ಐಪಿಎಲ್ : 2020ರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಆಟಗಾರರು
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇದೇ ತಿಂಗಳ 9ರಂದು ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈ ಬಾರಿಯ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ಸಮಯ ಉಳಿದಿದ್ದು ಕಳೆದ ಬಾರಿಯ ಐಪಿಎಲ್ ದಾಖಲೆಗಳ ಕುರಿತು ಸ್ವಲ್ಪ ತಿಳಿದುಕೊಳ್ಳೋಣ.
ಕಳೆದ ಬಾರಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಿತು. ಐಪಿಎಲ್ ಇತಿಹಾಸದಲ್ಲಿಯೇ ಅದೇ ಮೊದಲ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೈನಲ್ ಪ್ರವೇಶಿಸಿತ್ತು. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 157 ರನ್‌ಗಳ ಗುರಿ ನೀಡಿತ್ತು. ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ ಗುರಿ ಅಷ್ಟೇನೂ ಕಷ್ಟಕರವಾಗಿರಲಿಲ್ಲ. ಇನ್ನೂ 8 ಎಸೆತಗಳು ಬಾಕಿ ಉಳಿದಿರುವಾಗಲೇ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ್ದ 157 ರನ್‌ಗಳ ಗುರಿಯನ್ನು 5 ವಿಕೆಟ್ ಕಳೆದುಕೊಂಡು ತಲುಪುವ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿಯಿತು. ಚಾಂಪಿಯನ್ಸ್ ಆಗಿ ಹೊರಹೊಮ್ಮಿದ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಇದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಕೂಡ ಒಂದು.
ಯುಎಇಯಲ್ಲಿ ನಡೆದ 13ನೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

5. ಇಯಾನ್ ಮಾರ್ಗನ್ : 24 ಸಿಕ್ಸರ್
2020ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಕೊಲ್ಕತಾ ನೈಟ್ ರೈಡರ್ಸ್ ತಂಡದ ಇಯಾನ್ ಮಾರ್ಗನ್ 14 ಇನ್ನಿಂಗ್ಸ್ ಆಡಿ 24 ಸಿಕ್ಸರ್ ಬಾರಿಸಿದರು. ಈ ಮೂಲಕ 2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮಾರ್ಗನ್ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

4. ನಿಕೋಲಸ್ ಪೂರನ್ : 25 ಸಿಕ್ಸರ್
ಕಿಂಗ್ಸ್ ಇಲೆವೆನ್ ಪಂಜಾಬ್ ( ಈಗಿನ ಪಂಜಾಬ್ ಕಿಂಗ್ಸ್ ) ತಂಡದ ಆಟಗಾರ ನಿಕೋಲಸ್ ಪೂರನ್ 2020ರಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ 14 ಪಂದ್ಯಗಳನ್ನು ಆಡಿ 25 ಸಿಕ್ಸರ್ ಬಾರಿಸಿದ್ದರು. 2020ರ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನಿಕೋಲಸ್ ಪೂರನ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

3. ಹಾರ್ದಿಕ್ ಪಾಂಡ್ಯ : 25 ಸಿಕ್ಸರ್
ಕಳೆದ ಬಾರಿಯ ಐಪಿಎಲ್ ಟೂರ್ನಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ 2020ರ ಐಪಿಎಲ್ ಟೂರ್ನಿಯಲ್ಲಿ 13 ಇನ್ನಿಂಗ್ಸ್ ಆಡಿ 25 ಸಿಕ್ಸ್ ಬಾರಿಸುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

2. ಸಂಜು ಸ್ಯಾಮ್ಸನ್ : 26 ಸಿಕ್ಸರ್
ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 14 ಇನ್ನಿಂಗ್ಸ್‌ಗಳನ್ನಾಡಿ 26 ಸಿಕ್ಸರ್ ಬಾರಿಸುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

1. ಇಶಾನ್ ಕಿಶನ್ : 30 ಸಿಕ್ಸರ್
2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಇಶಾನ್ ಕಿಶನ್ ಆ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದರು. 13 ಇನ್ನಿಂಗ್ಸ್‌ಗಳಲ್ಲಿ ಆಡಿದ್ದ ಇಶಾನ್ ಕಿಶನ್ 30 ಸಿಕ್ಸರ್ ಸಿಡಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications