ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

IPL 2021 match 13: Delhi capitals won the match against mumbai indians

ಐಪಿಎಲ್‌ನ ಮತ್ತೊಂದು ಜಿದ್ದಾಜಿದ್ದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು ಸಾಧಿಸಿದೆ.

ಮುಂಬೈ ಇಂಡಿಯನ್ಸ್ ನೀಡಿದ 138 ರನ್‌ಗಳ ಸುಲಭ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಶಿಖರ್ ಧವನ್ ಮತ್ತೊಂದು ಉತ್ತಮ ಇನ್ನಿಂಗ್ಸ್ ನೀಡಿದರು. ಸ್ಟೀವ್ ಸ್ಮಿತ್ ಹಾಗೂ ಲಲಿತ್ ಯಾದವ್ ಕೂಡ ಡೆಲ್ಲಿ ಗೆಲುವಿಗೆ ಬ್ಯಾಟಿಂಗ್‌ನಲ್ಲಿ ಕೊಡುಗೆ ನೀಡಿದರು.

ಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿಐಪಿಎಲ್ 2021: ಅಂಕಪಟ್ಟಿಯಲ್ಲಿ ಚೆನ್ನೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಡೆಲ್ಲಿ

ಮತ್ತೆ ಮಿಂಚಿದ ಧವನ್

ಮತ್ತೆ ಮಿಂಚಿದ ಧವನ್

ಪಂಜಾಬ್ ಕಿಂಗ್ಸ ವಿರುದ್ಧದ ಪಂದ್ಯದಲ್ಲಿ ಶತಕದ ಅಂಚಿನಲ್ಲಿ ಎಡವಿದ್ದ ಶಿಖರ್ ಧವನ್ ಮುಂಬೈ ಇಂಡಿಯನ್ಸ್ ವಿರುದ್ಧ 45 ರನ್‌ ಬಾರಿಸಿದರು. ಈ ಬ್ಯಾಟಿಂಗ್ ಎಂಎ ಚಿದಂಬರಂ ಸ್ಟೇಡಿಯಂನ ಕಠಿಣ ಪಿಚ್‌ನಲ್ಲಿ ಡೆಲ್ಲಿ ಗೆಲುವಿಗೆ ಪ್ರಮುಖ ಪಾತ್ರವಹಿಸಿತು. ಸ್ಟೀವ್ ಸ್ಮಿತ್ 33 ರನ್‌ಗಳ ಕೊಡುಗೆ ನೀಡಿದರೆ, ಲಲೊತ್ ಯಾದವ್ 22 ರನ್‌ಗಳನ್ನು ಗಳಿಸಿದರು. ಅಂತಿಮವಾಗಿ ಶಿಮ್ರಾನ್ ಹೇಟ್ಮೇಯರ್ 9 ಎಸೆತಗಳಲ್ಲಿ 14 ರನ್ ಬಾರಿಸಿ ಇನ್ನೂ 5 ಎಸೆತಗಳು ಉಳಿದಿರುವಂತೆಯೇ ಗೆಲುವನ್ನು ಸಾರಿದರು.

ರೋಹಿತ್ ಉತ್ತಮ ಆಟ

ರೋಹಿತ್ ಉತ್ತಮ ಆಟ

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಪರವಾಗಿ ನಾಯಕ ರೋಹಿತ್ ಶರ್ಮಾ ಉತ್ತಮ ಆಟವನ್ನು ಪ್ರದರ್ಶಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಮುಂಬೈ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಪ್ರದರ್ಶನ ಬಾರದ ಕಾರಣ ಮುಂಬೈ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲವಾಯಿತು.

ವಿಫಲವಾದ ಡೆಲ್ಲಿ ಬ್ಯಾಟ್ಸ್‌ಮನ್‌ಗಳು

ವಿಫಲವಾದ ಡೆಲ್ಲಿ ಬ್ಯಾಟ್ಸ್‌ಮನ್‌ಗಳು

ನಾಯಕ ರೋಹಿತ್ ವಿಕೆಟ್ ಪಡೆದ ನಂತರ ಡೆಲ್ಲಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತವನ್ನು ಸಾಧಸಿತು. ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಕಿರಾನ್ ಪೊಲಾರ್ಡ್, ಇಶಾನ್ ಕಿಶನ್, ಜಯಂತ್ ಯಾದವ್ ಒಬ್ಬರ ಹಿಂದೊಬ್ಬರಂತೆ ಫೆವಿಲಿಯನ್ ಹಾದಿ ಹಿಡಿದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ ಕೇವಲ 137 ರನ್‌ಗಳಿಸಲಷ್ಟೇ ಮುಂಬೈ ಶಕ್ತವಾಯಿತು.

Mohammed Siraj ಈ ವರ್ಷ ಒಂದು ವಿಚಾರದಲ್ಲಿ ನಂಬರ್ ಒನ್ ಬೌಲರ್ ಆಗಿದ್ದಾರೆ | Oneindia Kannada
ಮುಂಬೈಗೆ ಆಘಾತ ನೀಡಿದ ಮಿಶ್ರಾ

ಮುಂಬೈಗೆ ಆಘಾತ ನೀಡಿದ ಮಿಶ್ರಾ

ಡೆಲ್ಲಿ ಬೌಲಿಂಗ್‌ನಲ್ಲಿ ಅಮಿತ್ ಮಿಶ್ರಾ ಅಬ್ಬರಿಸಿದರು. ಮುಂಬೈ ತಂಡದ ಪ್ರಮುಖ ನಾಲ್ಕು ವಿಕೆಟ್‌ಗಳು ಮಿಶ್ರಾ ಪಾಲಾದವು. ಆವೇಶ್ ಖಾನ್ 2 ವಿಕೆಟ್ ಪಡೆದರೆ ಸ್ಟೋಯ್ನಿಸ್, ರಬಡಾ, ಲಲಿತ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

Story first published: Wednesday, April 21, 2021, 17:35 [IST]
Other articles published on Apr 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X