ಐಪಿಎಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ ರೋಹಿತ್ ಶರ್ಮಾ

ರೋಹಿತ್ ಶರ್ಮಾ ಐಪಿಎಲ್ ಇತಿಹಾಸ ಕಂಡ ಅತ್ಯುತ್ತಮ ಆಟಗಾರ ಮತ್ತು ಅತ್ಯುತ್ತಮ ನಾಯಕರಲ್ಲಿ ಒಬ್ಬರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬರೋಬ್ಬರಿ 5 ಐಪಿಎಲ್ ಟ್ರೋಫಿಗಳನ್ನು ಗೆಲ್ಲುವ ಮೂಲಕ ಅತಿ ಹೆಚ್ಚು ಟ್ರೋಫಿ ಗೆದ್ದಿರುವ ತಂಡ ಎಂಬ ಖ್ಯಾತಿಯನ್ನು ಗಳಿಸಿದೆ. ಈ ಮೂಲಕ ರೋಹಿತ್ ಶರ್ಮಾ ಐಪಿಎಲ್ ಇತಿಹಾಸ ಕಂಡ ಅತ್ಯುತ್ತಮ ನಾಯಕ ಎನಿಸಿಕೊಂಡಿದ್ದಾರೆ. ಇನ್ನು ನಾಯಕನಾಗಿ ಮಾತ್ರವಲ್ಲದೆ ಆಟಗಾರನಾಗಿಯೂ ಸಹ ರೋಹಿತ್ ಶರ್ಮಾ ಯಶಸ್ಸು ಗಳಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಆಟಗಾರನಾಗಿ ರೋಹಿತ್ ಶರ್ಮಾ 5400ಕ್ಕೂ ಹೆಚ್ಚು ರನ್ ಗಳಿಸಿದ್ದು ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿಯೂ ರೋಹಿತ್ ಶರ್ಮಾ ಯಶಸ್ವಿಯಾಗಿ ಆಟವಾಡುತ್ತಾ ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಗುರುವಾರ ( ಏಪ್ರಿಲ್ 23 ) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಆಡುವುದರ ಮೂಲಕ ಹೊಸ ಮೈಲಿಗಲ್ಲೊಂದನ್ನು ನಿರ್ಮಿಸಿದ್ದಾರೆ.
ಹೌದು ರೋಹಿತ್ ಶರ್ಮಾ ಐಪಿಎಲ್ ಇತಿಹಾಸದಲ್ಲಿಯೇ 200 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಮೊದಲ ಆಟಗಾರ ಎಂಬ ಹೊಸ ಮೈಲಿಗಲ್ಲನ್ನು ನೆಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಒಟ್ಟು 205 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 200 ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡುವ ಅವಕಾಶವನ್ನು ಪಡೆದು ಈ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಹೊರತುಪಡಿಸಿ ಸುರೇಶ್ ರೈನಾ 192, ವಿರಾಟ್ ಕೊಹ್ಲಿ 188, ಎಂಎಸ್ ಧೋನಿ 185 ಹಾಗೂ ರಾಬಿನ್ ಉತ್ತಪ್ಪ 182 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ್ದು ಅತ್ಯಧಿಕ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ಟಾಪ್ 5 ಆಟಗಾರರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications