ಕಂಡೆ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಕುಲ್‌ದೀಪ್ ಯಾದವ್, ಆಕಾಶ್ ಸಿಂಗ್, ಜಯದೇವ್ ಉನಾದ್ಕತ್.

For Quick Alerts
ALLOW NOTIFICATIONS
For Daily Alerts
Story first published: Wednesday, September 29, 2021, 23:59 [IST]
Other articles published on Sep 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X