ಐಪಿಎಲ್ : ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿ
ಈ ಬಾರಿಯ ಐಪಿಎಲ್ ಆರಂಭಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದ್ದು ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲಾಯಿತು. ಭಾರತದ ಬೌಲರ್‌ಗಳಿಗಿಂತ ವಿದೇಶಿ ಬೌಲರ್‌ಗಳೇ ಹೆಚ್ಚಿನ ವಿಕೆಟ್ ತೆಗೆದುಕೊಳ್ಳುವುದರ ಮೂಲಕ ಮಿಂಚಿದರು.
ಇವರುಗಳ ಜೊತೆ ಭಾರತದ ಯುವ ಆಟಗಾರರಾದ ಟಿ ನಟರಾಜನ್ 16 ವಿಕೆಟ್ ಮತ್ತು ವರುಣ್ ಚಕ್ರವರ್ತಿ 17 ವಿಕೆಟ್‍ಗಳನ್ನು ತೆಗೆದುಕೊಳ್ಳುವುದರ ಮೂಲಕ 2020ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡರು. ಇವರ ಜೊತೆಗೆ ಭಾರತೀಯ ಬೌಲರ್‌ಗಳಾದ ಮೊಹಮ್ಮದ್ ಶಮಿ ಮತ್ತು ಯುಜುವೇಂದ್ರ ಚಹಾಲ್ ಕೂಡ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದರು.
2020ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ.

5. ಯುಜವೇಂದ್ರ ಚಹಾಲ್ : 21 ವಿಕೆಟ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಯುಜವೇಂದ್ರ ಚಹಾಲ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳನ್ನಾಡಿ 21 ಕ್ರಿಕೆಟ್ ತೆಗೆದುಕೊಳ್ಳುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದರು.

4. ಅನ್ರಿಕ್ ನಾರ್ಕಿಯಾ : 22 ವಿಕೆಟ್ಸ್
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಅನ್ರಿಕ್ ನಾರ್ಕಿಯಾ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 16 ಪಂದ್ಯಗಳನ್ನಾಡಿ 22 ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದರು.

3. ಟ್ರೆಂಟ್ ಬೌಲ್ಟ್ : 25 ವಿಕೆಟ್ಸ್
ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಟ್ರೆಂಟ್ ಬೌಲ್ಟ್ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ 15 ಪಂದ್ಯಗಳಲ್ಲಿ ಬೌಲಿಂಗ್ ಮಾಡಿ 25 ವಿಕೆಟ್‍ಗಳನ್ನು ಪಡೆದುಕೊಳ್ಳುವುದರ ಮೂಲಕ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದರು.

2. ಜಸ್‌ಪ್ರೀತ್ ಬೂಮ್ರಾ : 27 ವಿಕೆಟ್ಸ್
ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಮತ್ತೊಬ್ಬ ಬೌಲರ್ ಜಸ್‌ಪ್ರೀತ್ ಬೂಮ್ರಾ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದರು. 15 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಜಸ್‌ಪ್ರೀತ್ ಬೂಮ್ರಾ 27 ವಿಕೆಟ್‍ಗಳನ್ನು ಪಡೆದುಕೊಳ್ಳುವುದರ ಮೂಲಕ ಆ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು.

1. ಕಗಿಸೊ ರಬಾಡ : 30 ವಿಕೆಟ್ಸ್
ಕಳೆದ ಬಾರಿಯ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಕಗಿಸೊ ರಬಾಡ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದರು. 17 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಕಗಿಸೊ ರಬಾಡ 30 ವಿಕೆಟ್‍ಗಳನ್ನು ಪಡೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications