ಮ್ಯಾಕ್ಸ್‌ವೆಲ್ ಸಿಕ್ಸ್ ದಾಖಲೆ ಮುರಿದ ಕೀರನ್ ಪೊಲಾರ್ಡ್

ಶನಿವಾರ ( ಏಪ್ರಿಲ್ 17 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದವು. ಮುಂಬೈ ಇಂಡಿಯನ್ಸ್ ತಂಡದ ಬೌಲರ್‌ಗಳ ಅದ್ಭುತ ಪ್ರದರ್ಶನದ ನೆರವಿನಿಂದ 13 ರನ್‌ಗಳ ಜಯಗಳಿಸಿತು. ಮುಂಬೈ ತಂಡದ ಪರ ಅತ್ಯುತ್ತಮ ಆಟವನ್ನಾಡಿದ ಕೀರನ್ ಪೊಲಾರ್ಡ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು. 22 ಎಸೆತಗಳನ್ನು ಎದುರಿಸಿದ ಕೀರನ್ ಪೊಲಾರ್ಡ್ 35 ರನ್ ಗಳಿಸಿದರು. ಕೀರನ್ ಪೊಲಾರ್ಡ್ ಅವರ ಈ ಇನ್ನಿಂಗ್ಸ್ ಒಂದು ಬೌಂಡರಿ ಮತ್ತು ಮೂರು ಸಿಕ್ಸ್‌ಗಳನ್ನೊಳಗೊಂಡಿತ್ತು. ಈ ಪಂದ್ಯದಲ್ಲಿ ಪೊಲಾರ್ಡ್ 105 ಮೀಟರ್ ಸಿಕ್ಸರ್ ಸಿಡಿಸುವುದರ ಮೂಲಕ 2021ರ ಐಪಿಎಲ್ ಟೂರ್ನಿಯ ಅತಿ ದೊಡ್ಡ ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಮುಜೀಬ್ ಉರ್ ರಹಮಾನ್ ಓವರ್‌ನಲ್ಲಿ ಪೊಲಾರ್ಡ್ ಈ 105 ಮೀ. ಸಿಕ್ಸರ್ ಸಿಡಿಸುವುದರ ಮೂಲಕ ಟೂರ್ನಿಯಲ್ಲಿ ಮ್ಯಾಕ್ಸ್‌ವೆಲ್ ಸಿಡಿಸಿದ್ದ ಸಿಕ್ಸರ್ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಮುಂಬೈ ಇಂಡಿಯನ್ಸ್ ವಿರುದ್ಧ 100 ಮೀ. ಉದ್ದದ ಸಿಕ್ಸರ್ ಸಿಡಿಸಿದ್ದರು. ಕೃನಾಲ್ ಪಾಂಡ್ಯ ಓವರ್‌ನಲ್ಲಿ ಮ್ಯಾಕ್ಸ್‌ವೆಲ್ ಸಿಡಿಸಿದ್ದ 100ಮೀ. ಸಿಕ್ಸರ್ ಈ ಬಾರಿಯ ಐಪಿಎಲ್ ಟೂರ್ನಿಯ ಅತಿ ಉದ್ದದ ಸಿಕ್ಸರ್ ಆಗಿತ್ತು. ಆದರೆ ಹೈದರಾಬಾದ್ ತಂಡದ ವಿರುದ್ಧ ಪೊಲಾರ್ಡ್ 105 ಮೀ ಸಿಕ್ಸರ್ ಸಿಡಿಸುವ ಮೂಲಕ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಅತಿ ಉದ್ದದ ಟಾಪ್ 5 ಸಿಕ್ಸರ್ ಬಗೆಗಿನ ಮಾಹಿತಿ ಈ ಕೆಳಕಂಡಂತಿದೆ ನೋಡಿ

1. ಕೀರನ್ ಪೊಲಾರ್ಡ್
ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಆಟಗಾರ ಪೊಲಾರ್ಡ್ 105 ಮೀ ಸಿಕ್ಸರ್ ಸಿಡಿಸುವ ಮೂಲಕ 2021ರ ಐಪಿಎಲ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿರುವ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

2. ಗ್ಲೆನ್ ಮ್ಯಾಕ್ಸ್‌ವೆಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗ್ಲೆನ್ ಮ್ಯಾಕ್ಸ್‌ವೆಲ್ 100 ಮೀ ಉದ್ದದ ಸಿಡಿಸಿದ್ದು 2021ರ ಐಪಿಎಲ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3. ಸೂರ್ಯಕುಮಾರ್ ಯಾದವ್
ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್ 99 ಮೀ ಉದ್ದದ ಸಿಕ್ಸರ್ ಸಿಡಿಸುವ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

4. ಮನೀಷ್ ಪಾಂಡೆ
ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ 96 ಮೀ ಉದ್ದದ ಸಿಕ್ಸರ್ ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

5. ಅಬ್ದುಲ್ ಸಮದ್
ಸನ್ ರೈಸರ್ಸ್ ಹೈದರಾಬಾದ್ ತಂಡದ ಮತ್ತೊಬ್ಬ ಆಟಗಾರ ಅಬ್ದುಲ್ ಸಮದ್ 93 ಮೀ ಉದ್ದದ ಸಿಕ್ಸರ್ ಸಿಡಿಸುವುದರ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಉದ್ದದ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
ಈ ಮೇಲ್ಕಂಡ 2021ರ ಐಪಿಎಲ್ ಟೂರ್ನಿಯ ಟಾಪ್ 5 ಸಿಕ್ಸ್‌ಗಳ ಪಟ್ಟಿ ಏಪ್ರಿಲ್ 17 2021ರ ವರೆಗೆ ನಡೆದ ಐಪಿಎಲ್ ಪಂದ್ಯಗಳದ್ದಾಗಿದೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications