ಐಪಿಎಲ್ : ಕಳೆದ ಬಾರಿ ಅತಿ ಹೆಚ್ಚು ಅರ್ಧ ಶತಕ ಬಾರಿಸಿದವರ ಪಟ್ಟಿ

ಈ ಬಾರಿಯ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇದೇ ಶುಕ್ರವಾರ ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ. ಕಳೆದ ಬಾರಿಯ ಐಪಿಎಲ್ ಯುಎಇಯಲ್ಲಿ ನಡೆಯಿತು. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡಿ ಮಿಂಚಿದರು.
ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಉತ್ತಮ ಬ್ಯಾಟಿಂಗ್ ಮಾಡುವುದರ ಮೂಲಕ ಅತಿ ಹೆಚ್ಚು ಅರ್ಧ ಶತಕ ಸಿಡಿಸಿದ ಟಾಪ್ 10 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದರು. ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಸಹ ತಲಾ 4 ಅರ್ಧಶತಕಗಳನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಿಡಿಸಿದ್ದರು.
ಇವರ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದೇವದತ್ ಪಡಿಕ್ಕಲ್ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿಯೇ ಎಲ್ಲರ ಗಮನ ಸೆಳೆಯುವಂಥ ಬ್ಯಾಟಿಂಗ್ ಮಾಡಿದರು. ಪಡಿಕ್ಕಲ್ ಕೂಡ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್ 10 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ಮಿಂಚಿದ್ದರು.
2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ.

5. ಡೇವಿಡ್ ವಾರ್ನರ್
ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಡೇವಿಡ್ ವಾರ್ನರ್ 16 ಇನ್ನಿಂಗ್ಸ್‌ಗಳಲ್ಲಿ 4 ಅರ್ಧ ಶತಕಗಳನ್ನು ಬಾರಿಸುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್ 5 ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದರು.

4. ಶಿಖರ್ ಧವನ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ 2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. 17 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ಬಾರಿಸಿದ್ದು 4 ಅರ್ಧಶತಕ.

3. ಎಬಿ ಡಿ ವಿಲಿಯರ್ಸ್
ಮಿ.360 ಎಬಿ ಡಿವಿಲಿಯರ್ಸ್ 2020ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದರು. 14 ಇನ್ನಿಂಗ್ಸ್‌ಗಳನ್ನು ಆಡಿದ್ದ ಎಬಿ ಡಿವಿಲಿಯರ್ಸ್ 5 ಅರ್ಧಶತಕಗಳನ್ನು ಬಾರಿಸಿದ್ದರು.

2. ದೇವದತ್ ಪಡಿಕ್ಕಲ್
2020ರ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ ದೇವದತ್ ಪಡಿಕ್ಕಲ್ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿಯೇ ಭರ್ಜರಿ ಬ್ಯಾಟಿಂಗ್ ಮಾಡಿ ಮಿಂಚಿದರು. ಪಡಿಕ್ಕಲ್ 15 ಇನ್ನಿಂಗ್ಸ್‌ಗಳಲ್ಲಿ 5 ಅರ್ಧಶತಕ ಬಾರಿಸುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು.

1. ಕೆ ಎಲ್ ರಾಹುಲ್
ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದ ಕೆ ಎಲ್ ರಾಹುಲ್ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರ ಎಂಬ ಪಟ್ಟಿಯಲ್ಲಿಯೂ ಸಹ ಅಗ್ರಸ್ಥಾನದಲ್ಲಿದ್ದರು. 14 ಇನ್ನಿಂಗ್ಸ್‌ಗಳನ್ನಾಡಿದ್ದ ಕೆ ಎಲ್ ರಾಹುಲ್ 5 ಅರ್ಧಶತಕಗಳನ್ನು ಸಿಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications