ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs RCB : ಮುಂಬೈ ವಿರುದ್ಧದ ಪಂದ್ಯದ ಮ್ಯಾಕ್ಸ್‌ವೆಲ್ ಇನ್ನಿಂಗ್ಸ್ ಬಗ್ಗೆ ಕೊಹ್ಲಿ ಪ್ರತಿಕ್ರಿಯೆ

IPL 2021 Match 1, MI vs RCB : Glenn Maxwells knock was Momentum changer says Virat kohli

ಈ ಬಾರಿಯ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 2 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಕಳೆದ ಬಾರಿ ಪಂಜಾಬ್ ತಂಡದ ಪರ ಆಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹರಾಜಿನಲ್ಲಿ 14.25 ಕೋಟಿ ರೂ ನೀಡಿ ಖರೀದಿ ಮಾಡಿತ್ತು. ಹೀಗಾಗಿ ಮ್ಯಾಕ್ಸ್‌ವೆಲ್ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು.

ಮುಂಬೈ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಬೆಂಗಳೂರು ತಂಡದ ಅಭಿಮಾನಿಗಳ ನಿರೀಕ್ಷೆಯನ್ನು ಉಳಿಸಿಕೊಂಡಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮ್ಯಾಕ್ಸ್‌ವೆಲ್ 28 ಎಸೆತಗಳಲ್ಲಿ 39 ರನ್ ಬಾರಿಸುವುದರ ಮೂಲಕ ಬೆಂಗಳೂರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಪಂದ್ಯ ಮುಗಿದ ನಂತರ ಮ್ಯಾಕ್ಸ್‌ವೆಲ್ ಆಟದ ಬಗ್ಗೆ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ಪ್ರಶಂಸೆ ವ್ಯಕ್ತಪಡಿಸಿದರು.

ಮ್ಯಾಕ್ಸ್‌ವೆಲ್ ಆಟ ಮಧ್ಯಮ ಓವರ್‌ಗಳಲ್ಲಿ ಎದುರಾಳಿಗಳ ಕೈನಿಂದ ಪಂದ್ಯವನ್ನು ಕಸಿದುಕೊಂಡಿತು, ಅಷ್ಟರಮಟ್ಟಿಗೆ ಮ್ಯಾಕ್ಸ್‌ವೆಲ್ ಅವರ ಇನಿಂಗ್ಸ್ ಪ್ರಬಲವಾಗಿತ್ತು ಎಂದು ಕೊಹ್ಲಿ ತಿಳಿಸಿದರು. ತಮ್ಮ ಮತ್ತು ಮ್ಯಾಕ್ಸ್‌ವೆಲ್ ನಡುವಿನ ಜೊತೆಯಾಟ ಪಂದ್ಯದಲ್ಲಿ ಆವೇಗ ಬದಲಾವಣೆಯನ್ನು ತಂದಿತು ಮತ್ತು ಕೊನೆಯ ಸಮಯದಲ್ಲಿ ಪಂದ್ಯವನ್ನು ಗೆಲ್ಲಲು ಸುಲಭವಾಯಿತು ಎಂದು ವಿರಾಟ್ ಕೊಹ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಮುಂಬೈ ವಿರುದ್ಧದ ಪಂದ್ಯದಲ್ಲಿ ನೀಡಿದ ಪ್ರದರ್ಶನದಂತೆಯೇ ಮುಂದಿನ ಪಂದ್ಯಗಳಲ್ಲಿಯೂ ಮ್ಯಾಕ್ಸ್‌ವೆಲ್ ಮಿಂಚುತ್ತಾರಾ ಮತ್ತು ದುಬಾರಿ ಬೆಲೆಗೆ ತಮ್ಮನ್ನು ಖರೀದಿಸಿದ್ದಕ್ಕೆ ನ್ಯಾಯ ಒದಗಿಸುತ್ತಾರಾ ಎಂಬುದನ್ನು ಕಾದು ನೋಡಬೇಕು.

Story first published: Saturday, April 10, 2021, 11:51 [IST]
Other articles published on Apr 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X