ಐಪಿಎಲ್ 2021: ಅತಿಹೆಚ್ಚು ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಟಾಪ್ 5 ಡೇಂಜರಸ್ ಬ್ಯಾಟ್ಸ್‌ಮನ್‌ಗಳ ಪಟ್ಟಿ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಅಂತಿಮ ಘಟ್ಟಕ್ಕೆ ತಲುಪಿದ್ದು, ಟೂರ್ನಿಯ ಫೈನಲ್ ಪಂದ್ಯ ಇಂದು ( ಅಕ್ಟೋಬರ್ 15 ) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ ಮತ್ತು ಮೊಯಿನ್ ಅಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್‌ಗಳ ಜಯ ಸಾಧಿಸುವುದರ ಮೂಲಕ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಲ ನೂತನ ಆಟಗಾರರು ತಮ್ಮ ಪ್ರತಿಭೆಯನ್ನು ಹೊರಹಾಕಿದರೆ, ಇನ್ನೂ ಕೆಲ ಅಂತರರಾಷ್ಟ್ರೀಯ ಕ್ರಿಕೆಟಿಗರು ಉತ್ತಮ ಫಾರ್ಮ್ ಕಂಡುಕೊಳ್ಳುವುದರ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಹೌದು, ಕೋಲ್ಕತಾ ನೈಟ್ ರೈಡರ್ಸ್ ತಂಡದ ವೆಂಕಟೇಶ್ ಐಯ್ಯರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಋತುರಾಜ್ ಗಾಯಕ್ವಾಡ್ ರೀತಿಯ ಯುವಪ್ರತಿಭೆಗಳಿಗೆ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಒಂದೊಳ್ಳೆ ವೇದಿಕೆಯಾಗಿದೆ. ಅತ್ತ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುವ ಮುನ್ನ ಫಾರ್ಮ್ ಕಳೆದುಕೊಂಡಿದ್ದ ಆಟಗಾರರಾದ ಸಂಜು ಸ್ಯಾಮ್ಸನ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ಇನ್ನೂ ಮುಂತಾದ ಕೆಲ ಆಟಗಾರರು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಯಶಸ್ಸಿನ ಹಾದಿಗೆ ಮರಳಿದ್ದಾರೆ.
ಹೀಗೆ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವಾರು ಬ್ಯಾಟ್ಸ್‌ಮನ್‌ಗಳು ಫಾರ್ಮ್ ಕಂಡುಕೊಂಡಿದ್ದು, ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ.

ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ
1. ಕೆಎಲ್ ರಾಹುಲ್ - 30 ಸಿಕ್ಸರ್
2. ಫಾಫ್ ಡು ಪ್ಲೆಸಿಸ್ - 23 ಸಿಕ್ಸರ್
3. ರುತುರಾಜ್ ಗಾಯಕ್ವಾಡ್ - 23 ಸಿಕ್ಸರ್
4. ಗ್ಲೆನ್ ಮ್ಯಾಕ್ಸ್‌ವೆಲ್ - 21 ಸಿಕ್ಸರ್
5. ಮೊಯಿನ್ ಅಲಿ - 19 ಸಿಕ್ಸರ್

ಅತಿ ಹೆಚ್ಚು ಬೌಂಡರಿ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ
1. ಋತುರಾಜ್ ಗಾಯಕ್ವಾಡ್ - 64 ಬೌಂಡರಿ
2. ಶಿಖರ್ ಧವನ್ - 63 ಬೌಂಡರಿ
3. ಫಾಫ್ ಡು ಪ್ಲೆಸಿಸ್ - 60 ಬೌಂಡರಿ
4. ಪೃಥ್ವಿ ಶಾ - 56 ಬೌಂಡರಿ
5. ಶುಬ್ಮನ್ ಗಿಲ್ - 50 ಬೌಂಡರಿ

ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ
1. ರುತುರಾಜ್ ಗಾಯಕ್ವಾಡ್ - 635 ರನ್
2. ಫಾಫ್ ಡು ಪ್ಲೆಸಿಸ್ - 633 ರನ್
3. ಕೆಎಲ್ ರಾಹುಲ್ - 626 ರನ್
4. ಶಿಖರ್ ಧವನ್ - 587 ರನ್
5. ಗ್ಲೆನ್ ಮ್ಯಾಕ್ಸ್‌ವೆಲ್ - 513 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications