ಐಪಿಎಲ್ 2021: ಎಬಿಡಿ, ಮ್ಯಾಕ್ಸ್‌ವೆಲ್ ಭರ್ಜರಿ ಆಟ, ಕೆಕೆಆರ್‌ಗೆ 205 ರನ್‌ಗುರಿ

ಬೌಲರ್‌ಗಳು ಅಬ್ಬರಿಸುವ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ರನ್ ಮಳೆ ಹರಿಸಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಎಬಿ ಡಿವಿಲಿಯರ್ಸ್ ಆರ್ಭಟ ಆರ್‌ಸಿಬಿ ಅಭಿಮಾನಿಗಳಿಗೆ ರಸದೌತಣವನ್ನು ನೀಡಿದ್ದು ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 205 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಆರ್‌ಸಿಬಿ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟೀದಾರ್ ವರುಣ್ ಚಕ್ರವರ್ತಿ ಎಸೆದ ಇನ್ನಿಂಗ್ಸ್ ಎರಡನೇ ಓವರ್‌ನಲ್ಲಿ ಇಬ್ಬರೂ ವಿಕೆಟ್ ಕಳೆದುಕೊಂಡರು.
ಪಡಿಕ್ಕಲ್ ಜೊತೆಗೆ ಮೂರನೇ ವಿಕೆಟ್‌ಗೆ 86 ರನ್‌ಗಳ ಜೊತೆಯಾಟವನ್ನು ಆಡುವ ಮೂಲಕ ತಂಡ ಉತ್ತಮ ಮೊತ್ತದತ್ತ ಮುನ್ನುಗ್ಗಲು ಕಾರಣರಾದರು. ಬಳಿಕ ಮ್ಯಾಕ್ಸ್‌ವೆಲ್ ಹಾಗೂ ಎಬಿ ಡಿವಿಲಿಯರ್ಸ್ ಅರ್ಧ ಶತಕದ ಜೊತೆಯಾಟದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮ್ಯಾಕ್ಸ್‌ವೆಲ್ 78 ರನ್‌ಗಳಿಸಿ ಮುನ್ನುಗ್ಗುತ್ತಿದ್ದಾಗ ಪ್ಯಾಟ್ ಕಮ್ಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು. 49 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 3 ಸಿಕ್ಸರ್ ಹಾಗೂ 9 ಬೌಂಡರಿ ಸೇರಿತ್ತು.
ಮ್ಯಾಕ್ಸ್‌ವೆಲ್ ಇನ್ನಿಂಗ್ಸ್ ಅಂತ್ಯವಾದ ಬಳಿಕ ಎಬಿ ಡಿವಿಲಿಯರ್ಸ್ ಅಬ್ಬರ ಮತ್ತಷ್ಟು ಜೋರಾಯಿತು. ಕೇಲ್ ಜ್ಯಾಮಿಸನ್ ಜೊತೆ ಸೇರಿ ರನ್‌ವೇಗವನ್ನು ಮತ್ತಷ್ಟು ಹೆಚ್ಚಿಸಿದ ಎಬಿಡಿ ಕೇವಲ 34 ಎಸೆತಗಳಲ್ಲಿ 76 ರನ್ ಸಿಡಿಸಿ ಅಜೇಯವಾಗುಳಿದರು. 3 ಸಿಕ್ಸರ್ ಹಾಗೂ 9 ಬೌಂಡರಿಯನ್ನು ಬಾರಿಸಿದ್ದಾರೆ ಎಬಿ ಡಿವಿಲಿಯರ್ಸ್.
ಈ ಭರ್ಜರಿ ಆಟದ ನೆರವಿನಿಂದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 204 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications